ಚಿಟಿಕೆಯಷ್ಟು ಮೆಣಸು ಬಳಸಿ, ಸ್ಥೂಲಕಾಯಕ್ಕೆ ಹೇಳಿ ಗುಡ್ ಬೈ!
ಭಾರತೀಯ ಆಹಾರ ಪದ್ಧತಿ ನಾಲಿಗೆಗೆ ರುಚಿ ನೀಡುವುದು ಮಾತ್ರವಲ್ಲದೇ ಆರೋಗ್ಯಕ್ಕೂ ಉತ್ತಮವಾಗಿರುತ್ತದ್ದು, ಕರಿ ಮೆಣಸು ರುಚಿಗೂ, ಆರೋಗ್ಯಕ್ಕೂ ಉತ್ತಮವಾಗಿರುವ ಪ್ರಮುಖ ಪದಾರ್ಥಗಳಲ್ಲಿ ಒಂದಾಗಿದೆ.

Published On :
ನವದೆಹಲಿ: ಭಾರತೀಯ ಆಹಾರ ಪದ್ಧತಿ ನಾಲಿಗೆಗೆ ರುಚಿ ನೀಡುವುದು ಮಾತ್ರವಲ್ಲದೇ ಆರೋಗ್ಯಕ್ಕೂ ಉತ್ತಮವಾಗಿರುತ್ತದ್ದು, ಕರಿ ಮೆಣಸು ರುಚಿಗೂ, ಆರೋಗ್ಯಕ್ಕೂ ಉತ್ತಮವಾಗಿರುವ ಪ್ರಮುಖ ಪದಾರ್ಥಗಳಲ್ಲಿ ಒಂದಾಗಿದೆ.
ವಿಟಮೀನ್ ಎ, ಸಿ ಹಾಗೂ ಕೆ, ಖನಿಜಾಂಶಗಳನ್ನು ಹೊಂದಿರುವ ಕರಿ ಮೆಣಸನ್ನು ಆಹಾರ ಪದಾರ್ಥಗಳಲ್ಲಿ ಬಳಕೆ ಮಾಡುವುದರಿಂದ ಸ್ಥೂಲಕಾಯ ಬಾರದಂತೆ ತಡೆಗಟ್ಟಬಹುದಾಗಿದೆ. ವಿಟಮೀನ್ ಗಳಷ್ಟೇ ಅಲ್ಲದೇ ಆರೋಗ್ಯಕರ ಕೊಬ್ಬಿನಾಮ್ಲಗಳು, ನೈಸರ್ಗಿಕ ಚಯಾಪಚಯ ಬೂಸ್ಟರ್ ಅಂಶಗಳನ್ನೂ ಹೊಂದಿದ್ದು, ತೂಕ ಕಡಿಮೆ ಮಾಡುವುದಕ್ಕೆ ಸಹಕಾರಿಯಾಗಿದೆ.
ಕರಿ ಮೆಣಸನ್ನು ನಿಯಮಿತವಾಗಿ ಬಳಸುವುದರಿಂದ ಕ್ಯಾಲೊರಿಗಳನ್ನು ಕಡಿಮೆ ಮಾಡಬಹುದಾಗಿದ್ದು, ಕೊಬ್ಬಿನ ಅಂಶವಿರುವ ಹೊಸ ಸೆಲ್ ಕೋಶಗಳನ್ನು ನಾಶ ಮಾಡುವುದಕ್ಕೆ ಸಹಕಾರಿಯಾಗಿದೆ. ಕ್ಲಿನಿಕಲ್ ಆಹಾರ ಪದ್ಧತಿ ಮತ್ತು ಪೌಷ್ಟಿಕಾಂಶ ತಜ್ಞ ಅಗರ್ವಾಲ್ ಈ ಬಗ್ಗೆ ಮಾಹಿತಿ ನೀಡಿದ್ದು, ಮೆಣಸನ್ನು ಹೇಗೆ ಸೇವಿಸಬೇಕೆಂಬ ಬಗ್ಗೆ ಸಲಹೆ ನೀಡಿದ್ದಾರೆ.
- ಮೆಣಸನ್ನು ನುಂಗಬಹುದು ಅಥವಾ ಅಗಿಯಬಹುದು: ಪ್ರತಿದಿನ ಬೆಳಿಗ್ಗೆ 1-2 ಕಾಳು ಮೆಣಸನ್ನು ಸೇವಿಸಬಹುದಾಗಿದೆ.
- ಕರಿ ಮೆಣಸಿನ ಟೀ: ಬ್ಲಾಕ್ ಪೆಪ್ಪರ್ ಟೀ ಸೇವಿಸುವುದೂ ಸಹ ಅರೋಗ್ಯಕ್ಕೆ ಉತ್ತಮವಾಗಿದೆ.
- ಹಣ್ಣುಗಳಿಗೆ ಕಾಳು ಮಣಸನ್ನು ಹಾಕಿ ಸೇವಿಸುವುದರಿಂದ ರುಚಿ ಹಾಗೂ ಆರೋಗ್ಯಕ್ಕೆ ಸಕಾರಾತ್ಮಕವಾಗಿರುತ್ತದೆ.
- ಬೇಸಿಗೆಯಲ್ಲಿ ಮೆಣಸನ್ನು ಸೇರಿಸಿದ ಮಜ್ಜಿಗೆ ಕುಡಿಯುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬಹುದಾಗಿದೆ,
- ಬ್ಲ್ಯಾಕ್ ಪೆಪ್ಪರ್ ಆಯಿಲ್: ಬೆಳಗಿನ ಉಪಹಾರಕ್ಕೂ ಮುನ್ನ ಶುದ್ಧ ಬ್ಲ್ಯಾಕ್ ಪೆಪ್ಪರ್ ಆಯಿಲ್ ನ್ನು ನೀರಿಗೆ ಹಾಕಿ ಸೇವಿಸುವುದೂ ಸಹ ಆರೋಗ್ಯಕ್ಕೆ ಉತ್ತಮವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


