ಕೇದಾರನಾಥ ದೇವಾಲಯ ಪುನರ್ ನಿರ್ಮಾಣಕ್ಕೆ ಕಂಚಿ ಮಠ ಸಿದ್ಧ
ಪ್ರವಾಹದಿಂದ ಸಂಪೂರ್ಣ ಹಾಳಾಗಿರುವ ಉತ್ತರಾಖಂಡದ ಕೇದಾರನಾಥದ ಶಿವ ದೇವಾಲಯವನ್ನು ಪುನರ್ ನಿರ್ಮಾಣ ಮಾಡಲು..

ಕಾಂಚಿಪುರಂ: ಪ್ರವಾಹದಿಂದ ಸಂಪೂರ್ಣ ಹಾಳಾಗಿರುವ ಉತ್ತರಾಖಂಡದ ಕೇದಾರನಾಥದ ಶಿವ ದೇವಾಲಯವನ್ನು ಪುನರ್ ನಿರ್ಮಾಣ ಮಾಡಲು ಕಂಚಿ ಮಠ ಸಂಪೂರ್ಣ ಸಿದ್ಧವಿದೆ ಎಂದು ಮಠದ ಮುಖ್ಯಸ್ಥ ಜಯೇಂದ್ರ ಸರಸ್ವತಿ ಅವರು ಗುರುವಾರ ಹೇಳಿದ್ದಾರೆ.
ಅಗತ್ಯ ಬಿದ್ದರೆ ಪ್ರವಾಹದಿಂದ ದೇವಸ್ಥಾನಕ್ಕೆ ಆದ ನಷ್ಟದ ಬಗ್ಗೆ ಮೌಲ್ಯಮಾಪನ ಮಾಡುವ ವ್ಯವಸ್ಥೆಯನ್ನು ಮಠ ಮಾಡಲಿದೆ. ಕೇದಾರನಾಥ ದೇವಾಲಯ ನಮ್ಮ ದೇಶದ ಪರಂಪರೆಯ ಮತ್ತು ಸಂಸ್ಕೃತಿಯ ಪ್ರತೀಕ ಎಂದು ಜಯೇಂದ್ರ ಸರಸ್ವತಿ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಕೇದಾರನಾಥ ದೇವಾಲಯದ ಪುನರ್ ನಿರ್ಮಾಣಕ್ಕೆ ಭಾರತೀಯ ಪುರಾತತ್ವ ಇಲಾಖೆ ಅಥವಾ ಇತರ ಯಾವುದಾದರು ಧಾರ್ಮಿಕ ಸಂಸ್ಥೆಯ ನೆರವು ಪಡೆದುಕೊಳ್ಳವಂತೆ ಉತ್ತರಾಖಂಡ ಸರ್ಕಾರಕ್ಕೆ ಕಂಚಿ ಮಠ ಸಲಹೆ ನೀಡಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


