Live: ಕೇಂದ್ರ ಬಜೆಟ್ 2023: ಹೊಸ ತೆರಿಗೆ ಪದ್ಧತಿಯಲ್ಲಿ ಆದಾಯ ತೆರಿಗೆ ವಿನಾಯಿತಿ ಮಿತಿ 7 ಲಕ್ಷ ರೂ.ಗೆ ಹೆಚ್ಚಳ
ಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆಯಲ್ಲಿ ಈ ಬಾರಿ ಕೇಂದ್ರ ಸರ್ಕಾರ 7ಲಕ್ಷ ಆದಾಯದವರೆಗೆ ತೆರಿಗೆ ವಿನಾಯ್ತಿಯನ್ನು ವಿಸ್ತರಿಸಿದೆ. ಕಷ್ಟಪಟ್ಟು ದುಡಿಯುವ ಮಧ್ಯಮ ವರ್ಗದವರಿಗೆ ಪ್ರತಿಫಲ ಸಿಗಲೆಂದು ಹೊಸ ತೆರಿಗೆ ಪದ್ಧತಿಯನ್ನು ಜಾರಿಗೆ ತರುತ್ತಿದ್ದು, ಅದರಡಿ 7 ಲಕ್ಷದವರೆಗೆ ವೈಯಕ್ತಿಕ ಆದಾಯ ಮಿತಿಯವರೆಗೆ ಯಾವುದೇ ತೆರಿಗೆ ಇರುವುದಿಲ್ಲ ಎಂದು ಹೇ

ನವದೆಹಲಿ: ಮಧ್ಯಮ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ಆದಾಯ ತೆರಿಗೆಯಲ್ಲಿ ಈ ಬಾರಿ ಕೇಂದ್ರ ಸರ್ಕಾರ 7ಲಕ್ಷ ಆದಾಯದವರೆಗೆ ತೆರಿಗೆ ವಿನಾಯ್ತಿಯನ್ನು ವಿಸ್ತರಿಸಿದೆ.
ಕಷ್ಟಪಟ್ಟು ದುಡಿಯುವ ಮಧ್ಯಮ ವರ್ಗದವರಿಗೆ ಪ್ರತಿಫಲ ಸಿಗಲೆಂದು ಹೊಸ ತೆರಿಗೆ ಪದ್ಧತಿಯನ್ನು ಜಾರಿಗೆ ತರುತ್ತಿದ್ದು, ಅದರಡಿ 7 ಲಕ್ಷದವರೆಗೆ ವೈಯಕ್ತಿಕ ಆದಾಯ ಮಿತಿಯವರೆಗೆ ಯಾವುದೇ ತೆರಿಗೆ ಇರುವುದಿಲ್ಲ ಎಂದು ಹೇಳಿದರು.
9 ಲಕ್ಷ ಆದಾಯದವರೆಗೆ ಶೇಕಡಾ 5ರಷ್ಟು ತೆರಿಗೆ ಮತ್ತು 15 ಲಕ್ಷ ಆದಾಯ ಹೊಂದಿರುವವರಿಗೆ ಶೇಕಡಾ 10ರಷ್ಟು ತೆರಿಗೆ ಹೇರಲಾಗುವುದು ಎಂದು ಪ್ರಕಟಿಸಿದರು.
ಆದಾಯ ತೆರಿಗೆ ವಿನಾಯ್ತಿ, ಹೊಸ ಸ್ಲ್ಯಾಬ್ಗಳ ವಿವರ ಹೀಗಿದೆ ಹೊಸ ತೆರಿಗೆ ಪದ್ಧತಿ (New Tax Regime) ಆದಾಯ ತೆರಿಗೆ ವಿನಾಯ್ತಿ ಮೊತ್ತವನ್ನು ₹ 5 ಲಕ್ಷದಿಂದ ₹ 7 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ತೆರಿಗೆ ವಿವರಗಳನ್ನು ನೀಡಿದರು. ವಾರ್ಷಿಕ ₹ 9 ಲಕ್ಷ ವೇತನ ಪಡೆಯುವವರು ₹ 45,000 ತೆರಿಗೆ ಕಟ್ಟುತ್ತಾರೆ ಎಂದು ಸಚಿವರು ಹೇಳಿದರು.
ಹೊಸ ತೆರಿಗೆ ದರಗಳು ಹೀಗಿವೆ:
3 ಲಕ್ಷದವರೆಗೆ ತೆರಿಗೆ ದರವಿಲ್ಲ,
3ರಿಂದ 6 ಲಕ್ಷ – ಶೇ 5
6ರಿಂದ 9 ಲಕ್ಷ – ಶೇ 10
9ರಿಂದ 12 ಲಕ್ಷ – ಶೇ 15
12ರಿಂದ 15 ಲಕ್ಷ – ಶೇ 20
15 ಲಕ್ಷಕ್ಕೂ ಹೆಚ್ಚು – ಶೇ 30
ಇದುವರೆಗೆ 5 ಲಕ್ಷ ರೂಪಾಯಿ ಆದಾಯದವರೆಗೆ ತೆರಿಗೆ ವಿನಾಯ್ತಿಯನ್ನು ನೀಡಲಾಗುತ್ತಿತ್ತು. ಆದಾಯ ತೆರಿಗೆ ರಿಟರ್ನ್ಸ್ ಪ್ರಕ್ರಿಯೆಯ ಅವಧಿಯನ್ನು 16 ದಿನಗಳವರೆಗೆ ಕಡಿಮೆ ಮಾಡಲಾಗಿದೆ ಎಂದರು.

ಹೊಸ ತೆರಿಗೆ ಪದ್ಧತಿಯಲ್ಲಿ ಅತಿ ಹೆಚ್ಚು ಸರ್ಚಾರ್ಜ್ ದರವನ್ನು 37% ರಿಂದ 25% ಕ್ಕೆ ಇಳಿಸಲು ಸರ್ಕಾರವು ಪ್ರಸ್ತಾಪಿಸಿದೆ ಎಂದರು.ಅಂಚೆ ಕಚೇರಿಗಳ ಮೂಲಕ ನಿರ್ವಹಿಸುವ ಮಾಸಿಕ ಆದಾಯ ಯೋಜನೆಯ (Monthly income scheme - MIS) ಹೂಡಿಕೆ ಮಿತಿಯನ್ನು 9 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಈ ಮೊದಲು 4.5 ಲಕ್ಷ ಹೂಡಿಕೆಗೆ ಮಾತ್ರ ಅವಕಾಶವಿತ್ತು.
ಸಣ್ಣ ಉಳಿತಾಯ ಯೋಜನೆಗಳಲ್ಲಿ ಹಿರಿಯ ನಾಗರಿಕರ ಹೂಡಿಕೆಗೆ ಇದ್ದ 15 ಲಕ್ಷದ ಮಿತಿಯನ್ನು ಈ ಬಾರಿಯಿಂದ 30 ಲಕ್ಷಕ್ಕೆ ಕೇಂದ್ರ ಸರ್ಕಾರವು ವಿಸ್ತರಿಸಿದೆ.
ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ವಿಶೇಷ ಉಳಿತಾಯ ಯೋಜನೆ ಪ್ರಕಟಿಸಿದೆ. 2 ವರ್ಷಗಳ ಅವಧಿಯ ಈ ಯೋಜನೆಗೆ ಶೇಕಡಾ 7.5 ಬಡ್ಡಿ ನಿಗದಿಪಡಿಸಲಾಗಿದೆ.
ಸುಲಭವಾಗಿ ಐಟಿ ರಿಟರ್ನ್ಸ್ ಸಲ್ಲಿಸಲು ಸರ್ಕಾರ ಹೊಸ ಆದಾಯ ತೆರಿಗೆ ರಿಟರ್ನ್ (ITR) ಫಾರ್ಮ್‌ಗಳನ್ನು ಪರಿಚಯಿಸಿದೆ ಎಂದರು.
ಜಗತ್ತಿನಲ್ಲಿ ಅತಿ ಹೆಚ್ಚು ವೈಯಕ್ತಿಕ ತೆರಿಗೆ ದರ: ಪ್ರಸ್ತುತ ಅತಿ ಹೆಚ್ಚು ವೈಯಕ್ತಿಕ ತೆರಿಗೆ ದರ 42% ವಿಶ್ವದಲ್ಲೇ ಅತ್ಯಧಿಕವಾಗಿದೆ. ಅತಿ ಹೆಚ್ಚು ಆದಾಯ ಗಳಿಸುವವರಿಗೆ ಸರ್ಚಾರ್ಜ್ ನ್ನು 37% ರಿಂದ 25% ಕ್ಕೆ ಇಳಿಸಲಾಗಿದೆ. ಹೆಚ್ಚಿನ ತೆರಿಗೆ ದರವನ್ನು ಶೇಕಡಾ 39ಕ್ಕೆ ಇಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


