LIVE

Karnataka Budget 2026 Live updates: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯ, 3 ಗಂಟೆ 36 ನಿಮಿಷಗಳ ಕಾಲ ಸುಧೀರ್ಷ ಭಾಷಣ ಮಾಡಿದ ಸಿದ್ದರಾಮಯ್ಯ

Karnataka Budget 2026 Live updates: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯ, 3 ಗಂಟೆ 36 ನಿಮಿಷಗಳ ಕಾಲ ಸುಧೀರ್ಷ ಭಾಷಣ ಮಾಡಿದ ಸಿದ್ದರಾಮಯ್ಯ
ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಆಯವ್ಯಯ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ
Published On :
LIVE76 ನವೀಕರಣಗಳು

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯ: ಸೋಮವಾರಕ್ಕೆ ಕಲಾಪ ಮುಂದೂಡಿಕೆ

2026-2027ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯಗೊಂಡಿದ್ದು, ವಿಧಾನಮಂಡಲ ಜಂಟಿ ಅಧಿವೇಶನವನ್ನು ಸೋಮವಾರ ಬೆಳಗ್ಗೆ ಮುಂದೂಡಲಾಗಿದೆ.

ಈ ಬಾರಿಯ ಬಜೆಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಾರು 3 ಗಂಟೆ 36 ನಿಮಿಷಗಳ ಕಾಲ ಓದಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಅಬಕಾರಿ ಇಲಾಖೆ

  • ಅಬಕಾರಿ ಉಪ ಅಧೀಕ್ಷಕರು ಮತ್ತು ಅಬಕಾರಿ ಅಧೀಕ್ಷಕರುಗಳ ವರ್ಗಾವಣೆಯನ್ನು ಡಿಜಿಟಲ್ ಕೌನ್ಸಿಲಂಗ್ ಮಾಡಲು ಕ್ರಮ.

  • ವಿವಿಧಸನ್ನದುಗಳ ಮಾನ್ಯತೆ ಒಂದು ವರ್ಷದಿಂದ 5 ವರ್ಷಗಳಿಗೆ ವಿಸ್ತರಣೆ.

  • ಪಾನೀಯಗಳಲ್ಲಿ ಇರುವ ಮದ್ಯದ ಅಂಶವನ್ನು (Alcohol-in-Beverage AIB) ಆಧಾರಿಸಿ ಅಬಕಾರಿ ಸುಂಕ ವ್ಯವಸ್ಥೆ ಏಪ್ರಿಲ್ 2026ರಿಂದ ಜಾರಿ,

  • ಅಬಕಾರಿ ಸುಂಕವು ಏಕರೂಪವಾಗಿರಲಿದ್ದು, ಹೆಚ್ಚುವರಿ ಅಬಕಾರಿ ಸುಂಕವನ್ನು ex-factory ದರ ಪಟ್ಟಿಗಳ ಆಧಾರದ ಮೇಲೆ ವಿಧಿಸಲಾಗುವುದು.

  • ಸರ್ಕಾರದಿಂದ ಮದ್ಯದ ಬೆಲೆ ನಿರ್ಧರವಾಗುವುದನ್ನು ಮುಕ್ತಗೊಳಿಸಲಾಗುವುದು.

  • ದರ ನಿಗದಿ ಬ್ಲ್ಯಾಬ್‌ಗಳನ್ನು 16 ರಿಂದ 8 ಸ್ಟ್ರಾಬ್‌ಗಳಿಗೆ ಇಳಿಕೆ.

  • ತೆರಿಗೆ ಸೋರಿಕೆಯನ್ನು ತಡೆಯಲು ಬ್ಲಾಕ್‌ಚೈನ್‌ ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆ ಜಾರಿ,

  • 2026-27ನೇ ಸಾಲಿಗೆ ಅಬಕಾರಿ ಇಲಾಖೆಗೆ 45,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿ ನಿಗದಿ.

ವಾಣಿಜ್ಯ ಮತ್ತು ಕೈಗಾರಿಕೆ

  • KIADB ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ವಾಹನ ಸ್ಕ್ಯಾಪಿಂಗ್‌ ಸೌಲಭ್ಯ ಘಟಕದ ಸ್ಥಾಪನೆ.

  • 500 ಕೋಟಿ ರೂ.ಗಳ ವೆಚ್ಚದಲ್ಲಿ ಮಂಡ್ಯದಲ್ಲಿ ನಿರ್ಮಾಣ ಮತ್ತು ಮೂಲಸೌಕರ್ಯ ಸಲಕರಣೆಗಳ ಪರೀಕ್ಷಾ ಘಟಕ ಸ್ಥಾಪನೆಗೆ 100 ಎಕರೆ ಜಮೀನು.

  • KIADB ಏರೋಸ್ಪೇಸ್ ಪಾರ್ಕ್‌ನಲ್ಲಿ ಏರೋಸ್ಪೇಸ್ ಕಾಮನ್ ಫೆಸಿಲಿಟಿ ಸೆಂಟರ್ ಸ್ಥಾಪನೆಗೆ 30 ಕೋಟಿ ರೂ.

  • ಸಮ್ಮೇಳನ/ಶೃಂಗಸಭೆಗಳ (MICE) ಆಯೋಜನೆಗಾಗಿ ಮೈಸೂರು ಲ್ಯಾಂಪ್ ವರ್ಕ್ಸ್ ಲಿಮಿಟೆಡ್ ಆವರಣದಲ್ಲಿ PPP ಮಾದರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಮಾವೇಶ ಕೇಂದ್ರ ಸಂಕೀರ್ಣ ನಿರ್ಮಾಣ.

  • ಬೆಳಗಾವಿ ಜಿಲ್ಲೆಯಲ್ಲಿ 1,000 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್‌ ಅಭಿವೃದ್ಧಿ.

  • ಮೈಸೂರು ವಿಮಾನ ನಿಲ್ದಾಣದ ಸನಿಹ ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿ,

  • NGEF ಆವರಣದಲ್ಲಿ ಟೀ ಪಾರ್ಕ್ ಯೋಜನೆಯ ಮೊದಲನೆಯ ಹಂತದ ಲೋಕಾರ್ಪಣೆ ಹಾಗೂ ಎರಡನೇ ಹಂತದಡಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ,

  • ಬೆಂಗಳೂರು-ಮುಂಬೈ ಕೈಗಾರಿಕಾ ಕಾರಿಡಾರ್ ಯೋಜನೆಗೆ 600 ಕೋಟಿ ರೂ.

  • MSE-CDP ಯೋಜನೆಯಡಿ 15 ಕೋಟಿ ರೂ. ವೆಚ್ಚದಲ್ಲಿ 10 ಕ್ಲಸ್ಟರ್‌ಗಳ ಸ್ಥಾಪನೆ.

  • ನೇಕಾರರ ಆರ್ಥಿಕ ಸ್ವಾವಲಂಬನೆಗೆ ಒಟ್ಟಾರೆಯಾಗಿ 225 ಕೋಟಿ ರೂ. ಸಹಕಾರಿ ನೂಲಿನ ಗಿರಣಿಗಳನ್ನು ಪ್ರೋತ್ಸಾಹಿಸಲು ಪ್ರತಿ ಯೂನಿಟ್‌ಗೆ 3 ರೂ.ರಂತೆ ವಿದ್ಯುತ್‌ ಸಹಾಯಧನ.

  • ಕಲಬುರಗಿಯಲ್ಲಿ ಪಿ.ಎಂ. ಮಿತ್ರ ಮೆಗಾ ಜವಳಿ ಪಾರ್ಕ್‌ಗೆ 75 ಕೋಟಿ ರೂ. ಅನುದಾನ.

  • 2025-26 ಸಾಲಿನ ಸಕ್ಕರೆ ಹಂಗಾಮಿನಲ್ಲಿ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ 50 ರೂ.ಗಳ ಸಹಾಯಧನ, ಒಟ್ಟಾರೆಯಾಗಿ 300 ಕೋಟಿ ರೂ. ಒದಗಿಸಲಾಗಿದೆ.

  • ರಾಜ್ಯಕ್ಕೆ ನಿಗದಿಪಡಿಸಲಾದ ಎಥನಾಲ್ ಖರೀದಿ ಕೋಟಾ, ಉತ್ಪಾದನಾ ಸಾಮರ್ಥ್ಯಕ್ಕೆ ಹೋಲಿಸಿದರೆ ಕಡಿಮೆಯಾಗಿರುವುದರಿಂದ ಕೋಟಾವನ್ನು ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯ.

ಲೋಕೋಪಯೋಗಿ ಇಲಾಖೆ

  • ಮುಂದಿನ ಎರಡು ವರ್ಷಗಳಲ್ಲಿ 2,000 ಕೋಟಿ ರೂ. ಮೊತ್ತದಲ್ಲಿ ಸೇತುವೆಗಳ ನಿರ್ಮಾಣ.

  • ಮಲೆನಾಡು ಮತ್ತು ಕರಾವಳಿ ಪ್ರದೇಶದ ಜನವಸತಿಗಳಿಗೆ ಸಂಪರ್ಕ ಕಲ್ಪಿಸುವ 300 ಫುಟ್ ಬ್ರಿಡ್ಜ್ ಗಳ ನಿರ್ಮಾಣ.

  • ಇಲಾಖೆಯ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸುವುದರೊಂದಿಗೆ ಸಂರಕ್ಷಿಸಲು ರೆಕಾರ್ಡ್ ರೂಮ್ ನಿರ್ಮಾಣ.

  • ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಹಂತ-5 ಘಟ್ಟ-2ರಡಿ 5,000 ಕೋಟಿ ರೂ. ಮೊತ್ತದಲ್ಲಿ 1846 ಕಿಮೀ ರಸ್ತೆಯ ಅಭಿವೃದ್ಧಿ. ಮುಂದುವರೆದ ಯೋಜನೆಗಳಡಿ 2,200 ಕಿ.ಮೀ ರಾಜ್ಯ ಹೆದ್ದಾರಿ 3,500 ಕಿ.ಮೀ ಜಿಲ್ಲಾ ರಸ್ತೆಗಳನ್ನು 5,776 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ.

  • ADB ನೆರವಿನ KSHIP-IV ಅಡಿಯಲ್ಲಿ 5,736 ಕೋಟಿ ರೂ.ಗಳ ವೆಚ್ಚದಲ್ಲಿ 875 ಕಿ.ಮೀ ಉದ್ದದ ರಸ್ತೆ ನಿರ್ಮಾಣದ ಯೋಜನಾ ವರದಿ,

  • ಇಲಾಖೆಗಳಡಿ ಕಟ್ಟಡಗಳ ವಿನ್ಯಾಸ ಮತ್ತು ಅಂದಾಜುಗಳಲ್ಲಿ ಏಕರೂಪತೆ ತರಲು ತಜ್ಞರ ಸಮಿತಿ ರಚನೆ.

ಕಾರ್ಮಿಕ ವಲಯಕ್ಕೆ ಸಿಕ್ಕಿದ್ದು...

  • ಕಟ್ಟಡ ಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ತಲಾ 60 ಕೋಟಿ ರೂ.ಗಳ ವೆಚ್ಚದಲ್ಲಿ 10 GTTC ಕೇಂದ್ರಗಳ ಸ್ಥಾಪನೆ.

  • 2025-2600 ಅನುಮೋದನೆಗೊಂಡಿರುವ 42 ಹಾಗೂ 2026-27ರಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಹೆಚ್ಚುವರಿ 62 ಒಟ್ಟಾರೆ 104 ಶ್ರಮಿಕ ವಸತಿ ಶಾಲೆಗಳ ಪ್ರಾರಂಭ.

  • ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ 200 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ,

  • ಅಸಂಘಟಿತ ಕಾರ್ಮಿಕರಿಗೆ ಆನ್‌ಲೈನ್‌ ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆಗೆ 'ಕಾಯಕ ಭಾಗ್ಯ' ಯೋಜನೆ.

  • ಕಾರ್ಮಿಕ ವಿಮಾ ಸೊಸೈಟಿಯ ಮುಖಾಂತರ ವಿಮಾದಾರರಿಗೆ ಪರಿಣಾಮಕಾರಿಯಾಗಿ ವೈದ್ಯಕೀಯ ವೈದ್ಯಕೀಯ ಸೇವೆಗಳನ್ನು ಒದಗಿಸಲು

  • Cervical Cancer ಲಸಕಾ ಕಾರ್ಯಕ್ರಮ, ESI ಚಿಕಿತ್ಸಾಲಯಗಳ ಉನ್ನತೀಕರಣ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳು

  • ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ.

  • ಲಾಭಾಂಶ ಪಾವತಿಯಲ್ಲಿ ವಿಳಂಬ ನಿವಾರಿಸಲು FIST Application ಮೂಲಕ ನೇರಪಾವತಿ.

  • ಇಲಾಖೆಯ ಸಹಾಯವಾಣಿ 1967 ವ್ಯವಸ್ಥೆಯನ್ನು AI ಆಧಾರಿತ “Smart Annavani' ಯನ್ನಾಗಿ ಪರಿವರ್ತನೆ.

  • ದಾಸೋಹ ಯೋಜನೆಯಡಿ 34 ಹೊಸ ಕಲ್ಯಾಣ ಸಂಸ್ಥೆಗಳ ಸೇರ್ಪಡೆ.

ವಸತಿ ಇಲಾಖೆಗೆ ಸಿಕ್ಕಿದ್ದೆಷ್ಟು..?

  • ರಾಜ್ಯದ ವಸತಿ ಯೋಜನೆಗಳಡಿ ಬಿಎಲ್‌ ಆಧಾರಿತ ಒಂದು ಲಕ್ಷ ಮನೆಗಳ ಹೊಸ ಗುರಿ, ಹೊಸ ಗುರಿಯಡಿ ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳ ಸಹಾಯಧನ 2 ಲಕ್ಷ ರೂ.ಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳ ಸಹಾಯಧನ ಲಕ್ಷ ರೂ.ಗಳಿಗೆ ಪರಿಷ್ಕರಣೆ.

  • ರಾಜ್ಯ ವಸತಿ ಯೋಜನೆಗಳಡಿ ಆನ್‌ಲೈನ್‌ ಲಾಟರಿ ಮೂಲಕ ಗ್ರಾಮ ಸಭೆಗಳಲ್ಲಿ ಫಲಾನುಭವಿಗಳ ಆಯ್ಕೆ.

  • ಕೆ.ಹೆಚ್.ಬಿ. ಸೂರ್ಯ ಕ್ರೀಡಾ ಗ್ರಾಮ' ಎಂಬ ಹೆಸರಿನಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ ಆನೇಕಲ್ ತಾಲ್ಲೂಕಿನಲ್ಲಿ 80,000 ಆಸನವುಳ್ಳ ಕ್ರಿಕೆಟ್ ಕ್ರೀಡಾಂಗಣ ಮತ್ತು ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ.

  • ನಮ್ಮ ಮನೆ” ಯೋಜನೆಯಡಿ ರಿಯಾಯಿತಿ ದರದಲ್ಲಿ 50 ಸಾವಿರ ನಿವೇಶನಗಳ ವಿತರಣೆ.

ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸರ್ಕಾರ ಆದ್ಯತೆ

  • 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರಾರಂಭ.

  • CBSE ಪಠ್ಯಕ್ರಮದಡಿ 10 ಕೋಟಿ ರೂ. ಅನುದಾನದಲ್ಲಿ 10 ಹೊಸ ಸಂತ ಶಿಶುನಾಳ ಶರೀಫ ವಸತಿ ಶಾಲೆಗಳ ಪ್ರಾರಂಭ.

  • 25 ಹೊಸ ಸಂತ ಶಿಶುನಾಳ ಶರೀಫರ ವಸತಿ ಶಾಲೆಗಳ ಪ್ರಾರಂಭ.

  • 100 ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ಉರ್ದು ಶಾಲೆಗಳನ್ನು 400 ಕೋಟಿ ರೂ.ಗಳ ವೆಚ್ಚದಲ್ಲಿ ಕೆ.ಪಿ.ಎಸ್. ಮಾದರಿಯಲ್ಲಿ ಉನ್ನತೀಕರಣ

  • 25 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪಿ.ಯು.ಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಪ್ರಾರಂಭ. 18 ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗ ಪ್ರಾರಂಭ.

  • ಅಲ್ಪಸಂಖ್ಯಾತರ ನಾಲ್ಕು ವಸತಿ ಶಾಲೆಗಳನ್ನು K-CET/JEE/NEET ಪರೀಕ್ಷೆಗಳಿಗೆ Center for Excellenceನ್ನಾಗಿ ಸ್ಥಾಪನೆ.

  • 20 ವಸತಿ ಶಾಲೆಗಳ ಮಕ್ಕಳಿಗೆ K-CET/JEE/NEET ಪರೀಕ್ಷೆಗಳಿಗೆ ವಿಶೇಷ ತರಬೇತಿ.

  • ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಆಯ್ದ ವಕ್ಸ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರೀಕ ಸೇವಾ ಕೇಂದ್ರಗಳ ಪ್ರಾರಂಭ.

  • ಬೆಂಗಳೂರಿನಲ್ಲಿ 100 ಸಂಖ್ಯಾಬಲದ ನಾಲ್ಕು ಉದ್ಯೋಗಸ್ಥ ಮಹಿಳೆಯರ ವಸತಿನಿಲಯಗಳ ಪ್ರಾರಂಭ.

  • ಜೈನ್, ಬೌದ್ಧ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ.

  • ಅಲ್ಪಸಂಖ್ಯಾತರ 5,000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಖರೀದಿಗೆ ತಲಾ 50,000 ರೂ.

  • ಕ್ರೈಸ್ತ ಸಂಸ್ಥೆಗಳು ನಡೆಸುವ 10 ವೃದ್ಧಾಶ್ರಮಗಳಲ್ಲಿ ತಲಾ 50 ಲಕ್ಷ ರೂ.ಗಳ ನೆರವಿನೊಂದಿಗೆ ಸಮಗ್ರ ಜೆರಿಯಾಟ್ರಿಕ್ ಪ್ಯಾಲಿಯೇಟಿವ್ ಕೇರ್ ಘಟಕಗಳ ಸ್ಥಾಪನೆ.

  • ಸಂವಿಧಾನ ಶಿಲ್ಪಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಇತರೆ ಸಮಾಜ ಸುಧಾರಕರ ಕೃತಿಗಳು ಮತ್ತು ಪುಸ್ತಕಗಳನ್ನು ಉರ್ದು ಭಾಷೆಗೆ ಅನುವಾದ.

  • ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳ ನಿರ್ಮಾಣ.

  • 31 ಮಹಿಳಾ ಪಿ.ಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಣ. ಸವಣೂರಿನಲ್ಲಿ ಒಂದು ಹೊಸ ಮಹಿಳಾ ಪಿ.ಯು. ಕಾಲೇಜು ಪ್ರಾರಂಭ.

  • ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ ವಕ್ಫ್ ಆಸ್ತಿಗಳ ಸಮಗ್ರ ಅಭಿವೃದ್ಧಿ

  • ಬೀದರ್'ನ ಶ್ರೀನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪನೆ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಿಕ್ಕಿದ್ದೆಷ್ಟು..?

  • ಆರೋಗ್ಯ ಇಲಾಖೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ ರೂ.900 ಕೋಟಿ

  • ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ (AB-ArK) ಯೋಜನೆಯಡಿ HBP-2022 ಚಿಕಿತ್ಸಾ ಪ್ಯಾಕೇಜ್ ದರಗಳ ಜಾರಿಗೆ ಹೆಚ್ಚುವರಿ 400 ಕೋಟಿ ರೂ.

  • ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳ ತುರ್ತು ಚಿಕಿತ್ಸಾ ವಿಭಾಗಗಳ ಮೇಲ್ದರ್ಜೆಗಾಗಿ 45 ಕೋಟಿ ರೂ.

  • ತೀವ್ರ ಅಪೌಷ್ಟಿಕತೆಯ ಮಕ್ಕಳಿಗಾಗಿ 63 ತಾಲ್ಲೂಕುಗಳಲ್ಲಿ ಪೌಷ್ಟಿಕ ಮನಶ್ವೇತನ ಕೇಂದ್ರಗಳ (NRC) ವಿಸ್ತರಣೆಗೆ 6 ಕೋಟಿ ರೂ.

  • ಕಡಿಮೆ ಜನನ ತೂಕದ ಹಾಗೂ ಅನಾರೋಗ್ಯ ಪೀಡಿತ ಶಿಶುಗಳ ಸಮಗ್ರ ಆರೈಕೆಗೆ 10 ಕೋಟಿ ರೂ.

  • 18 ವರ್ಷದವರೆಗಿನ Type-1 Diabetes ಮಕ್ಕಳ ಆರೋಗ್ಯ ಸುಧಾರಣೆಗೆ ಉಚಿತ ಇನ್ಸುಲಿನ್ ಪೆನ್‌ಗಳ ವಿತರಣೆ.

  • KKRDB Micro ಯೋಜನೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ಮೇಲೆ ಅನುದಾನ.

  • ಕೆ.ಎಂ.ಇ.ಆರ್.ಸಿ ಅನುದಾನದಡಿ ಗಣಿ ಬಾಧಿತ ಜಿಲ್ಲೆಗಳಾದ ಬಳ್ಳಾರಿ,

  • ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲ್ಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳ ವಿಸ್ತರಣೆ.

  • ಗಂಭೀರ ರೋಗಗಳಿಗೆ ಕೇರಳ ಮಾದರಿಯಲ್ಲಿ Pallium India ಸಹಯೋಗದಲ್ಲಿ ಗೃಹಾಧಾರಿತ ಉಪಶಮನ ಸೇವೆ

  • (palliative care).

  • 50 ಡಯಾಲಿಸಿಸ್ ಕೇಂದ್ರಗಳ ಹಾಸಿಗೆ ಸಾಮರ್ಥ್ಯ ಹೆಚ್ಚಳ; ವಾರ್ಷಿಕ 1.35 ಲಕ್ಷ ಹೆಚ್ಚುವರಿ ಡಯಾಲಿಸಿಸ್ ಸೇವೆಗಾಗಿ 20 ಕೋಟಿ ರೂ.

  • ಡಿಜಿಟಲ್ ಆರೋಗ್ಯ ಕಾರ್ಯಕ್ರಮದಡಿ ವಹಿಗಳ ಡಿಜಿಟಲೀಕರಣ ರೋಗಿಗಳ ಸಂಪೂರ್ಣ ಗಣಕೀಕೃತ ನೋಂದಣಿ, ಆರೋಗ್ಯ ದಾಖಲೆಗಳ ಡಿಜಿಟಲೀಕರಣ; UPI ಆಧಾರಿತ ಶುಲ್ಕ ಪಾವತಿ ವ್ಯವಸ್ಥೆ.

  • ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ.

ಜಲಸಂಪನ್ಮೂಲ

  • ಕೇಂದ್ರ ಪರಿಸರ ಸಚಿವಾಲಯದಿಂದ ಅರಣ್ಯ ತೀರುವಳಿ ಪಡೆದು ಮೇಕೆದಾಟು ಯೋಜನೆ ಅನುಷ್ಠಾನ.

  • ಹೆಚ್ಚುವರಿ ನೀರು ಸಂಗ್ರಹಣೆಗಾಗಿ ಎತ್ತಿನಹೊಳೆ ಯೋಜನೆಯಡಿ ಕೊರಟಗೆರೆ ತಾಲ್ಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ. ಸಾಮರ್ಥ್ಯದ ಸಮತೋಲನ ಜಲಾಶಯ ನಿರ್ಮಾಣ, ಯೋಜನೆಯ ಎರಡನೆಯ ಹಂತವನ್ನು ಶೀಘ್ರವಾಗಿ ಪೂರ್ಣಗೊಳಿಸುವುದು.

  • ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ಫೀಡರ್ ಕಾಮಗಾರಿಗಳನ್ನು ಪೂರ್ಣಗೊಳಿಸಿ 157 ಕೆರೆಗಳನ್ನು ತುಂಬಿಸಲು ಕ್ರಮ.

  • UKP-III ರಡಿ ಮುಳುಗಡೆಯಾಗುವ ಖುಷ್ಠಿ ಜಮೀನಿಗೆ ಎಕರೆಗೆ 30 ಲಕ್ಷ, ತರಿ ಜಮೀನಿಗೆ ಎಕರೆಗೆ 40 ಲಕ್ಷ ನಿಗದಿ; ಒಪ್ಪಂದದಡಿ ಭೂಸ್ವಾಧೀನ ಪ್ರಕ್ರಿಯೆಗೆ ಚಾಲ್ತಿ.

  • ತುಂಗಭದ್ರಾ ಅಣೆಕಟ್ಟಿನ ಶಿಥಿಲಗೊಂಡಿರುವ ಗೇಟುಗಳನ್ನು ಬದಲಾಯಿಸಿ 33 ಹೊಸ ಗೇಟುಗಳ ಅಳವಡಿಕೆಯನ್ನು ಮುಂಗಾರು ಪೂರ್ವದಲ್ಲಿ ಪೂರ್ಣಗೊಳಿಸಲಾಗುವುದು.

  • ನವಲಿ ಬಳಿ ಸಮತೋಲನ ಜಲಾಶಯ ನಿರ್ಮಾಣ ಸೇರಿದಂತೆ ಇತರೆ ಪರ್ಯಾಯ ಮಾರ್ಗೋಪಾಯಗಳ ಸಮಾಲೋಚನೆ.

  • ಕಳಸಾ-ಬಂಡೂರಾ ನಾಲಾ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅರಣ್ಯ ತೀರುವಳಿ ದೊರೆತ ಕೂಡಲೇ ಕಾಮಗಾರಿಗಳ ಪ್ರಾರಂಭ.

  • ವಿಜಯಪುರದ ಬಾಬಾನಗರದಲ್ಲಿ ಸಂಗ್ರಹಣಾ ಜಲಾಶಯವನ್ನು ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ.

  • ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿ 12,000 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸುವ ಉಡುತೊರೆಹಳ್ಳ ಯೋಜನೆಗೆ 490 ಕೋಟಿ ರೂ.

  • ಹತ್ತಿಕುಣಿ ಹಾಗೂ ತುಂಗಭದ್ರಾ ಎಡದಂಡೆ ಶಾಖಾ ಕಾಲುವೆ ಯೋಜನೆಯಡಿ Pressurised Piped Network ನೀರಾವರಿ ಪದ್ದತಿ ಅಳವಡಿಕೆ.

ಪಶುಸಂಗೋಪನೆ

  • ನಬಾರ್ಡ್ ಸಹಯೋಗದೊಂದಿಗೆ 100 ಪಶುವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳ ನಿರ್ಮಾಣ,

  • ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಕುರಿ/ಮೇಕೆ ಮತ್ತು ಹಸು/ಎಮ್ಮೆ ಖರೀದಿಗೆ ತಲಾ 10,000 ಫಲಾನುಭವಿಗಳಿಗೆ ಶೇ.25 ರಷ್ಟು ಸಹಾಯಧನ.

  • 15 ತಾಲ್ಲೂಕುಗಳ ಪಶು ಆಸ್ಪತ್ರೆಗಳನ್ನು ಪಾಲಿಕ್ಲಿನಿಕ್‌ಗಳನ್ನಾಗಿ ಮೇಲ್ದರ್ಜೆಗೇರಿಸಲು 10 ಕೋಟಿ ರೂ.

  • ಬೋಯರ್ ಮೇಕೆ ತಳಿ ಸಂವರ್ಧನಾ ಕೇಂದ್ರ ಸ್ಥಾಪನೆ ಹಾಗೂ ಬಂಡೂರು ಕುರಿ ತಳಿ ಸಂವರ್ಧನಾ ಕೇಂದ್ರದ ಸಮಗ್ರ ಅಭಿವೃದ್ಧಿ.

  • ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಯನ್ನು ನಿವಾರಿಸಲು 1,000 ಗ್ರಾಮ ಪಂಚಾಯಿತಿಗಳಲ್ಲಿ ಫಲಧಾರೆ" ಶಿಬಿರಗಳು,

  • ಬೆಂಗಳೂರು ಹಾಗೂ ಬಿದರ್‌ನ ಪಶು ವೈದ್ಯಕೀಯ ಮಹಾ ವಿದ್ಯಾಲಯಗಳಲ್ಲಿ ಸಿ.ಟಿ. ಸ್ಕ್ಯಾನಿಂಗ್ ಕೇಂದ್ರ ಸ್ಥಾಪನೆ.

  • ಬೆಂಗಳೂರು ಹಾಗೂ ಬೀದರ್‌ನಲ್ಲಿ ಶ್ವಾನ ಸಂತಾನ ನಿಯಂತ್ರಣ ತರಬೇತಿ ಕೇಂದ್ರ ಸ್ಥಾಪನೆ.

ಪರಿಶಿಷ್ಟ ಜಾತಿಗಳ ಕಲ್ಯಾಣಕ್ಕೆ ಆದ್ಯತೆ

  • ಪರಿಶಿಷ್ಟ ಜಾತಿಯ 20, ಪರಿಶಿಷ್ಟ ಪಂಗಡದ 5 ಮತ್ತು ಹಿಂದುಳಿದ ವರ್ಗಗಳ 5 ವಸತಿ ಶಾಲೆಗಳು ಸೇರಿದಂತೆ ಒಟ್ಟು 30 ಕ್ರೈಸ್ ವಸತಿ ಶಾಲೆಗಳಿಗೆ ರೂ.660 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡಗಳ ನಿರ್ಮಾಣ

  • ಸಮಾಜ ಕಲ್ಯಾಣ ಇಲಾಖೆಯಡಿ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆ ಹಾಗೂ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ ರೂ. 1,500 ಕೋಟಿ ಅನುದಾನ

  • ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಕೊಳವೆ ಬಾವಿಗಳ ವಿದ್ಯುದೀಕರಣಕ್ಕಾಗಿ ಪಾವತಿಸುವ ಮೊತ್ತ 75,000 ರೂ.ಗಳಿಂದ 1,50,000 ರೂ.ಗಳಿಗೆ ಹೆಚ್ಚಳ

  • ನಾಲ್ಕೂ ಇಲಾಖೆಗಳಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿಗೆ ಕ್ರಮ

ಯುವ ಸಬಲೀಕರಣ-ಕ್ರೀಡೆ

  • ಸಶಕ್ತ ಕರ್ನಾಟಕ ಕಾರ್ಯಕ್ರಮದಡಿ ಬೆಳಗಾವಿ, ಗೋಕರ್ಣ, ಚಿತ್ರದುರ್ಗ, ಹಂಪಿಯಲ್ಲಿ ರಾಷ್ಟ್ರಮಟ್ಟದ ಮ್ಯಾರಥಾನ್‌ಗಳನ್ನು ತಲಾ 10 ಲಕ್ಷ ರೂ. ವೆಚ್ಚದಲ್ಲಿ ಆಯೋಜಿಸಲಾಗುವುದು. ಇದರೊಂದಿಗೆ 10 ಜಿಲ್ಲಾ ಕೇಂದ್ರಗಳಲ್ಲಿ ತಲಾ ನಾಲ್ಕು ಲಕ್ಷ ರೂ. ವೆಚ್ಚದಲ್ಲಿ ಜಿಲ್ಲಾ ಮಟ್ಟದ ಮ್ಯಾರಥಾನ್‌ಗಳನ್ನು ಪ್ರಸಿದ್ಧ ಕ್ರೀಡಾಪಟುಗಳ ಹೆಸರಿನಲ್ಲಿ ಆಯೋಜನೆ ಮಾಡಲಾಗುವುದು.

  • ಕಲ್ಯಾಣ ಕರ್ನಾಟಕ ಭಾಗದ ಕ್ರೀಡಾಪಟುಗಳಿಗೆ ಉತ್ತಮ ಕ್ರೀಡಾ ವಿಜ್ಞಾನ ಸೇವೆಗಳನ್ನು ಒದಗಿಸಲು ಕಲಬುರಗಿಯಲ್ಲಿ ಆಧುನಿಕ ಕ್ರೀಡಾ ವಿಜ್ಞಾನ ಕೇಂದ್ರವನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸಲಾಗುವುದು. ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯಗಳನ್ನು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.

  • ವಿಜಯನಗರ ಜಿಲ್ಲೆಯಲ್ಲಿರುವ ಕ್ರೀಡಾಂಗಣವನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು KMERC ಅನುದಾನದಲ್ಲಿ ಮೇಲ್ದರ್ಜೆಗೇರಿಸಲಾಗುವುದು. ಮಕ್ಕಳ ಕ್ರೀಡಾ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸುಸಜ್ಜಿತ ಕ್ರೀಡಾ ತರಬೇತಿ ವಸತಿ ನಿಲಯವನ್ನು ವಿರಾಜಪೇಟೆಯಲ್ಲಿ ನಿರ್ಮಿಸಲು ಕ್ರಮಕೈಗೊಳ್ಳಲಾಗುವುದು.

  • ಸೈಕ್ಲಿಂಗ್‌ ಕ್ರೀಡೆಗೆ ಉತ್ತೇಜನ ನೀಡಲು ಮೈಸೂರಿನಲ್ಲಿರುವ ದಟ್ಟಗಳ್ಳಿಯಲ್ಲಿ ಗುರುತಿಸಲಾದ ಜಾಗದಲ್ಲಿ ಆಧುನಿಕ ಸೈಕ್ಲಿಂಗ್‌ ವೆಲೋಡ್ರೋಮ್‌ ನಿರ್ಮಿಸಲಾಗುವುದು. ಬಂಗಾರಪೇಟೆ, ಮುದ್ದೇಬಿಹಾಳ, ಗುಳೇದಗುಡ್ಡ, ಕನಕಪುರ, ಕುಕನೂರು ಮತ್ತು ಮಸ್ಕಿಯಲ್ಲಿ ತಾಲ್ಲೂಕು ಕ್ರೀಡಾಂಗಣಗಳನ್ನು ತಲಾ ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು.

ಪ್ರವಾಸೋದ್ಯಮಕ್ಕೆ ಆದ್ಯತೆ

  • ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ʻಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆʼಯನ್ನು ರೂಪಿಸಲಾಗುವುದು. ಈ ತಾಣಗಳಲ್ಲಿ ವಾಯುಯಾನ ಹಾಗೂ ಜಲಸಾಹಸ ಪ್ರವಾಸೋದ್ಯಮ ಭಾಗೀದಾರರ ಸಹಯೋಗದೊಂದಿಗೆ ಸೀ ಪ್ಲೇನ್ ಹಾಗೂ ಹೆಲಿ ಟ್ಯಾಕ್ಸಿಗಳ ಮುಖಾಂತರ ಸಂಪರ್ಕ ಕಲ್ಪಿಸಲಾಗುವುದು. ಜೊತೆಗೆ ಜಾಯ್ ರೈಡ್, ರಿವರ್ ಕ್ರೂಸ್ ಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುವುದು.

  • ನಮ್ಮ ರಾಜ್ಯಕ್ಕೆ ಆಗಮಿಸುವ ಎಲ್ಲಾ ಪ್ರವಾಸಿಗಳಿಗೆ ಸುಮಧುರ, ಸಕಾರಾತ್ಮಕ ಅನುಭವವನ್ನು ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್‌ ಸಿಬ್ಬಂದಿಗಳಿಗೆ ಮೃದು ಕೌಶಲ್ಯ ತರಬೇತಿ ನೀಡುವುದರ ಮೂಲಕ ವೃತ್ತಿಪರತೆಯನ್ನು ವೃದ್ಧಿಗೊಳಿಸಲು ಒಂದು ಕೋಟಿ ರೂ.ಗಳನ್ನು ಒದಗಿಸಲಾಗುವುದು.

  • ಪ್ರವಾಸ ಮಾರ್ಗದರ್ಶಕರಿಗೆ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯ ತರಬೇತಿ ನೀಡಲು ಡಿಪ್ಲೋಮಾ ಕೋರ್ಸ್‌ ಅನ್ನು ಪ್ರಾರಂಭಿಸಲಾಗುವುದು. ಪ್ರಮುಖ ಪ್ರವಾಸಿ ತಾಣವಾದ ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್‌ ಅನ್ನು ಅಭಿವೃದ್ಧಿಪಡಿಸಲಾಗುವುದು.

  • ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿಯಿಂದ ಕೈಮರದವರೆಗೆ PPP ಮಾದರಿಯಲ್ಲಿ ರೋಪ್‌-ವೇ ನಿರ್ಮಿಸಲಾಗುವುದು. ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

  • ರಾಜ್ಯದ ಸಂರಕ್ಷಿತ 844 ಸ್ಮಾರಕಗಳ ಹಾಗೂ 1,000 ಅಸುರಕ್ಷಿತ ಸ್ಮಾರಕಗಳ ರಕ್ಷಣೆ ಮಾಡುವ ಹಿತದೃಷ್ಟಿಯಿಂದ 1,000 ಸ್ಮಾರಕ ಮಿತ್ರರನ್ನು ಗುರುತಿಸಿ ತರಬೇತಿ ನೀಡಲಾಗುವುದು. ಇವರುಗಳನ್ನು ಇಲಾಖೆಯ ಮಾನ್ಯತಾ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಕ್ರಮವಹಿಸಲಾಗುವುದು.

  • ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರವು ಸಮಗ್ರವಾದ ಯೋಜನೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ರೂಪಿಸಿದೆ. ಭಾರತ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ತೀರುವಳಿ ಹಾಗೂ UNESCO ಸಹಮತಿ ಪಡೆದು ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲಾಗುವುದು.

ಪರಿಶಿಷ್ಟ ಜಾತಿಗಳ ಕಲ್ಯಾಣ

  • ಪ್ರತಿ ಜಿಲ್ಲೆಗೆ 150 ಸಂಖ್ಯಾಬಲದ ಒಂದು ಬಾಲಕಿಯರ ಮತ್ತು ಒಂದು ಬಾಲಕರ ಒಟ್ಟು 62 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಸ್ಥಾಪನೆ.

  • ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣಕ್ಕೆ ಅನುವು ಮಾಡಿಕೊಡಲು ಒಟ್ಟು 31 ವಸತಿ ಶಾಲೆಗಳನ್ನು ಉನ್ನತೀಕರಿಸಲಾಗುವುದು.

  • ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಒಟ್ಟು 40 ಹೊಸ ವಸತಿ ಶಾಲೆಗಳ ಸ್ಥಾಪನೆ.

  • ಕ್ರೈಸ್ ವಸತಿ ಶಾಲೆಗಳಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ನೀಡಲು 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಕನ್ನಡ ಚಿತ್ರರಂಗಕ್ಕೆ ಸರ್ಕಾರದ ಘೋಷಣೆ

  • ಈ ವರ್ಷದ ಬಜೆಟ್​​ನಲ್ಲಿ ರಾಜ್ಯ ಸರ್ಕಾರ ಕನ್ನಡ ಚಿತ್ರರಂಗಕ್ಕೆ ಫಿಲ್ಮಿ ಸಿಟಿ ಯಲ್ಲಿ ಥೀಮ್ ಪಾರ್ಕ್, ಸ್ಟಾರ್ ಹೋಟೆಲ್ ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದೆ.

  • ಚಿತ್ರರಂಗದ ನೆರವಿಗೆ “ಸಿನಿ ಮಿತ್ರ” ಡಿಜಿಟಲ್ ವ್ಯವಸ್ಥೆ ಜಾರಿಗೆ ಒಪ್ಪಿಗೆ ನೀಡಲಾಗಿದ್ದು, ಉತ್ತಮ ಚಿತ್ರಗಳಿಗೆ ಸಬ್ಸಿಡಿಗಾಗಿ 20 ಕೋಟಿ ಅನುದಾನ ಘೋಷಣೆ ಮಾಡಿದ್ದಾರೆ.

  • ಚಿತ್ರೀಕರಣ ಸ್ಥಳಗಳ ಮಾಹಿತಿಗಾಗಿ ʻಕರ್ನಾಟಕ ಫಿಲ್ಮ್‌ ಲೊಕೇಷನ್‌ ಡಿಜಿಟಲ್‌ ಮ್ಯಾಪ್‌ʼ ಅಭಿವೃದ್ಧಿ

ವೈದ್ಯಕೀಯ ಶಿಕ್ಷಣಕ್ಕೆ ಸರ್ಕಾರ ಮಹತ್ವ

  • ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನವನ್ನು ಮತ್ತು ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಗಳ ಅನುದಾನ ಮೀಸಲು.

  • ರೂ.180 ಕೋಟಿ ವೆಚ್ಚದಲ್ಲಿ ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.

  • ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ.

  • ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ 'ಶಾಂತವೇರಿ ಗೋಪಾಲಗೌಡ ಆಸ್ಪತ್ರೆ' ಎಂದು ಮರುನಾಮಕರಣ.

ಹಲವು ಇಲಾಖೆಗಳಿಗೆ ಆದಾಯದ ಗುರಿ ಕೊಟ್ಟ ಸರ್ಕಾರ

2026-27ನೇ ಸಾಲಿನ ರಾಜ್ಯ ಬಜೆಟ್​​ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಾರಿ ಹಲವು ಇಲಾಖೆಗಳಿಗೆ ಆದಾಯದ ಗುರಿ ನೀಡಿದ್ದಾರೆ.

  • ಸಾರಿಗೆ ಇಲಾಖೆಗೆ: 15500 ಕೋಟಿ ರೂ.

  • ನೊಂದಣಿ ಮುದ್ರಾಂಕ: 29000 ಕೋಟಿ ರೂ.

  • ಅಬಕಾರಿ ಇಲಾಖೆ: 45000 ಕೋಟಿ ರೂ.

  • ಗಣಿ ಇಲಾಖೆ: 11000 ಕೋಟಿ ರೂ.

  • ವಾಣಿಜ್ಯ ಇಲಾಖೆ: 125000 ಕೋಟಿ ರೂ. ಗುರಿ ನೀಡಿದ್ದಾರೆ.

ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ

  • ರೂ.900 ಕೋಟಿ ಅನುದಾನದಡಿ ಆರೋಗ್ಯ ಇಲಾಖೆಯಲ್ಲಿನ ಮೂಲಸೌಕರ್ಯ ಅಭಿವೃದ್ಧಿ

  • ರೂ. 45 ಕೋಟಿ ಅನುದಾನದಡಿ ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಸಮಗ್ರ ಆಘಾತ ಆರೈಕೆ (Trauma Care) ಸೇವೆಗಳನ್ನು ಒದಗಿಸಲು ತುರ್ತು ಚಿಕಿತ್ಸಾ ವಿಭಾಗ, ಶಸ್ತ್ರಚಿಕಿತ್ಸಾ ಕೊಠಡಿ ಮತ್ತು ಐಸಿಯುಗಳಿಗೆ ವೈದ್ಯಕೀಯ ಉಪಕರಣಗಳು ಮತ್ತು ಸಾಧನಗಳನ್ನು ಹಂತ ಹಂತವಾಗಿ ಪೂರೈಸುವ ಮೂಲಕ ಮೇಲ್ದರ್ಜೆಗೆ ಟೈಪ್-1 ಮಧುಮೇಹದಿಂದ (Type-1 Diabetes) ಬಳಲುತ್ತಿರುವ 18 ವರ್ಷ ವಯಸ್ಸಿನವರೆಗಿನ ಮಕ್ಕಳ ಆರೋಗ್ಯವನ್ನು ಸುಧಾರಿಸುವ ನಿಟ್ಟಿನಲ್ಲಿ ಉಚಿತ ಇನ್ಸುಲಿನ್ ಪೆನ್‌ಗಳನ್ನು ನೀಡಲಾಗುವುದು.

  • ಇಲಾಖೆಯಲ್ಲಿ ಖಾಲಿ ಇರುವ 2,500 ಹುದ್ದೆಗಳ ಭರ್ತಿ

ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಒತ್ತು

  • ರೂ.2,500 ಕೋಟಿ ವೆಚ್ಚದಲ್ಲಿ 'ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ' ಅನುಷ್ಠಾನ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್‌ಗಳು ಮಾದರಿ ಸಂಸ್ಥೆಗಳಾಗಿ ಅಭಿವೃದ್ಧಿ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್‌ ಸಂಸ್ಕೃತಿಯ ಪ್ರೋತ್ಸಾಹಕ್ಕಾಗಿ 9 ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ.

  • ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ.

  • ರಾಜ್ಯದ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು ರೂ.31 ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯ ವ್ಯವಸ್ಥೆ ನಿರ್ಮಾಣ.

  • ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಕ್ರಮ.

ಈ ಬಾರಿಯೂ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟ ಸರ್ಕಾರ, ಯುವನಿಧಿಗಿಲ್ಲ ಅನುದಾನ

  • ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ಹಣ ಮೀಸಲು

  • ಅನ್ನ ಭಾಗ್ಯ ಯೋಜನೆಗೆ 6,200 ಕೋಟಿ ಮೀಸಲು

  • ಗೃಹ ಜ್ಯೋತಿ ಯೋಜನೆಗೆ ಈ ವರ್ಷ 10,578 ಕೋಟಿ ಮೀಸಲು

  • ಶಕ್ತಿ ಯೋಜನೆಗೆ 5,300 ಕೋಟಿ ಹಣ ಮೀಸಲು

  • ಯುವ ನಿಧಿಗೆ ಯಾವುದೇ ಅನುದಾನ ಮೀಸಲಿಡದ ಸರ್ಕಾರ

ಶಿಕ್ಷಣ ಕ್ಷೇತ್ರ

  • ಮುಂದಿನ 3 ವರ್ಷಗಳಲ್ಲಿ ರೂ.3,900 ಕೋಟಿ ಅನುದಾನದಡಿ ʼಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಉನ್ನತೀಕರಿಸಲಾಗುವುದು

  • ಸರ್ಕಾರಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ ರೂ.565 ಕೋಟಿ, ಶೌಚಾಲಯ ನಿರ್ಮಾಣಕ್ಕಾಗಿ ರೂ.75 ಕೋಟಿ ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು ರೂ.25 ಕೋಟಿ ಅನುದಾನ ಹಂಚಿಕೆ

  • ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂ.ಗಳ ಅನುದಾನ

  • 2026-27 ಸಾಲಿನಲ್ಲಿ ಶಾಲಾ - ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳ ಭರ್ತಿಗೆ ಕ್ರಮ

  • ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರ ನೇಮಕ

  • ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ ರೂ.10 ಕೋಟಿ ಅನುದಾನ

  • ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಗೆ ನಿಷೇಧ

ಸಣ್ಣ ನೀರಾವರಿ ಕ್ಷೇತ್ರಕ್ಕೆ ಸರ್ಕಾರ ಆದ್ಯತೆ

  • ರೂ.237 ಕೋಟಿ ಅಂದಾಜು ವೆಚ್ಚದಲ್ಲಿ ಹೆಬ್ಬಾಳ - ನಾಗವಾರ ಕಣಿವೆಯ ಮೂರನೇ ಹಂತದಲ್ಲಿ ಶಿಡ್ಲಘಟ್ಟದ ಅಮಾನಿ ಕೆರೆಯಿಂದ ಶಿಡ್ಲಘಟ್ಟ ತಾಲೂಕಿನ 45 ಕೆರೆಗಳಿಗೆ ಮತ್ತು ಚಿಂತಾಮಣಿ ತಾಲೂಕಿನ 119 ಕೆರೆಗಳೂ ಸೇರಿ ಒಟ್ಟಾರೆ 164 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಅನುಷ್ಠಾನ

  • ರೂ.140 ಕೋಟಿ ಅಂದಾಜು ಮೊತ್ತದಲ್ಲಿ ಹೆಚ್‌.ಎನ್‌ ವ್ಯಾಲಿ ಯೋಜನೆಯಿಂದ ಸಂಸ್ಕರಿಸಿದ ತ್ಯಾಜ್ಯ ನೀರನ್ನು ಹೊಸಕೋಟೆ ತಾಲೂಕಿನ ಸೂಲಿಬೆಲೆ ಮತ್ತು ನಂದಗುಡಿ ಹೋಬಳಿಗಳ 59 ಕೆರೆಗಳಿಗೆ ಏತ ನೀರಾವರಿ ಮೂಲಕ ತುಂಬಿಸುವ ಕಾಮಗಾರಿಯ ಅನುಷ್ಠಾನ

  • ರೂ.650 ಕೋಟಿ ವೆಚ್ಚದಲ್ಲಿ ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 308 ಎಂಎಲ್‌ಡಿ ನೀರನ್ನು ಗೋಪಾಲಪುರ ಕೆರೆಯಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲೂಕಿನ 41 ಕೆರೆಗಳನ್ನು ತುಂಬಿಸುವ ಯೋಜನೆಯ ಅನುಷ್ಠಾನ

  • ಕೊಪ್ಪಳ ಜಿಲ್ಲೆಯ ಯಲಬುರ್ಗಾ, ಕುಕನೂರು ಹಾಗೂ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಜಿಡಗಾದಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಕೆರೆಗಳ ಆಧುನೀಕರಣ, ಅಣೆಕಟ್ಟು, ಪಿಕ್‌-ಅಪ್‌ & ಚೆಕ್‌ ಡ್ಯಾಂ ನಿರ್ಮಾಣ

ನೀರಾವರಿ ವಲಯದ ಅಭಿವೃದ್ಧಿ

  • ಮೇಕೆದಾಟು ಯೋಜನೆಯ ಪರಿಷ್ಕೃತ ವಿಸ್ತೃತ ಯೋಜನಾ ವರದಿಯನ್ನು (DPR) ಶೀಘ್ರವೇ ಸಿದ್ಧಪಡಿಸಿ ಅನುಮೋದನೆಗೆ ಹಾಗೂ ಅರಣ್ಯ ಪ್ರದೇಶದ ಬಳಕೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು

  • ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ ಹಂತದಲ್ಲಿ ಬಾಕಿ ಇರುವ 18.73 ಕಿ.ಮೀ ಉದ್ದದ ಕಾಲುವೆ ಕಾಮಗಾರಿಗಳನ್ನು ಶೀಘ್ರವೇ ಪೂರ್ಣಗೊಳಿಸಲಾಗುವುದು.

  • ಹೆಚ್ಚುವರಿಯಾಗಿ ನೀರನ್ನು ಸಂಗ್ರಹಿಸಿ ಸದ್ಬಳಕೆ ಮಾಡಿಕೊಳ್ಳಲು ಕೊರಟಗೆರೆ ತಾಲೂಕಿನ ವಡೇರಹಳ್ಳಿ ಸಮೀಪ 1.2 ಟಿ.ಎಂ.ಸಿ. ಸಾಮರ್ಥ್ಯದ ಸಮತೋಲನಾ ಜಲಾಶಯವನ್ನು ನಿರ್ಮಿಸಲಾಗುವುದು

  • ಚಾಮರಾಜನಗರದ ಹನೂರು ತಾಲೂಕಿನಲ್ಲಿ ಅಂತರ್ಜಲ ವೃದ್ಧಿ ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ರೂ.490 ಕೋಟಿ ವೆಚ್ಚದಲ್ಲಿ ಉಡುತೊರೆಹಳ್ಳ ಯೋಜನೆ ಅನುಷ್ಠಾನ

  • ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ 0.67 ಟಿಎಂಸಿ ಸಾಮರ್ಥ್ಯದ ಸಂಗ್ರಹಣಾ ಜಲಾಶಯವನ್ನು ತುಬಚಿ - ಬಬಲೇಶ್ವರ ಏತ ನೀರಾವರಿ ಯೋಜನೆಯಡಿ ನಿರ್ಮಿಸಲು ತಾತ್ವಿಕ ಅನುಮೋದನೆ

  • ಕೃಷ್ಣಾ, ಕಾವೇರಿ, ಗೋದಾವರಿ ಹಾಗೂ ಇತರೆ ನದಿ ಕಣಿವೆಗಳಲ್ಲಿ ಒಟ್ಟಾರೆ ರೂ. 8,045 ಕೋಟಿ ಮೊತ್ತದ 75 ನೀರಾವರಿ ಕಾಮಗಾರಿಗಳ ಅನುಷ್ಠಾನ

ಕೃಷಿ ಕ್ಷೇತ್ರದ ಅಭಿವೃದ್ಧಿ

  • ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿಲ್ಲಾ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ʼಕೃಷಿ ಉದ್ದಿಮೆ ತರಬೇತಿ ಕೇಂದ್ರʼವಾಗಿ ಉನ್ನತೀಕರಣ

  • ಸಣ್ಣ, ಅತೀ ಸಣ್ಣ ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಎತ್ತು ಚಾಲಿತ ಹಾಗೂ ಕೈಚಾಲಿತ ಉಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆಯಡಿ ಒದಗಿಸಲಾಗುವುದು

  • ಬಿತ್ತನೆ ಬೀಜ, ಕೀಟನಾಶಕ, ರಸಗೊಬ್ಬರ ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ MSIL ವತಿಯಿಂದ ರೈತ ಮಾಲ್‌ಗಳ ಸ್ಥಾಪನೆ

ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ

ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ

ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ₹10 ಕೋಟಿ ವೆಚ್ಚದಲ್ಲಿ ಸಮುದಾಯ ಆಧಾರಿತ ರೋಗ - ಕೀಟ ನಿಯಂತ್ರಣ ಕ್ರಮಗಳ ಜಾರಿ

ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ರೂ.64 ಕೋಟಿ ವೆಚ್ಚದಲ್ಲಿ ಒಟ್ಟು 12,000 ಮೆಟ್ರಿಕ್‌ ಟನ್‌ ಸಾಮರ್ಥ್ಯದ ಎರಡು ಶೀತಲಗೃಹಗಳ ಸ್ಥಾಪನೆ

ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾಂಬುಧಿ ಸಸ್ಯ ತೋಟದ ಸಮಗ್ರ ಅಭಿವೃದ್ಧಿ

ಕಲಬುರಗಿಯಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ

  • ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ಇರುವ 10 ರೂ. ಸಾಗಾಣಿಕಾ ವೆಚ್ಚ 20 ರೂ.ಗೆ ಹೆಚ್ಚಳ

  • ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್‌ ಪಾರ್ಕ್‌ಗಳ ಸ್ಥಾಪನೆ

  • ರೇಷ್ಮೆ ಇಲಾಖೆಯ ಆಯ್ದ ಕ್ಷೇತ್ರಗಳಲ್ಲಿ ಲಭ್ಯವಿರುವ ಜಮೀನಿನಲ್ಲಿ ರೈತ ಉದ್ಯಮಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳ ಸ್ಥಾಪನೆ

ಹೈನುಗಾರಿಕೆ ಅಭಿವೃದ್ಧಿ

  • 2026-27 ನೇ ಸಾಲಿನಲ್ಲಿ ನಬಾರ್ಡ್‌ ಸಹಯೋಗದೊಂದಿಗೆ 100 ಹೊಸ ಪಶು ವೈದ್ಯಕೀಯ ಕಟ್ಟಡಗಳ ನಿರ್ಮಾಣ

  • ರೂ.10 ಕೋಟಿ ವೆಚ್ಚದಲ್ಲಿ 15 ತಾಲೂಕು ಪಶು ಆಸ್ಪತ್ರೆಗಳು ಪಾಲಿಕ್ಲಿನಿಕ್‌ಗಳಾಗಿ ಮೇಲ್ದರ್ಜೆಗೆ

  • ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಬೋಯರ್‌ ಮೇಕೆ ತಳಿ ಸಂವರ್ಧನಾ ಕೇಂದ್ರವನ್ನು ಸ್ಥಾಪನೆ

  • ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳನ್ನು ನಿವಾರಿಸಲು ʼವರ್ಷಕ್ಕೊಂದು ಕರುʼ ಎಂಬ ಘೋಷವಾಕ್ಯದೊಂದಿಗೆ ರೂ.5 ಕೋಟಿ ವೆಚ್ಚದಲ್ಲಿ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ ʼಫಲಧಾರೆʼ ಶಿಬಿರಗಳ ಆರಂಭ.

ಸಹಕಾರಿ ವಲಯದ ಅಭಿವೃದ್ಧಿ

  • ಪ್ರಸಕ್ತ ಸಾಲಿನಲ್ಲಿ 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 30,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಗುರಿ

  • ಸಹಕಾರ ಸಂಘಗಳ ನಿಬಂಧಕರ ಹಂತದಲ್ಲಿ ವಿವಿಧ ಸೇವೆಗಳನ್ನು (ಕಾಯ್ದೆಗಳು) ಜನಸಾಮಾನ್ಯರಿಗೆ ಸುಲಭವಾಗಿ ಒದಗಿಸಲು ದತ್ತಾಂಶವನ್ನು ಆನ್‌ಲೈನ್‌ನಲ್ಲಿ ನಿರ್ವಹಿಸಲು ಕ್ರಮ

  • ಪ್ರಸಕ್ತ ಸಾಲಿನಲ್ಲಿ ಮೈಸೂರು (ಬಂಬೂ ಬಜಾರ್‌) ಮತ್ತು ಹುಬ್ಬಳ್ಳಿ (ಕಾಟನ್‌ ಮಾರ್ಕೆಟ್‌) ಕೇಂದ್ರಗಳಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣ

  • ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯಚಟುವಟಿಕೆಗಳನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲು 10 ಕೋಟಿ ರೂ. ವೆಚ್ಚದಲ್ಲಿ ERP (Enterprise Resource Planning) ವ್ಯವಸ್ಥೆ ಜಾರಿ

ಮೀನುಗಾರಿಕೆ ಅಭಿವೃದ್ಧಿ

  • ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್‌ ದರ 10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಳ

  • ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್‌ ಆಫ್‌ ಎಕ್ಸಲೆನ್ಸ್ ಸ್ಥಾಪನೆ

  • ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ

  • ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು.

ವೈಷ್ಣೋದೇವಿ ಯಾತ್ರಿಕರಿಗೆ 5 ಸಾವಿರ ರೂ. ಸಹಾಯ ಧನ

ರಾಜ್ಯದಿಂದ ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ರೂ.ಗಳ ಸಹಾಯಧನವನ್ನು ಡಿ.ಬಿ.ಟಿ ಮೂಲಕ ವಿತರಣೆ. ಇದಕ್ಕಾಗಿ ಐದು ಕೋಟಿ ರೂ. ಅನುದಾನ ಮೀಸಲು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳಿಗೆ ಮೂಲಭೂತ ಸೌಲಭ್ಯ ಹಾಗೂ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕೈಗೊಳ್ಳಲು ಅಭಿವೃದ್ಧಿ ಪ್ರಾಧಿಕಾರಗಳನ್ನು ರಚನೆ.

ಅನ್ನಭಾಗ್ಯ ಯೋಜನೆ

ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಿಸುವುದಾಗಿ ಸಿಎಂ ಘೋಷಣೆ.

ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ

ಕೃಷಿ ಬೆಳೆಗಳ ಮೌಲ್ಯವರ್ಧನೆ ಹಾಗೂ ಕೃಷಿ ತ್ಯಾಜ್ಯ ಮರುಬಳಕೆ ಉತ್ತೇಜಿಸಲು ಮುಂದಿನ 3 ವರ್ಷಗಳಲ್ಲಿ ʻಮುಖ್ಯಮಂತ್ರಿ ಕೃಷಿ ವಿಸ್ತಾರʼ ಯೋಜನೆ ಜಾರಿಗೆ 100 ಕೋಟಿ ರೂಪಾಯಿ ಮೀಸಲು.

ಎಲ್ಲಾ ಜಿಲ್ಲೆಗಳಲ್ಲಿ ಅಕ್ಕ ಪಡೆ ಯೋಜನೆ ಜಾರಿ

ಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವುದು.

ಧನಶ್ರೀ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹ ಧನ ಹೆಚ್ಚಳ ಮಾಡಲಾಗುವುದು.

30 ಸಾವಿರ ರೂಪಾಯಿಯಿಂದ 45 ಸಾವಿರ ರೂ.ಗೆ ಹೆಚ್ಚಳ ಮಾಡಲಾಗುವುದು .

18 ವರ್ಷದ ಮಕ್ಕಳಿಗಾಗಿ ಮಾದಕ ವ್ಯಸನಿ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು.

ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ನೀಡಲಾಗುವುದು

ದಾವಣಗೆರೆಗೆ ಪ್ರತ್ಯೇಕವಾಗಿ ಅನುದಾನ

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಪ್ರತ್ಯೇಕವಾಗಿ ಅನುದಾನ ಘೋಷಣೆ ಮಾಡಲಾಗಿದೆ.

ನಗರಾಭಿವೃದ್ಧಿ ಇಲಾಖೆಯಿಂದ ವಿಶೇಷ ಅನುದಾನ ಘೋಷಣೆ ಮಾಡಲಾಗಿದ್ದು, ದಾವಣಗೆರೆ ದಕ್ಷಿಣ ಕ್ಷೇತ್ರದ ಎಸ್‌ಸಿ, ಎಸ್‌ಟಿ, ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುತ್ತಿರುವ ಭಾಗಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು 100 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ AI ಕಲಿಕೆಗೆ ಪ್ರೋತ್ಸಾಹ

8 ರಿಂದ 12ನೇ ತರಗತಿ ಮಕ್ಕಳಿಗೆ AI ಕಲಿಕೆಗೆ ಪ್ರೋತ್ಸಾಹ

ಜಾತಿ ದೌರ್ಜನ್ಯ ತಡೆಯಲು ರೋಹಿತ್​ ವೇಮುಲ ಕಾಯ್ದೆ ಜಾರಿ

ಆಯುಷ್ಮಾನ್ ಯೋಜನೆಗೆ 400 ಕೋಟಿ ರೂ. ಮೀಸಲು

ರಾಜ್ಯದ ಗ್ರಾಪಂಗಳಿಗೆ ಹೊಸ ಹೆಸರು ನಾಮಕರಣ

ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಗ್ರಾ.ಪಂ. ಎಂದು ನಾಮಕರಣ, ಗ್ರಾಮ ಪಂಚಾಯಿತಿಗಳಲ್ಲಿ ಸೋಲಾರ್ ಗ್ರಿಡ್​ ಸ್ಥಾಪನೆ, ವಿದ್ಯುತ್​ ಕೊರತೆ ನೀಗಿಸಲು ಈ ಕ್ರಮ

ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ರಜೆ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಬೆಂಗಳೂರಿಗೆ ಬಂಪರ್, ಐದು ಪಾಲಿಕೆ ಮಾಡಿ ವಿಂಗಡಣೆ

ಈ ಬಾರಿ ರಾಜ್ಯ ಬಜೆಟ್​​ನಲ್ಲಿ ಬೆಂಗಳೂರು ನಗರಕ್ಕೆ ಬಂಪರ್​ ಘೋಷಣೆ ಮಾಡಲಾಗಿದೆ.

ಐದು ಪಾಲಿಕೆ ಮಾಡಿ ವಿಂಗಡಣೆ ಮಾಡಲಗಿದೆ. 2025-26ನೇ ಸಾಲಿಗೆ ಬೆಂಗಳೂರು ಅಭಿವೃದ್ಧಿಗೆ 3 ಸಾವಿರ ಕೋಟಿ ಬದಲು, 7 ಸಾವಿರ ಕೋಟಿಗೆ ಅನುದಾನ ಹೆಚ್ಚಳ ಮಾಡಲಾಗಿದೆ.

3 ಸಾವಿರ ಕೋಟಿ ವೆಚ್ಚದಲ್ಲಿ 450 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. 175 ಜಂಕ್ಷನ್ ಸೌಂದರ್ಯೀಕರಣ, 500 ಕಿ.ಮೀ ಪಾದಚಾರಿ ಮಾರ್ಗ ಮೇಲ್ದರ್ಜೆಗೆ, 100 ಸ್ಕೈ ವಾಕ್ ನಿರ್ಮಾಣದ ಉದ್ದೇಶ ಇದೆ.

ಬೆಂಗಳೂರನ್ನ ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರ ಮಾಡುವ ಉದ್ದೇಶ ಇದೆ ಎಂದು ಸರ್ಕಾರ ಹೇಳಿದೆ.

ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ 1,255 ಕೋಟಿ ರೂ.ಗಳ ಮೊತ್ತದ ವಾರ್ಡ್ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ.

1,700 ಕೋಟಿ ರೂ.ಗಳ ಮೊತ್ತದಲ್ಲಿ 158 ಕಿ.ಮೀ. ಉದ್ದರ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ. 1,936 ಕೋಟಿ ರೂ.ಗಳ ಮೊತ್ತದ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಅಭಿವೃದ್ಧಿ, ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗೂ ಹೊರ ವರ್ತುಲ ರಸ್ತೆಯನ್ನು ಅಭಿವೃದ್ಧಿಪಡಿಸುವ 450 ಕೋಟಿ ರೂ.ಗಳ ಯೋಜನೆ, 273 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ರಾಜಕಾಲುವೆಗಳ ಮೇಲ್ದರ್ಜೆಗೇರಿಸುವುದು ಮತ್ತು ಕರೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಸರ್ಕಾರ ನಿರ್ಧಾರ ಮಾಡಿದೆ.

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ. AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು,

2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು,

7 ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ 1,593 ಕೋಟಿ ರೂ. ಮೀಸಲಿಡಲಾಗುವುದು.

ಏರ್​ಪೋರ್ಟ್​ಗಳ ಅಭಿವೃದ್ಧಿಗೆ ಈ ವರ್ಷ 200 ಕೋಟಿ ರೂ. ಅನುದಾನ,ವಿಜಯಪುರ, ಶಿವಮೊಗ್ಗದಲ್ಲಿ ಫ್ಲೈಟ್ ಟ್ರೈನಿಂಗ್ ಸ್ಕೂಲ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.

IVF ಕೇಂದ್ರಗಳನ್ನು ಸ್ಥಾಪಿಸಲು ಅನುದಾನ

ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ನಿರ್ಧಾರ

ಈ ಬಾರಿ ಬಜೆಟ್​ನಲ್ಲಿ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ. ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ಮುಖ್ಯ ಎಂದು ಸರ್ಕಾರ ಹೇಳಿದೆ.

ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡ ಪುನರ್​ ನಿರ್ಮಾಣ

ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್​ ಘೋಷಣೆ

ಬೆಂಗಳೂರಿನಲ್ಲಿ 2 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್​ ಘೋಷಣೆ

ಧಾರವಾಡದಲ್ಲಿ 4 ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್​ ಘೋಷಣೆ

ಗರ್ಭಿಣಿ, ಬಾಣಂತಿಯರಿಗೆ ಬಿಸಿಯೂಟ

ಗರ್ಭಿಣಿ, ಬಾಣಂತಿಯರಿಗೆ ಬಿಸಿಯೂಟ ಯೋಜನೆ

ಅಂಗನವಾಡಿಯಲ್ಲಿ ಅವರಿಗೆ ಬಿಸಿಯೂಟ ನೀಡಲಾಗುವುದು

ಮನೆಗಳಿಗೆ ನೀಡಲಾಗುತ್ತಿದ್ದ ಪಡಿತರ ರದ್ದು ಮಾಡಿ ಈ ಕ್ರಮ

ಎಸ್​ಸಿ-ಎಸ್​ಟಿ ಮಹಿಳೆಯರಿಗೆ ಹಾಸ್ಟೆಲ್​

ಉದ್ಯೋಗಸ್ಥ ಎಸ್​ಸಿ-ಎಸ್​ಟಿ ಮಹಿಳೆಯರಿಗೆ ಹಾಸ್ಟೆಲ್​

ಮೈಸೂರು, ಬೆಂಗಳೂರು, ಮಂಗಳೂರು ಬೆಳಗಾವಿಯಲ್ಲಿ ಹಾಸ್ಟೆಲ್

ರಾಜ್ಯದ 9 ಜಿಲ್ಲೆಗಳಲ್ಲಿ 50 ಒಬಿಸಿ ಹಾಸ್ಟೆಲ್​ ನಿರ್ಮಾಣ ಘೋಷಣೆ

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ಘೋಷಣೆ

ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ನೀಡಲಾಗುವುದು, ಮೂರು ವರ್ಷಗಳಲ್ಲಿ ಅವಧಿಯಲ್ಲಿ 13,000 ಕೋಟಿಗಳ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಮೀನುಗಾರಿಕೆಗೆ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ

ಈ ಬಾರಿಯ ಬಜೆಟ್ ನಲ್ಲಿ ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಿರುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ.

ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್‌ಲೆನ್ಸ್,ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಸ್ಥಾಪನೆ ಮಾಡಲಾಗುವುದು.

38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಅಡಿಕೆ ಬೆಳೆಗಾರರು, ತೆಂಗು ಬೆಳೆಗಾರರ ಸಮಸ್ಯೆ ನಿವಾರಣೆಗೆ 10 ಕೋಟಿ ರೂ. ಮೀಸಲು

ಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ.

ಅಬಕಾರಿ ಸುಂಕ ದರ ನಿಗದಿ ಸ್ಲ್ಯಾಬ್ ಇಳಿಕೆ

ಪ್ರಸಕ್ತ ಸಾಲಿನಲ್ಲಿ ಅಬಕಾರಿ ಸುಂಕ ದರ ನಿಗದಿ ಸ್ಲ್ಯಾಬ್ ಇಳಿಕೆ ಮಾಡಲಾಗಿದ್ದು, ಇದರಿಂದ ಮದ್ಯಪ್ರಿಯರಿಗೆ ಕೊಂಚ ನಿರಾಳ ಸಿಗುವ ಸಾಧ್ಯತೆ ಇದೆ. 16 ಸ್ಲಾಬ್ ಬದಲು 8 ಸ್ಲ್ಯಾಬ್ ಮೂಲಕ ತೆರಿಗೆ ಸಂಗ್ರಹ ಮಾಡಲು ಸರ್ಕಾರ ನಿರ್ಧರಿಸಿದೆ.

ಪಾನಿಯಗಳಿಗೂ ಅಬಕಾರಿ ಸುಂಕ ವಿಸ್ತರಣೆ

ಪ್ರಸಕ್ತ ಸಾಲಿನಲ್ಲಿ ಮದ್ಯದ ಅಂಶವಿರುವ ಪಾನಿಯಗಳಿಗೂ ಅಬಕಾರಿ ಸುಂಕ ವಿಸ್ತರಣೆ ಮಾಡಲಾಗಿದೆ.

ಪ್ರತಿ ಲೀಟರ್‌ನಲ್ಲಿ ಮದ್ಯದ ಅಂಶದ ಆದಾರದ ಮೇಲೆ ಅಬಕಾರಿ ಸುಂಕ ನಿರ್ಧಾರ ಮಾಡಲಾಗುತ್ತದೆ ಎಂದು ಸರ್ಕಾರ ಘೋಷಣೆ ಮಾಡಿದೆ.

ಬೆಂಗಳೂರಿನ ಕರಗ ಉತ್ಸವಕ್ಕೆ ಅನುದಾನ

ಪ್ರಸಕ್ತ ವರ್ಷ ಬೆಂಗಳೂರಿನ ಕರಗ ಉತ್ಸವಕ್ಕೆ 2 ಕೋಟಿ ಅನುದಾನ ಮೀಸಲು ಇಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಸುಮಾರು ಮೂರು ಕೋಟಿ ವೆಚ್ಚದಲ್ಲಿ ತುಮಕೂರು ಗುಬ್ಬಿ ವೀರಣ್ಣ ಕಲಾಕ್ಷೇತ್ರದ ನವೀಕರಣ ಮಾಡಲಾಗುತ್ತಿದೆ. ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ 2 ಕೋಟಿ, ಮೈಸೂರಿನ ಕಾವಾದಲ್ಲಿ ಹವ್ಯಕರಿಗಾಗಿ ಹವ್ಯಕ ಭಾಷಾ ಅಕಾಡೆಮಿ ನಿರ್ಮಿಸಲಾಗುತ್ತಿದೆ.

ದಲಿತ ಕವಿ ಸಿದ್ದಲಿಂಗಯ್ಯ ಹೆಸರಿನಲ್ಲಿ ಟ್ರಸ್ಟ್, ಡಾ.ಡಿ.ಆರ್.ನಾಗರಾಜು ಟ್ರಸ್ಟ್ ಸ್ಥಾಪನೆಗೆ ನಿರ್ಧಾರ ಮಾಡಲಾಗಿದೆ. ದಲಿತ ಸಾಹಿತ್ಯ ಪುಸ್ತಕ ಪ್ರಕಟಣೆಗೆ 1 ಕೋಟಿ, ಗೋರ್ ಬಂಜಾರ ವಿಶ್ವಕೋಶ ಪ್ರಕಟಣೆ, ಕುವೆಂಪು ವಿವಿಯಲ್ಲಿ ಯು.ಆರ್.ಅನಂತಮೂರ್ತಿ ಅಧ್ಯಯನ ಪೀಠ, ಸಂತ ಶಿಶುನಾಳ ಷರೀಫ್ ಹೆಸರಿನಲ್ಲಿ ಪ್ರತಿಷ್ಠಾನ, ಬೆಳವಡಿ ಮಲ್ಲಮ್ಮ ಹೆಸರಲ್ಲಿ ಪ್ರತಿಷ್ಠಾನ, ಜಿಎಸ್ ಶಿವರುದ್ರಪ್ಪ ಹೆಸರಿನಲ್ಲಿ‌ ಪ್ರಶಸ್ತಿ ನೀಡಿಕೆಗೆ 2 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯ ಬಜೆಟ್ 2026-27: ಯಾವ ಇಲಾಖೆಗೆ ಎಷ್ಟು ಅನುದಾನ?

  • ಶಿಕ್ಷಣ: 47,224 ಕೋಟಿ ರೂ.

  • ಮಹಿಳಾ ಮತ್ತು ಮಕ್ಕಳ ಕಲ್ಯಾಣ: 34,929 ಕೋಟಿ ರೂ.

  • ಇಂಧನ: 29,947 ಕೋಟಿ ರೂ.

  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 26,559 ಕೋಟಿ ರೂ.

  • ಲೋಕೋಪಯೋಗಿ ಮತ್ತು ಸಾರಿಗೆ: 23,100 ಕೋಟಿ ರೂ.

  • ನೀರಾವರಿ: 22,436 ಕೋಟಿ ರೂ.

  • ನಗರಾಭಿವೃದ್ಧಿ ಮತ್ತು ವಸತಿ: 22,203 ಕೋಟಿ ರೂ.

  • ಕಂದಾಯ: 19,843 ಕೋಟಿ ರೂ.

  • ಸಮಾಜ ಕಲ್ಯಾಣ: 18,612 ಕೋಟಿ ರೂ.

  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ: 17,817 ಕೋಟಿ ರೂ.

  • ಒಳಾಡಳಿತ (ಗೃಹ): 11,424 ಕೋಟಿ ರೂ.

  • ಕೃಷಿ ಮತ್ತು ತೋಟಗಾರಿಕೆ: 8,373 ಕೋಟಿ ರೂ.

  • ಆಹಾರ ಮತ್ತು ನಾಗರಿಕ ಸರಬರಾಜು: 7,942 ಕೋಟಿ ರೂ.

  • ಪಶುಸಂಗೋಪನೆ ಮತ್ತು ಮೀನುಗಾರಿಕೆ: 4,084 ಕೋಟಿ ರೂ.

  • ಇತರೆ ವಲಯಗಳು: 1,72,757 ಕೋಟಿ ರೂ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲು

  • ಹಸು, ಹೆಮ್ಮೆ ಖರೀದಿಸಲು 40 ಸಾವಿರ ಪ್ರೋತ್ಸಾಹಧನ

  • ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ

  • ಶಾಂತವೇರಿ ಗೋಪಾಲಗೌಡ ಹೆಸರು ನಾಮಕರಣ

ಇಂದಿರಾ ಕಿಟ್ ವಿತರಣೆಗೆ 6,200 ಕೋಟಿ ಮೀಸಲು

ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಇಂದಿರಾ ಕಿಟ್ ವಿತರಣೆಗೆ 2026- 27ನೇ ಸಾಲಿನಲ್ಲಿ 6,200 ಕೋಟಿ ಮೀಸಲು ಇಡಲಾಗಿದೆ.

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧ

ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.

ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಬಜೆಟ್‌ನಲ್ಲಿ ಘೋಷಣೆ

ಬೆಂಗಳೂರು ಅಭಿವೃದ್ಧಿಗೆ ಬಂಪರ್​ ಅನುದಾನನೆ

  • ಬೆಂಗಳೂರು ಅಭಿವೃದ್ಧಿಗೆ 7 ಕೋಟಿ ಅನುದಾನ ಮೀಸಲು

  • ಎತ್ತಿನಹೊಳೆ ನೀರು ಸಂಗ್ರಹಣೆಗಾಗಿ ಜಲಾಶಯ ನಿರ್ಮಾಣ

  • ಕೋಲಾರದಲ್ಲಿ ಪ್ರಾಯೋಗಿಕ ರೈತ ಮಾಲ್​ ಸ್ಥಾಪನೆ

ಶಕ್ತಿ ಯೋಜನೆಗೆ 5300 ಕೋಟಿ ಮೀಸಲು

ರಾಜ್ಯದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಈ ವರ್ಷ 5,300 ಕೋಟಿ ಮೀಸಲಿಟ್ಟಿರುವುದಾಗ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಮೈಸೂರು ರಾಜ್ಯದ ಎರಡನೇ ಐಟಿ ಸಿಟಿಯಾಗಿ ನಿರ್ಮಾಣ

ಮೈಸೂರನ್ನು ರಾಜ್ಯದ ಎರಡನೇ ಐಟಿ ಸಿಟಿಯಾಗಿ ನಿರ್ಮಾಣ ಮಾಡಲು ಈ ಬಾರಿ ಬಜೆಟ್​​ನಲ್ಲಿ ತೀರ್ಮಾನ ಮಾಡಲಾಗಿದೆ.

ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗಾಗಿ ವೃದ್ಧಾಶ್ರಮ

ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗಾಗಿ 100 ಸಂಖ್ಯಾ ಬಲದ ಎರಡು ಮಹಿಳಾ ವೃದ್ದಾಶ್ರಮ ಪ್ರಾರಂಭ. ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ 5000 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗೆ ತಲಾ 50 ಸಾವಿರ ರೂ. ನೀಡುವುದಾಗಿ ಸರ್ಕಾರ ಘೋಷಣೆ

ಗ್ಯಾರಂಟಿ ಯೋಜನೆಗೆ 1,21,598 ಕೋಟಿ ರೂ. ವ್ಯಯ

ಗ್ಯಾರಂಟಿ ಯೋಜನೆ ಜಾರಿಯಾದಾಗಿನಿಂದ ಫೆಬ್ರವರಿ 2026 ರ ವರೆಗೆ 1,21,598 ಕೋಟಿ ವ್ಯಯ ಮಾಡಿರುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

12 ಹೊಸ ಪೊಲೀಸ್ ಠಾಣೆ ಆರಂಭ

ರಾಜ್ಯದಲ್ಲಿ ಈಗಿರುವ ಪೊಲೀಸ್​ ಠಾಣೆಗಳ ಜೊತೆಗೆ ಮತ್ತೆ 12 ಹೊಸ ಪೊಲೀಸ್​ ಠಾಣೆಯನ್ನು ಬಜೆಟ್ ಘೋಷಣೆ ಮಾಡಲಾಗಿದೆ.

ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಾಣ

ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಿಸಲಾಗುತ್ತದೆ. 100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ. ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ.

ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ. ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಬೆಂಗಳೂರಲ್ಲಿ ವೈಟ್​ ಟಾಪಿಂಗ್​​ಗೆ 1700 ಕೋಟಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವೈಟ್​​ ಟಾಪಿಂಗ್​​ಗೆ 1700 ಕೋಟಿ ಅನುದಾನ ನೀಡಲಾಗಿದೆ. 158 ಕಿ.ಮೀ ವೈಟ್​ ಟಾಪಿಂಗ್​ ಘೋಷಣೆ ಮಾಡಿದ್ದು, ವಾಹನ ಸವಾರರಿಗೆ ಅನುಕೂಲವಾಗಲಿದೆ.

ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲು

ಪ್ರಸಕ್ತ ಸಾಲಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್​​ನಲ್ಲಿ ಘೋಷಿಸಿದ್ದಾರೆ.

ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹ ಗುರಿ

ಪ್ರಸಕ್ತ ಸಾಲಿನ ಬಜೆಟ್'ನಲ್ಲಿ ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ ನೀಡಲಾಗಿದೆ. ನೊಂದಣಿ ಹಾಗೂ ಮುದ್ರಾಂಕ ಇಲಾಖೆಗೆ 29 ಸಾವಿರ ಕೋಟಿ ರಾಜಸ್ವ ಗುರಿ, ಅಬಕಾರಿ ಇಲಾಖೆ ಇಲಾಖೆಯಲ್ಲಿ 45,000 ಕೋಟಿ ರೂ. ಆದಾಯ ಗುರಿ ನೀಡಲಾಗಿದೆ.

800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ

ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿ ಒತ್ತು ನೀಡುವ ಉದ್ದೇಶದಿಂದ 800 ಕರ್ನಾಟಕ ಪಬ್ಲಿಕ್​ ಶಾಲೆ ಘೋಷಣೆ ಮಾಡಲಾಗಿದೆ. ಇದು ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ.

56 ಸಾವಿರ ಉದ್ಯೋಗ ಭರ್ತಿ

ರಾಜ್ಯದಲ್ಲಿ ನಿರುದ್ಯೋಗಿಗಳಿಗೆ ಈ ಬಾರಿ ಬಜೆಟ್​​ನಲ್ಲಿ ಗುಡ್ ನ್ಯೂಸ್ ಸಿಕ್ಕಿದೆ. 56 ಸಾವಿರ ಉದ್ಯೋಗ ಭರ್ತಿ ಮಾಡಲಾಗುತ್ತೆ ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.

ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ

ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್​ ವೇ ನಿರ್ಮಾಣ ಮಾಡಲಾಗುತ್ತದೆ. ಪಿಪಿಪಿ ಮಾದರಿಯಲ್ಲಿ ರೋಪ್​ ವೇ ನಿರ್ಮಾಣ ಮಾಡಲಾಗುತ್ತಿದೆ.

ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಮಂಡನೆ

2026-27ನೇ ಸಾಲಿನ ರಾಜ್ಯ ಬಜೆಟ್​ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.

2026-27ನೇ ಸಾಲಿನ ರಾಜ್ಯ ಬಜೆಟ್: ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭವಾಗಿದ್ದು, 17ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ.

ಸಚಿವ ಸಂಪುಟ ಸಭೆ ಮುಕ್ತಾಯ, ಬಜೆಟ್ ಪ್ರಸ್ತಾವಕ್ಕೆ ಅನುಮೋದನೆ

ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡಿದ್ದು, 2026-27ನೇ ಸಾಲಿನ ರಾಜ್ಯ ಬಜೆಟ್ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ವಿಧಾನಸೌಧಕ್ಕೆ ತೆರಳಿದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಂಪು ಸೂಟ್​ಕೇಸ್​ನೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ್ದು. ಇನ್ನು ಕೆಲವೇ ಕ್ಷಣಗಳಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಲಿದೆ.

ಇಂದು ರಾಜ್ಯ ಬಜೆಟ್ ಮಂಡನೆ: ಪತ್ರಕರ್ತರೊಂದಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Karnataka Budget 2026 : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 17ನೇ ಬಜೆಟ್ ಮಂಡನೆಗೆ ಸಿದ್ಧರಾಗಿದ್ದಾರೆ. ಮಾರ್ಚ್ 06ರಿಂದ ಮಾರ್ಚ್ 27ರವರೆಗೆ ಕರ್ನಾಟಕ ಬಜೆಟ್ ಅಧಿವೇಶನ ನಡೆಯಲಿದೆ. ಇಂದು(March 6) ಶುಕ್ರವಾರ ಬೆಳಗ್ಗೆ 10.15ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ 17ನೇ ಐತಿಹಾಸಿಕ ರಾಜ್ಯ ಬಜೆಟ್ ಮಂಡಿಸಲಿದ್ದಾರೆ.

ಪತ್ರಕರ್ತರೊಂದಿಗೆ ಡಿನ್ನರ್ ಮೀಟಿಂಗ್

ಇಂದು ದಾಖಲೆಯ ಐತಿಹಾಸಿಕ ಬಜೆಟ್ ಮಂಡನೆಗೆ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳೆದ ರಾತ್ರಿ ಬೆಂಗಳೂರಿನಲ್ಲಿ ರಾಜ್ಯದ ಹಿರಿಯ ಪತ್ರಕರ್ತರ ಜೊತೆ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂಬ ವಿಪಕ್ಷಗಳ ಆರೋಪಗಳ ಬೆನ್ನಲ್ಲೇ ನಹತ್ವಾಕಾಂಕ್ಷಿ ರಾಜ್ಯ ಬಜೆಟ್ ಇಂದು ಮಂಡನೆಯಾಗಲಿದೆ. ದಾಖಲೆ ಬಾರಿಗೆ ಬಜೆಟ್ ಮಂಡಿಸುತತಿರುವ ಸಿದ್ದರಾಮಯ್ಯ ಲೆಕ್ಕಾಚಾರಗಳ ಬಗ್ಗೆ ಎಲ್ಲರಲ್ಲೂ ಕುತೂಹಲ ಮೂಡಿದೆ.

ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆಯ 17ನೇ ಬಜೆಟ್‌ ಮಂಡಿಸಲಿದ್ದಾರೆ. 2026-27ನೇ ಸಾಲಿಗೆ 4.40 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಮಂಡನೆ ನಿರೀಕ್ಷೆಯಿದ್ದು, ರಾಜ್ಯದಲ್ಲಿ ದಾಖಲೆ ಗಾತ್ರದ ಬಜೆಟ್‌ ಮಂಡಿಸಿದ ಹಿರಿಮೆಗೂ ಅವರು ಪಾತ್ರರಾಗಲಿದ್ದಾರೆ.

ಬಜೆಟ್ ನಲ್ಲಿ ಪ್ರತಿ ಕ್ಷೇತ್ರಕ್ಕೆ 100 ಕೋಟಿ ಮೀಸಲಿಡಿ; ಕಾಂಗ್ರೆಸ್ ಶಾಸಕರ ಬೇಡಿಕೆಯಿಂದ ಒತ್ತಡದಲ್ಲಿ ಸಿದ್ದರಾಮಯ್ಯ!

Summary

ಕರ್ನಾಟಕ ವಿಧಾನಮಂಡಲದ ಬಜೆಟ್ ಅಧಿವೇಶನ ಶುಕ್ರವಾರ (ಮಾ.06) ರಂದು ಆರಂಭವಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ರ ಬಜೆಟ್ ಮಂಡಿಸುತ್ತಿದ್ದಾರೆ. ಇದು ರಾಜ್ಯದ ಹಣಕಾಸು ಸಚಿವರಾಗಿ ಅವರ ದಾಖಲೆಯ 17ನೇ ಬಜೆಟ್ ಆಗಿದೆ.

ಡಿ ದೇವರಾಜ್ ಅರಸ್ ಅವರ ದಾಖಲೆಯನ್ನು ಹಿಂದಿಕ್ಕಿ ಕರ್ನಾಟಕದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಸಿದ್ದರಾಮಯ್ಯ ಅವರ ಮತ್ತೊಂದು ಸಾಧನೆ ಇದಾಗಿದೆ.

ಬಜೆಟ್ ಅಧಿವೇಶನದ ನಂತರ ಮುಖ್ಯಮಂತ್ರಿ ಬದಲಾವಣೆಯ ಸಾಧ್ಯತೆಯ ಬಗ್ಗೆ ಊಹಾಪೋಹಗಳ ನಡುವೆ ಸಿಎಂ ಬಜೆಟ್ ಮಂಡಿಸುತ್ತಿದ್ದಾರೆ.

ಅಧಿಕೃತ ಮೂಲಗಳ ಪ್ರಕಾರ, ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಅವರು "ಹಗ್ಗದ ಮೇಲಿನ ನಡಿಗೆ" ಪರಿಸ್ಥಿತಿ ಎದುರಿಸುತ್ತಿದ್ದಾರೆ. ಅವರು ಆದಾಯ ಕೊರತೆಯನ್ನು ನೀಗಿಸುವುದು ಮತ್ತು ಅವರ ಸರ್ಕಾರದ ಜನಪ್ರಿಯ ಖಾತರಿ ಯೋಜನೆಗಳಿಗೆ ('ಶಕ್ತಿ', 'ಗೃಹ ಲಕ್ಷ್ಮಿ', 'ಗೃಹ ಜ್ಯೋತಿ', 'ಯುವ ನಿಧಿ' ಮತ್ತು 'ಅನ್ನ ಭಾಗ್ಯ') ಹಣಕಾಸು ಒದಗಿಸುವುದು ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾಗುತ್ತದೆ.

ಹೆಚ್ಚುತ್ತಿರುವ ಖರ್ಚು ಬದ್ಧತೆಗಳ ನಡುವೆ ಆದಾಯ ಕೊರತೆಯನ್ನು ಎದುರಿಸುತ್ತಿರುವ ಅವರು, ಹಣಕಾಸಿನ ಶಿಸ್ತನ್ನು ಕಾಯ್ದುಕೊಳ್ಳುವುದರ ಜೊತೆಗೆ ರಾಜ್ಯದ ಹಣಕಾಸು ನಿರ್ವಹಣೆಯ ಸವಾಲನ್ನು ಎದುರಿಸುತ್ತಿದ್ದಾರೆ.

ಸಂಪನ್ಮೂಲ ಕ್ರೋಢೀಕರಣ ಕ್ರಮಗಳನ್ನು ಮುಖ್ಯಮಂತ್ರಿಗಳು ಹುಡುಕುವ ನಿರೀಕ್ಷೆಯಿರುವುದರಿಂದ, ತೆರಿಗೆಗಳಲ್ಲಿ ಹೆಚ್ಚಳವಾಗಬಹುದು ಎಂಬ ಊಹಾಪೋಹಗಳಿವೆ. 'ಖಾತರಿ' ಯೋಜನೆಗಳ ಮೇಲಿನ ವೆಚ್ಚವನ್ನು ಕಡಿತಗೊಳಿಸಲು ಒತ್ತಾಯವಿದ್ದು, 5 ಯೋಜನೆಗಳಿಗೆ ವಾರ್ಷಿಕ ಖರ್ಚು ರೂ. 50,000 ಕೋಟಿ ಮೀರಿದೆ. 2025-26 ರಲ್ಲಿ, ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ರೂ. 51,034 ಕೋಟಿ ಹಂಚಿಕೆ ಮಾಡಿತ್ತು.

ಜಿಎಸ್‌ಟಿ ದರ ಸುಧಾರಣೆ ಮುಂತಾದ ಅಂಶಗಳಿಂದಾಗಿ ಪ್ರಸ್ತುತ ಹಣಕಾಸು ವರ್ಷದಲ್ಲಿ (2025-26) ರೂ. 18,000 ಕೋಟಿ ಆದಾಯ ಕೊರತೆಯನ್ನು ಸರ್ಕಾರ ನಿರೀಕ್ಷಿಸುತ್ತದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

2025-26ರ ಒಟ್ಟು ವೆಚ್ಚವನ್ನು 4.09 ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಆದಾಗ್ಯೂ, ಇದನ್ನು ಸುಮಾರು 3.9 ಲಕ್ಷ ಕೋಟಿ ರೂ.ಗೆ ಇಳಿಸಬಹುದು ಎಂದು ಹೇಳಲಾಗುತ್ತಿದೆ.

2025-26ರ ಬಜೆಟ್ ಅಂದಾಜಿನ ಪ್ರಕಾರ, ಮಾರ್ಚ್ 2026 ರ ಅಂತ್ಯದ ವೇಳೆಗೆ ರಾಜ್ಯದ ಒಟ್ಟು ಹೊಣೆಗಾರಿಕೆಗಳು 7,64,655 ಕೋಟಿ ರೂ.ಗಳಾಗಲಿವೆ ಎಂದು ಸರ್ಕಾರ ತಿಳಿಸಿದೆ. ಇದು ಒಟ್ಟು ರಾಜ್ಯ ದೇಶೀಯ ಉತ್ಪನ್ನದ (GSDP) ಶೇಕಡಾ 24.91 ರಷ್ಟಿದೆ ಎಂದು ಸರ್ಕಾರ ಹೇಳಿದೆ.

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.