ದೇಶ

ಖ್ಯಾತ ಹಾಸ್ಯ ನಟ ದೇವನ್ ವರ್ಮಾ ವಿಧಿವಶ

ಬಾಲಿವುಡ್ ಖ್ಯಾತ ಹಾಸ್ಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದೇವನ್...

ಖ್ಯಾತ ಹಾಸ್ಯ ನಟ ದೇವನ್ ವರ್ಮಾ ವಿಧಿವಶ
ದೇವನ್ ವರ್ಮಾ
Published On :

ಮುಂಬೈ: ಬಾಲಿವುಡ್ ಖ್ಯಾತ ಹಾಸ್ಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದೇವನ್ ವರ್ಮಾ(77) ಅವರು ಹೃದಯಾಘಾತದಿಂದ ಮಂಗಳವಾರ ವಿಧಿವಶರಾಗಿದ್ದಾರೆ.

ನಾಲ್ಕು ಬಾರಿ ಫಿಲ್ಮ್‌ಫೇರ್ ಪ್ರಶಸ್ತಿಗೆ ಭಾಜನರಾಗಿದ್ದ ವರ್ಮಾ ಅವರು ಇಂದು ಬೆಳಗ್ಗೆ ಪುಣೆಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದು, ಪತ್ನಿ ರೂಪಾ ಗಂಗೂಲಿ ಹಾಗೂ ಓರ್ವ ಪುತ್ರಿಯನ್ನು ಆಗಲಿದ್ದಾರೆ. ಇಂದು ಸಂಜೆ ಯರವಾಡದಲ್ಲಿ ವರ್ಮಾ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಅಂಗೂರ್, ಚೋರಿ ಮೆರಾ ಕಾಮ್, ಅಂದಾಜ್ ಅಪ್ನಾ ಅಪ್ನಾ, ಬೆಮಿಸಾಲ್, ಜೂದಾಯಿ, ದಿಲ್ ತೊ ಪಾಗಲ್ ಹೈ ಮತ್ತು ಕೊರಾ ಕಾಗಜ್ ಸೇರಿದಂತೆ ಹಲವು ಚಿತ್ರಗಳಲ್ಲಿ ವರ್ಮಾ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.