ಕಾಣದಂತೆ ಕೂರುವಂತಿಲ್ಲ!
ಮುಂಬೈ: ಇನ್ನು ಮುಂದೆ ಮುಂಬೈನ ಯಾವುದೇ ಪ್ರದೇಶದಲ್ಲಿ 'ಜೋಡಿ'ಗಳು 'ಕಾಣ'ದೇ ಕುಳಿತುಕೊಳ್ಳುವಂತಿಲ್ಲ.
ಈ ಬಗ್ಗೆ ಮುಂಬೈ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದು, ಇನ್ನು ಮುಂದೆ ಏಕಾಂತ ಸ್ಥಳಗಳು, ಸಾರ್ವಜನಿಕ ಪ್ರದೇಶಗಳ ರಹಸ್ಯ ಸ್ಥಳಗಳಲ್ಲಿ, ಜನ ವಿರಳ ಸಮುದ್ರ ದಡದಲ್ಲಿ ಜೋಡಿಗಳು ಕುಳಿತುಕೊಳ್ಳುವಂತಿಲ್ಲ ಎಂದು ಸೂಚಿಸಿದ್ದಾರೆ.
ಈ ರೀತಿ ಕುಳಿತುಕೊಂಡಲ್ಲಿ ಗಸ್ತು ಕಾಯುವ ಪೊಲೀಸರು ಬಂದು ನಿಮ್ಮನ್ನು ಏಳಿಸಿ ಕಳುಹಿಸಬಹುದು, ಇದನ್ನು ನೀವು 'ಏಕೆ' ಎಂದು ಪ್ರಶ್ನಿಸುವಂತಿಲ್ಲ ಎಂದು ಅವರು ಹೇಳಿದ್ದಾರೆ. ಆದರೆ ಈ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ ಪೊಲೀಸರಿಂದ ಹೆಚ್ಚಿನ ಭದ್ರತೆ ಒದಗಿಸುತ್ತೇವೆ ಎಂದಿದ್ದಾರೆ.
ತಂಗಿಗೆ ಕಿರುಕುಳ, ತಂದೆಯನ್ನೇ ಕೊಂದ...
ಇಂದೋರ್: ತಂಗಿಗೆ ಲೈಂಗಿಕ ಕಿರುಕುಳ ನೀಡಿದ ತಂದೆಯನ್ನೇ ಮಗನೊಬ್ಬ ಹತ್ಯೆ ಮಾಡಿದ್ದಾನೆ. ಈತ ತನ್ನ ಅಜ್ಜ ಮತ್ತು ಚಿಕ್ಕನೊಂದಿಗೆ ಸೇರಿಕೊಂಡು ಕೊಡಲಿಯಿಂದ ಕತ್ತರಿಸಿ ಹತ್ಯೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

