ದೇಶ

ಛತ್ತೀಸ್‌ಗಡ: ಇಂದು 2ನೇ ಹಂತದ ಮತದಾನ

Published On :

ಅಂಬಿಕಾಪುರ: ಛತ್ತೀಸ್‌ಗಡ ವಿಧಾನಸಭೆ ಚುನಾವಣೆಯ 2ನೇ ಮತ್ತು ಕೊನೇ ಹಂತದ ಮತದಾನ     ಮಂಗಳವಾರ     ನಡೆಯಲಿದೆ.     ನಕ್ಸಲ್ ಪೀಡಿತ ಅಂಬಿಕಾಪುರ     ಸೇರಿದಂತೆ     72 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹವನ್ನು ಮತದಾರರು ಬರೆಯಲಿದ್ದಾರೆ.
 843 ಅಭ್ಯರ್ಥಿಗಳು ಈ ಬಾರಿ ಕಣಕ್ಕಿಳಿದಿದ್ದು, 1,39,75,472 ಮಂದಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಈ ಬಾರಿ 3 ತಿಂಗಳ ಹಿಂದೆಯೇ ವ್ಯವಸ್ಥಿತ ರೀತಿಯಲ್ಲಿ ಮತದಾರರಿಗೆ ಅರಿವು ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಹೀಗಾಗಿ ಹೆಚ್ಚಿನ ಜನರು ಹಕ್ಕುಚಲಾಯಿಸಲು ಆಸಕ್ತಿ ತೋರಿದ್ದು, ನಕ್ಸಲ್ ಪೀಡಿತ ಪ್ರದೇಶಗಳಲ್ಲೂ ಮತದಾನ ಪ್ರಮಾಣ ಹೆಚ್ಚಾಗಲಿದೆ ಎಂದು ಛತ್ತೀಸ್‌ಗಡದ ಮುಖ್ಯ ಚುನಾವಣಾ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನ.11ರಂದು ಛತ್ತೀಸ್‌ಗಡದ 18 ಕ್ಷೇತ್ರಗಳಿಗೆ ಮೊದಲನೇ ಹಂತದ ಮತದಾನ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.