ದೆಹಲಿ ಚರ್ಚ್ ಅಗ್ನಿ ದುರಂತ ಪ್ರಕರಣ: ವಿಶೇಷ ತನಿಖಾ ತಂಡ ರಚನೆ
ಧರ್ಮವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ದುಷ್ಕರ್ಮಿಗಳ ವಿರುದ್ಧ ಕ್ರಮ...

ನವದೆಹಲಿ: ದೆಹಲಿಯ ದಿಶ್ನಾನ್ ಗಾರ್ಡನ್ ಪ್ರದೇಶದಲ್ಲಿದ್ದ ಚರ್ಚ್‌ವೊಂದಕ್ಕೆ ದುಷ್ಕರ್ಮಿಗಳ ಗುಂಪೊಂದು ಬೆಂಕಿ ಹಚ್ಚಿ ಪರಾರಿಯಾಗಿತ್ತು. ಈ ಘಟನೆಯಲ್ಲಿ ಚರ್ಚ್ ಬೆಂಕಿಗೆ ಆಹುತಿಯಾಗಿದ್ದು, ಸಂಪೂರ್ಣ ಭಸ್ಮವಾಗಿತ್ತು.
ಚರ್ಚ್ ಬೆಂಕಿ ಅವಘಡ ಕುರಿತು ವಿಶೇಷ ತನಿಖೆ ನಡೆಸುವಂತೆ, ದೆಹಲಿ ಆರ್ಚ್ ಬಿಶಪ್ ಅನಿಲ್ ಗೌಡೋ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.
ಈ ಮಧ್ಯೆ ಸಂಸತ್ತಿನಲ್ಲಿಂದು ಈ ಘಟನೆ ಪ್ರತಿಧ್ವಿಸಿತು. ಧರ್ಮವಿರೋಧಿ ಚಟುವಟಿಕೆಯಲ್ಲಿ ಭಾಗಿಯಾದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಲ ಸಂಸದರು ಧ್ವನಿ ಎಬ್ಬಿಸಿದರು.
ಸಂಸದರ ಪ್ರಶ್ನೆಗೆ ಉತ್ತರ ನೀಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬೇರೆ ಧರ್ಮೀಯರ ನಂಬಿಕೆಗಳು ಹಾಗೂ ಅವರ ಮನೋಭಾವನೆಗಳಿಗೆ ಚ್ಯುತಿ ತರುವ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದರು.
ಈ ಘಟನೆ ಸಂಬಂಧ, ದೆಹಲಿ ರಾಜ್ಯಪಾಲರನ್ನು ಸಂಪರ್ಕಿಸಿದ್ದು, ಅವರ ಸಲಹೆಯೊಂದಿಗೆ ವಿಶೇಷ ತನಿಖಾ ತಂಡ ರಚಿಸಲು ಆದೇಶಿಸಲಾಗಿದೆ. ದೆಹಲಿ ಪೊಲೀಸ್ ಇಲಾಖೆ ಉಪ ಆಯುಕ್ತರ ನೇತೃತ್ವದಲ್ಲಿ ರಚನೆಯಾಗಿರುವ ಈ ತಂಡ ಇನ್ನು 2 ತಿಂಗಳಿನಲ್ಲಿ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಸೂಚನೆಯನ್ನೂ ನೀಡಲಾಗಿದೆ ಎಂದು ಅವರು ತಿಳಿಸಿದರು...
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


