ದೇಶ

ಮೋದಿ ಪ್ರವಾಸ ನಮಗೆ ಸಹಾಯವಾಗಲಿದೆ: ಸುಷ್ಮಾ ಸ್ವರಾಜ್

ಮೋದಿ ಪ್ರವಾಸ ನಮಗೆ ಸಹಾಯವಾಗಲಿದೆ: ಸುಷ್ಮಾ ಸ್ವರಾಜ್
ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್
Published On :

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ವಿದೇಶಿ ಪ್ರವಾಸದಿಂದ ಭಾರತದ ಅಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಮೋದಿ ವಿದೇಶದಲ್ಲಿ ನೆಲೆಸಿರುವ ಭಾರತೀಯ ಎಂಬ ವಿರೋಧ ಪಕ್ಷಗಳ ಟೀಕೆಗಳಿಗೆ ಇಂದು ಲೋಕಸಭೆ ಕಲಾಪದ ವೇಳೆ ಪ್ರತಿಕ್ರಿಯಿಸಿದ ಸುಷ್ಮಾ ಸ್ವರಾಜ್, ಪ್ರಧಾನಿಯವರ ವಿದೇಶ ಪ್ರವಾಸದಿಂದ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಸಲಿದೆ ಅಲ್ಲದೆ, ದೇಶಕ್ಕೆ ಅಂತಾರಾಷ್ಟ್ರೀಯ ಬಂಡವಾಳ ಹರಿದು ಬರಲಿದೆ ಎಂದಿದ್ದಾರೆ.

ಮೋದಿ ವಿದೇಶಗಳಿಗೆ ಭೇಟಿ ನೀಡಿದ ಸಮಯದಲ್ಲಿ ಕಪ್ಪು ಹಣದ ಕುರಿತು ಮಾತುಕತೆಗಳಾಗಿದ್ದು ಹಣ ಹಿಂತಿರುಗಿ ಬರುವ ವಿಶ್ವಾಸವಿದೆ. ಭೇಟಿಯಿಂದಾಗಿ ವಿದೇಶಗಳಿಂದಲೂ ಭದ್ರತಾ ಸಹಕಾರ ಸಿಕ್ಕಿದ್ದು, ವಿವಿಧ ರೀತಿಯ ಒಪ್ಪಂದಗಳ ಕುರಿತು ಚರ್ಚೆಯಾಗಿದೆ ಎಂದು ಹೇಳಿದ್ದಾರೆ.

ಮೋದಿ ಅವರು ನೆರೆಯ ರಾಷ್ಟ್ರಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದೇ ಕಾರಣಕ್ಕೆ ಅವರು ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ವಿದೇಶಿಯರಿಗೆ ಆಹ್ವಾನ ನೀಡಿದ್ದು ಎಂದು ಹೇಳಿದ ಸುಷ್ಮಾ ಸ್ವರಾಜ್ ಭಾರತ ಸುರಕ್ಷಿತ ರಾಷ್ಟ್ರವಾದಾಗ ಮಾತ್ರವೇ ಅಭಿವೃದ್ಧಿ ರಾಷ್ಟ್ರವಾಗಲು ಸಾಧ್ಯ ಎಂದು ಹೇಳುವ ಮೂಲಕ ವಿರೋಧ ಪಕ್ಷಗಳ ಟೀಕೆಗೆ ಸಮರ್ಥನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.