ಜಿಎಸ್‌ಎಲ್‌ವಿ ಯಶಸ್ವಿ ಉಡಾವಣೆ

ಜನವರಿ 5ರಂದು ಜಿಎಸ್‌ಎಲ್‌ವಿ ಉಪಗ್ರಹ ವಾಹಕವನ್ನು ಉಡಾವಣೆ ಮಾಡುವ ಮೂಲಕ ಭಾರತ ಬಾಹ್ಯಾಕಾಶ ತಂತ್ರಜ್ಞಾನದಲ್ಲಿ ಮತ್ತೊಂದು ಮೈಲುಗಲ್ಲು ಸ್ಥಾಪಿಸಿತು. ಸಂಪೂರ್ಣ ಸ್ವದೇಶಿ ನಿರ್ಮಿತ ಕ್ರಯೋಜನಿಕ್ ಇಂಜಿನ್ ಹೊಂದಿದ್ದ ಜಿಎಸ್‌ಎಲ್‌ವಿ ಡಿ5 ಉಪಗ್ರಹ ವಾಹಕವನ್ನು ಆಂಧ್ರಪ್ರದೇಶದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾಯಿಸಲಾಗಿತ್ತು.
ಸುಮಾರು 220 ಕೋಟಿ ರು. ಹಣವನ್ನು ವೆಚ್ಚಮಾಡಿ ಈ ವಾಹಕವನ್ನು ನಿರ್ಮಾಣ ಮಾಡಲಾಗಿತ್ತು. 49.13 ಎತ್ತರ ಮತ್ತು 414.75 ತೂಕವಿದ್ದ ಈ ವಾಹಕವು ಜಿಸ್ಯಾಟ್ ಸಂವಹನ ಉಪಗ್ರಹವನ್ನು ಹೊತ್ತು ಯಶಸ್ವಿಯಾಗಿ ನಭಕ್ಕೆ ಹಾರಿತ್ತು. ಉಡಾವಣೆಗೊಂಡ 17.13 ನಿಮಿಷದ ಅಂತರದಲ್ಲಿ 1, 982 ಕೆಜಿ ತೂಕದ ಜಿಸ್ಯಾಟ್ 14 ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿತು. ಬಾಹ್ಯಾಕಾಶ ವಿಭಾಗದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋಗೆ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಜಿಎಸ್‌ಎಲ್‌ವಿ ಡಿ5 ಉಪಗ್ರಹ ವಾಹಕವನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ಈ ವ್ಯವಸ್ಥೆ ಹೊಂದಿರುವ ಅಮೆರಿಕ, ರಷ್ಯಾ, ಜಪಾನ್, ಚೀನಾ ಮತ್ತು ಫ್ರಾನ್ಸ್ ದೇಶಗಳ ಪಟ್ಟಿಗೆ ಭಾರತ ಸೇರ್ಪಡೆಯಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


