ಸಂಸದ ಒವೈಸಿಗೆ ಜಾಮೀನು
2005 ಇಸವಿಯಲ್ಲಿ ರಸ್ತೆ ಅಗಲೀಕರಣ ಕಾರ್ಯದ ವೇಳೆ ಮೇಡಕ್ ಜಿಲ್ಲಾಧಿಕಾರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಎಂಐಎಂ ಮುಖ್ಯಸ್ಥ ಹಾಗು ಹೈದ್ರಾಬಾದ್ ...
ಸಂಘರೆಡ್ಡಿ (ಆಂಧ್ರ ಪ್ರದೇಶ): 2005 ಇಸವಿಯಲ್ಲಿ ರಸ್ತೆ ಅಗಲೀಕರಣ ಕಾರ್ಯದ ವೇಳೆ ಮೇಡಕ್ ಜಿಲ್ಲಾಧಿಕಾರಿಗೆ ಬೆದರಿಕೆಯೊಡ್ಡಿದ ಆರೋಪದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಎಂಐಎಂ ಮುಖ್ಯಸ್ಥ ಹಾಗು ಹೈದ್ರಾಬಾದ್ ಸಂಸದ ಅಸಾವುದ್ದೀನ್ ಒವೈಸಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ.
ಈ ಮೊದಲು ಒವೈಸಿ ಅವರಿಗೆ ಫೆ.2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಅವರನ್ನು ಮೇಡಕ್ ಜಿಲ್ಲಾ ಕಾರಾಗೃಹದಲ್ಲಿರಿಸಲಾಗಿತ್ತು.
ಜೈಲು ಅಧಿಕಾರಿಗಳಿಗೆ ಜಾಮೀನು ಆದೇಶವನ್ನು ನೀಡಿದ ನಂತರ ಒವೈಸಿ ಅವರನ್ನು ಇಂದೇ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಜನವರಿ 25ಕ್ಕೆ ಹೈದ್ರಾಬಾದ್ನಲ್ಲಿ ನಡೆಯುವ ಸಮ್ಮೇಳನವೊಂದರಲ್ಲಿ ಭಾಗವಹಿಸಲು ಒವೈಸಿಗೆ ಅನುಮತಿ ನೀಡಬೇಕೆಂದು ಕೋರಿ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

