ಮೋದಿ ಎದುರಿಸಲು ಮತ್ತೆ ಒಂದಾದ ಜನತಾ ಪರಿವಾರ
ಕಳೆದ ಲೋಕಸಭೆ ಚುನಾವಣೆ ಹಾಗೂ ಇತ್ತೀಚಿನ...

ನವದೆಹಲಿ: ಕಳೆದ ಲೋಕಸಭೆ ಚುನಾವಣೆ ಹಾಗೂ ಇತ್ತೀಚಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿದ್ದ ಜನತಾ ಪರಿವಾರದ ಪ್ರಾದೇಶಿಕ ಪಕ್ಷಗಳು ಇಂದು ಮತ್ತೆ ಒಂದಾಗಲು ನಿರ್ಧರಿಸಿವೆ.
ಈ ಕುರಿತು ಇಂದು ನಡೆದ ಮ್ಯಾರಾಥಾನ್ ಸಭೆಯಲ್ಲಿ ಪಾಲ್ಗೊಂಡಿದ್ದ ಜೆಡಿ(ಯು) ನಾಯಕ ಮತ್ತು ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಮುಖ್ಯಮಂತ್ರಿ ಅಧಿಕೃತವಾಗಿ ಹೇಳಿಕೆ ನೀಡಿದ್ದು, ಸಭೆಯಲ್ಲಿ ಎಲ್ಲಾ ಪ್ರಾದೇಶಿಕ ಪಕ್ಷಗಳ ನಾಯಕರು ಚರ್ಚೆ ನಡೆಸಿದ್ದು, ಹಲವು ನಿಯಮಗಳ ಮೇರೆಗೆ ತಮ್ಮ ಪಕ್ಷಗಳನ್ನು ಜನತಾ ಪರಿವಾರಕ್ಕೆ ಸೇರ್ಪಡೆಗೊಳಿಸಲು ಎಲ್ಲಾ ಪಕ್ಷದ ನಾಯಕರು ಮನಸ್ಸು ಮಾಡಿದ್ದಾರೆ ಎಂದು ಹೇಳಿದ್ದಾರೆ.
ನಮಗೆ ನಮ್ಮದೇ ಆದ ಸೈದ್ದಾಂತಿಕ ಸಿದ್ದಾಂತಗಳಿದ್ದು, ರಾಜಕೀಯದಲ್ಲಿ ಬೆಳೆಯಬೇಕಾದರೆ ವಿರೋಧ ಪಕ್ಷಗಳು ಒಗ್ಗೂಡಿ ಕೆಲಸ ಮಾಡಬೇಕು. ಆಗಲೇ ಪಕ್ಷ ಶಕ್ತಿಶಾಲಿಯಾಗಿ ಹೊರಹೊಮ್ಮಲು ಸಾಧ್ಯ ಎಂದು ಹೇಳಿದರು. ಅಲ್ಲದೆ ಅವರು ಸಭೆಯಲ್ಲಿ ದೇಶದ ದೊಡ್ಡ ಸಮಸ್ಯೆಗಳಾಗಿ ತಲೆದೋರಿರುವ ಕಪ್ಪು ಹಣ, ಅತ್ಯಾಚಾರ, ನಿರುದ್ಯೋಗದಂತಹ ಹತ್ತು ಹಲವು ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದು, ಡಿ.22 ರಂದು ದೆಹಲಿಯಲ್ಲಿ ಧರಣಿ ನಡೆಸಲು ಎಲ್ಲಾ ಪಕ್ಷದ ನಾಯಕರು ತೀರ್ಮಾನಿಸಿದ್ದಾರೆ ಎಂದು ತಿಳಿಸಿದ್ದಾರೆ.
ಅಂತೂ ಹಲವು ವರ್ಷಗಳ ಹಿಂದೆ ಹರಿದು ಹಂಚಿಹೋಗಿದ್ದ ಜನತಾ ಪರಿವಾರ ಇಂದು ವಿಲೀನಗೊಂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


