ವೃತ್ತಿ ಜೀವನವು ಸಂತಾನೋತ್ಪತ್ತಿ ಸಾಮರ್ಥ್ಯದ ಮೇಲೆ ಪರಿಣಾಮ ಬೀರುವುದೇ?
ವೃತ್ತಿ ಜೀವನದ ಗುರಿ, ಆಯ್ಕೆಗಳು ಮಹಿಳೆ ಹಾಗೂ ಪುರುಷರಲ್ಲಿನ ಸಂತಾನೋತ್ಪತ್ತಿ ಸಾಮರ್ಥ್ಯದ ಮೇಲೆ ಗಣನೀಯ ಪರಿಣಾಮ ಬೀರಲಿದೆ.

Published On :
ವಾಷಿಂಗ್ ಟನ್: ವೃತ್ತಿ ಜೀವನದ ಗುರಿ, ಆಯ್ಕೆಗಳು ಮಹಿಳೆ ಹಾಗೂ ಪುರುಷರಲ್ಲಿನ ಸಂತಾನೋತ್ಪತ್ತಿ ಸಾಮರ್ಥ್ಯದ ಮೇಲೆ ಗಣನೀಯ ಪರಿಣಾಮ ಬೀರಲಿದೆ.
ಟೇಲರ್ & ಫ್ರಾನ್ಸಿಸ್ ನಲ್ಲಿ ನಡೆದ ಸಂಶೋಧನೆಯಲ್ಲಿ ವಿದ್ಯಾರ್ಥಿಗಳನ್ನು ಸಂದರ್ಶಿಸಲಾಗಿದ್ದು, ವೃತ್ತಿ ಜೀವನದ ಗುರಿಗಳನ್ನು ತಲುಪಿಯೂ ಬಂಜೆತನ ಕಾಡುವುದಕ್ಕೆ ಮೊದಲೇ ಮಕ್ಕಳನ್ನು ಪಡೆಯುವುದು ಮಹಿಳೆ ಹಾಗೂ ಪುರುಷರು ಇಬ್ಬರಿಗೂ ಮುಖ್ಯವಾಗಿರುತ್ತದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಮಕ್ಕಳನ್ನು ಪಡೆಯುವುದಕ್ಕೂ ಮುನ್ನವೇ ತಮ್ಮ ವೃತ್ತಿ ಜೀವನದಲ್ಲಿ ಸಾಧನೆ ಮಾಡಿರಬೇಕೆಂಬುದು ಬಹುತೇಕ ಭಾವಿ ಪೋಷಕರ ಅಭಿಪ್ರಾಯವಾಗಿದೆ. ಬಹುತೇಕ ವಿದ್ಯಾರ್ಥಿಗಳು ವಯಸ್ಸಿಗೆ ಅನುಗುಣವಾಗಿ ಪುರುಷ-ಮಹಿಳೆಯರ ಸಂತಾನೋತ್ಪತ್ತಿ ಸಾಮರ್ಥ್ಯವನ್ನು ಅಂದಾಜಿಸಲು ಈ ಸಮೀಕ್ಷೆಯಲ್ಲಿ ಯತ್ನಿಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸಿದ್ದ ಅರ್ಧಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಹಿಳೆಯರ ವಯಸ್ಸು-ಸಂತಾನೋತ್ಪತ್ತಿ ಸಾಮರ್ಥ್ಯವನ್ನು ನಿಖರವಾಗಿ ಗುರುತಿಸಿದ್ದರೆ, ಕೆಲವರು ಪುರುಷರ ವಯಸಿಗೆ ಅನುಗುಣವಾಗಿ ಸಂತಾನೋತ್ಪತ್ತಿ ಸಾಮರ್ಥ್ಯವನ್ನು ಗುರುತಿಸಿದ್ದಾರೆ.
ಮಹಿಳೆಯರ ಸಂತಾನೋತ್ಪತ್ತಿ ಸಾಮರ್ಥ್ಯ 35-39 ವಯಸ್ಸಿನ ನಡುವೆ ಕುಗ್ಗುತ್ತದೆ ಎಂಬುದನ್ನು ಶೇ. 38 ರಷ್ಟು ಪುರುಷರು ಹಾಗೂ ಶೇ.45 ರಷ್ಟು ಮಹಿಳೆಯರು ಸರಿಯಾಗಿ ಗುರುತಿಸಿದ್ದು, 45-49 ವಯಸ್ಸಿನ ನಡುವೆ ಪುರುಷರ ಸಂತಾನೋತ್ಪತ್ತಿ ಸಾಮರ್ಥ್ಯ ಕ್ಷೀಣಿಸಲು ಪ್ರಾರಂಭವಾಗುತ್ತದೆ ಎಂಬುದನ್ನು ಶೇ.18.3 ರಷ್ಟು ಪುರುಷರು ಹಾಗೂ 16.9 ಮಹಿಳೆಯರು ನಿಖರವಾಗಿ ಹೇಳಿದ್ದಾರೆ.
ಸಮೀಕ್ಷೆಯಲ್ಲಿ ಭಾಗವಹಿಸಿದ್ದವರ ಪೈಕಿ ಶೇ.10 ರಷ್ಟು ವಿದ್ಯಾರ್ಥಿಗಳು ಮಕ್ಕಳನ್ನು ಪಡೆಯದೇ ಇರಲು ನಿರ್ಧರಿಸಿದ್ದು, ಶೇ.75 ರಷ್ಟು ಒಂದು ಅಥವಾ ಎರಡು ಮಕ್ಕಳನ್ನು ಪಡೆಯಲು ಬಯಸಿದ್ದಾರೆ. ಸ್ಥಿರ ಸಂಬಂಧ ಹಾಗೂ ಜವಾಬ್ದಾರಿಗಳನ್ನು ಹಂಚಿಕೊಳ್ಳುವ ಸಂಗಾತಿಯ ಆಯ್ಕೆಯನ್ನು ಬಹುತೇಕ ವಿದ್ಯಾರ್ಥಿಗಳು ಮಕ್ಕಳನ್ನು ಪಡೆಯುವುದಕ್ಕೂ ಮುನ್ನ ನೀಡಬೇಕಾದ ಪ್ರಾಮುಖ್ಯತೆಗಳೆಂದು ಹೇಳಿದ್ದಾರೆ.
ವೃತ್ತಿ ಜೀವನದ ಗುರಿ- ಸಂತಾನೋತ್ಪತ್ತಿ ಸಾಮರ್ಥ್ಯದ ಮಿತಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಸಂಶೋಧಕರಾದ ಡಾ.ಯುಜೆನಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


