ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023 LIVE UPDATES: ಕಾಂಗ್ರೆಸ್ ಗೆ ಭರ್ಜರಿ ಬಹುಮತ, ಬಿಜೆಪಿ, ಜೆಡಿಎಸ್ ಗೆ ಮುಖಭಂಗ
ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಘೋಷಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕಾಂಗ್ರೆಸ್ ಪಕ್ಷ ಭರ್ಜರಿ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದ್ದು, ಆಡಳಿತರೂಢ ಬಿಜೆಪಿ ಮತ್ತು ಜೆಡಿಎಸ್ ಮುಖಭಂಗಕ್ಕೀಡಾಗಿವೆ.

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಫಲಿತಾಂಶ ಘೋಷಣೆ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕಾಂಗ್ರೆಸ್ ಪಕ್ಷ ಭರ್ಜರಿ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದ್ದು, ಆಡಳಿತರೂಢ ಬಿಜೆಪಿ ಮತ್ತು ಜೆಡಿಎಸ್ ಮುಖಭಂಗಕ್ಕೀಡಾಗಿವೆ.
ಬಿಜೆಪಿ 64 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 138 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್ 19 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರರು 3 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರು ಪಕ್ಷಗಳ ನಡುವಿನ ಭಾರಿ ಹಣಾಹಣಿ, ಅಬ್ಬರದ ಪ್ರಚಾರ, ಪ್ರತಿಷ್ಠೆಯನ್ನೇ ಪಣವಾಗಿಟ್ಟು ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ 3.67 ಕೋಟಿ ಮತದಾರರು ನೀಡಿರುವ ಜನಾದೇಶ ಇನ್ನು ಕೆಲವೇ ಕ್ಷಣಗಳಲ್ಲಿ ಬಹಿರಂಗವಾಗಲಿದೆ. ಈ ಮೂರು ಪಕ್ಷಗಳ ಜೊತೆಗೇ ಎಎಪಿ, ಬಿಎಸ್ ಪಿ ಮತ್ತು ನಟ ಉುಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಗಳು ಕೂಡ ತಮ್ಮ ಅದೃಷ್ಟಪರೀಕ್ಷೆಗೆ ನಿಂತಿದ್ದಾರೆ.
ಪ್ರಮುಖವಾಗಿ ಲೋಕಸಭೆ ಚುನಾವಣೆಗೆ ಒಂದು ವರ್ಷ ಇರುವಾಗ ನಡೆದಿರುವ ಈ ಚುನಾವಣೆಯ ಫಲಿತಾಂಶ ರಾಜ್ಯ ಮಾತ್ರವಲ್ಲ, ದೇಶದ ರಾಜಕೀಯ ದಿಕ್ಕನ್ನು ನಿರ್ಧರಿಸಲಿದೆ ಎಂದು ಹೇಳಲಾಗುತ್ತಿದ್ದು, ಈ ಕಾರಣಕ್ಕೆ, ಫಲಿತಾಂಶ ಇಡೀ ದೇಶದ ಗಮನ ಸೆಳೆದಿದೆ.
ವಿಧಾನಸಭೆಯ 224 ಕ್ಷೇತ್ರಗಳ ಪ್ರತಿನಿಧಿಗಳ ಆಯ್ಕೆಗೆ ಬುಧವಾರ (ಏಪ್ರಿಲ್ 10) ಮತದಾನ ನಡೆದಿತ್ತು. 5.07 ಕೋಟಿ ಮತದಾರರಲ್ಲಿ 3.67 ಕೋಟಿ ಮಂದಿ ಮತಚಲಾಯಿಸಿದ್ದರು. 2,615 ಅಭ್ಯರ್ಥಿಗಳು ಕಣದಲ್ಲಿದ್ದು, ಇಂದು ಅವರ ಭವಿಷ್ಯ ಹೊರಬೀಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


