ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಡಿ. 5 ರಂದು
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು...

ಬೆಂಗಳೂರು: ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು ಡಿ.5 ರಂದು ನಗರದಲ್ಲಿ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಆಯೋಜಿಸಿದೆ. ಅಂದು ಸಂಜೆ 4.15ಕ್ಕೆ ರಾಜಭವನದಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ. ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಕೆ.ಜೆ.ಜಾರ್ಜ್ ಅತಿಥಿಗಳಾಗಿ ಭಾಗವಹಿಸುವರು ಎಂದು ಇಲಾಖೆ ನಿರ್ದೇಶಕ (ಪ್ರಭಾರ) ಎಂ.ಎಸ್.ಲೋಲಾಕ್ಷ ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ತಿಳಿಸಿದರು.
ಪ್ರತಿವರ್ಷವೂ ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಡಿ.7ರಂದು ದೇಶದಾದ್ಯಂತ ಆಚರಿಸಲಾಗುತ್ತದೆ. ಆದರೆ ಈ ವರ್ಷ ಡಿ.7 ಭಾನುವಾರವಾಗಿರುವುದರಿಂದ ಎರಡು ದಿವಸ ಮುಂಚಿತವಾಗಿಯೇ ಕೇಂದ್ರೀಯ ಸೈನಿಕ ಮಂಡಳಿಯು ಸಶಸ್ತ್ರ ಧ್ವಜ ದಿನ ಆಚರಿಸುತ್ತಿದೆ. ಅಂತೆಯೇ ನಗರದಲ್ಲೂ ಶುಕ್ರವಾರವೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಯುದ್ಧ ಸಂತ್ರಸ್ತರು, ರಾಜ್ಯದ ಹಿರಿಯ ನಾಗರಿಕರು, ಸೈನಿಕ ಶಾಲೆಯ ಮಕ್ಕಳು, ಎನ್‌ಸಿಸಿ ಕೆಡೆಟ್‌ಗಳು ಹಾಗೂ ಸೇವಾ ನಿರತ ಸೈನಿಕರು ಸಮಾರಂಭದಲ್ಲಿ ಬಾಗವಹಿಸುತ್ತಿದ್ದಾರೆ. ಗಾಯಗೊಂಡ ಸೈನಿಕರಿಗೆ ಮತ್ತು ಹುತಾತ್ಮರಾದ ಸೈನಿಕರ ಅವಲಂಬಿತರಿಗೆ, ಶೌರ್ಯ ಪ್ರಶಸ್ತಿ ವಿಜೇತರಿಗೆ ಧನ ಸಹಾಯ ವಿತರಿಸಿ ಗೌರವಿಸಲಾಗುವುದು. ಜತೆಗ ಸಾಂಕೇತಿಕ ಮತ್ತು ವಾಹನ ಧ್ವಜಗಳನ್ನು ಖರೀದಿಸಿ ಧ್ವಜ ನಿಧಿಗೆ ದೇಣಿಗೆ ನೀಡುವ ಕಾರ್ಯಕ್ರಮವೂ ಇದೆ ಎಂದರು.
ಧ್ವಜ ದಿನಾಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 5 ರಂದು ರಾಜ್ಯದ ಎಳ್ಲ ಮಾಜಿ ಸೈನಿಕರಿಗೆ ರಸ್ತೆ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವಂತೆ ಸರ್ಕಾರವನ್ನು ಕೇಳಿಕೊಳ್ಳಲಾಗಿದೆ. ಸರ್ಕಾರವೂ ಇದಕ್ಕೆ ಒಪ್ಪಿಗೆ ಸೂಚಿಸಿದೆ. ಆದೇಶ ಬರುವುದು ಬಾಕಿಯಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


