ಉಪ ಚುನಾವಣೆ ಫಲಿತಾಂಶ Live: ಸ್ಪಷ್ಟ ಬಹುಮತದತ್ತ ಬಿಜೆಪಿ, ವಿಶ್ವನಾಥ್'ಗೆ ಭಾರೀ ಮುಖಭಂಗ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದು ಕರೆಯಲ್ಪಡುತ್ತಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.

| ಪಕ್ಷಗಳು | ಮುನ್ನಡೆ | ಗೆಲುವು | ಒಟ್ಟು |
| ಬಿಜೆಪಿ | 12 | 5 | 0 |
| ಕಾಂಗ್ರೆಸ್ | 2 | 1 | 0 |
| ಜೆಡಿಎಸ್ | 0 | 0 | 0 |
| ಇತರೆ | 1 | 0 | 0 |
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಆಡಳಿತಾರೂಢ ಬಿಜೆಪಿ ಸರ್ಕಾರದ ಅಸ್ತಿತ್ವವನ್ನು ಮತ್ತು ಅನರ್ಹ ಶಾಸಕರ ಭವಿಷ್ಯವನ್ನು ನಿರ್ಧರಿಸಬಲ್ಲ ಚುನಾವಣೆ ಎಂದು ಕರೆಯಲ್ಪಡುತ್ತಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶದ ಮಣಿಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.
ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆ.ಆರ್.ಪೇಟೆ ಮತ್ತು ಹುಣಸೂರು ಕ್ಷೇತ್ರದಲ್ಲಿ ಕಳೆದ ಗುರುವಾರ ಮತದಾನ ನಡೆದಿತ್ತು. ಈ 15 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳಲ್ಲಿ ಅನರ್ಹ ಶಾಸಕರು ಬಿಜೆಪಿ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದರು.
ಇದರಂತೆ ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಗೊಂಡಿದ್ದು, 11 ಗಂಟೆ ಹೊತ್ತಿಗೆ ಆಯಾ ಕ್ಷೇತ್ರಗಳಲ್ಲಿ ಯಾರು ಗೆಲ್ಲಬಲ್ಲರು ಎಂಬುದರ ಸ್ಪಷ್ಟ ಚಿತ್ರಣ ಬಹಿರಂಗಗೊಳ್ಳಲಿದೆ. ಮಧ್ಯಾಹ್ನ 12 ಗಂಟೆ ವೇಳೆಗೆ ಅಧಿಕೃತ ಚಿತ್ರಣ ತಿಳಿದುಬರಲಿದೆ. ಹೀಗಾಗಿ ಅನರ್ಹ ಶಾಸಕರಲ್ಲಿ ಆತಂಕ ಮತ್ತು ಕುತೂಹಲ ಹೆಚ್ಚಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


