ದೇಶ

ಯುಪಿಎಸ್‌ಸಿ: ಇಂಗ್ಲಿಷ್ ಪರೀಕ್ಷೆ ಕಡ್ಡಾಯ ವಾಪಸ್

Published On :

ನವದೆಹಲಿ: ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನಾಗರಿಕ ಸೇವೆಗಳ ಮುಖ್ಯಪರೀಕ್ಷೆಯಲ್ಲಿ ಇಂಗ್ಲಿಷ್ ಭಾಷಾ ಪರೀಕ್ಷೆಯನ್ನು ಕಡ್ಡಾಯಗೊಳಿಸುವ ಪ್ರಸ್ತಾಪವನ್ನು ಕೇಂದ್ರ ಲೋಕಸೇವಾ ಯೋಗ(ಯುಪಿಎಸ್‌ಸಿ) ಕೈಬಿಟ್ಟಿದೆ.
  ಈ ಸಂಬಂಧ ಯುಪಿಎಸ್‌ಸಿಯು ತಿದ್ದೋಲೆಯೊಂದನ್ನು ಬಿಡುಗಡೆ ಮಾಡಿದೆ. ಅದರಂತೆ ಇಂಗ್ಲಿಷ್ ಹಾಗೂ ಇತರೆ ಭಾಷಾ ಪರೀಕ್ಷೆಗಳಿಗೆ ಸಂಬಂಧಿಸಿ ಹಿಂದಿನ ವಿಧಾನವನ್ನೇ ಮುಂದುವರಿಸಲು ನಿರ್ಧರಿಸಿದೆ. ಅಲ್ಲದೆ, ಈ ಪರೀಕ್ಷೆಗಳ ಅಂಕವನ್ನು ರ್ಯಾಂಕ್ ವೇಳೆ ಪರಿಗಣಿಸಲಾಗುವುದಿಲ್ಲ ಎಂದೂ ಸ್ಪಷ್ಟನೆ ನೀಡಿದೆ.
  ಭಾರತೀಯ ಭಾಷೆಗಳು ಹಾಗೂ ಇಂಗ್ಲಿಷ್ ಭಾಷಾ ಪರೀಕ್ಷೆಯ ಮುಖ್ಯ ಉದ್ದೇಶ ಅಭ್ಯರ್ಥಿಯ ಓದುವ ಮತ್ತು ಅದನ್ನು ಅರ್ಥ ಮಾಡಿಕೊಳ್ಳುವ ಹಾಗೂ ಈ ಮೂಲಕ
ತನ್ನ ಅಭಿಪ್ರಾಯವನ್ನು ಸ್ಪಷ್ಟವಾಗಿ ಮತ್ತು ಸರಿಯಾಗಿ ವ್ಯಕ್ತಪಡಿಸುವ ಸಾಮರ್ಥ್ಯವನ್ನು ಪರೀಕ್ಷೆ ಮಾಡುವುದೇ ಆಗಿದೆ ಎಂದು ಅದು ಹೇಳಿಕೊಂಡಿದೆ.
  ಅಲ್ಲದೆ, ನೈತಿಕತೆ, ಐಕ್ಯತೆ ಮತ್ತು ಸಾಮರ್ಥ್ಯಕ್ಕೆ ಸಂಬಂಧಿಸಿ ಪ್ರತ್ಯೇಕ ಪರೀಕ್ಷೆಯನ್ನೂ ನಡೆಸಲಾಗುತ್ತದೆ. ಅಲ್ಲದೆ, ತನ್ನಿಷ್ಟದ ಭಾಷೆಯಲ್ಲಿ 250 ಅಂಕದ ಪ್ರಬಂಧವನ್ನೂ ಅಭ್ಯರ್ಥಿ ಬರೆಯಬೇಕಾಗುತ್ತದೆ ಎಂದು ಯುಪಿಎಸ್‌ಸಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.