ಮಗಳ ಮೇಲೆ ಅತ್ಯಾಚಾರ: ತಂದೆಗೆ 10 ವರ್ಷ ಜೈಲು
ಅಪ್ರಾಪ್ತೆ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ತಂದೆಗೆ 10 ವರ್ಷ ಕಠಿಣ...

ಐಜ್ವಾಲ್: ಅಪ್ರಾಪ್ತೆ ಮಗಳ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ತಂದೆಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ.
2013ರಲ್ಲಿ ಮಗಳ ಮೇಲೆ ಅತ್ಯಾಚಾರವೆಸಗಿ, ಯಾರಿಗೆ ವಿಷಯ ತಿಳಿಸಿದಂತೆ ಬೆದರಿಕೆ ಹಾಕಿದ್ದ ಆರೋಪಿಗೆ ಇಲ್ಲಿನ ಸೆಷನ್ ನ್ಯಾಯಾಲಯ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.
ಲಂಗ್ಲೇಲಿ ಜಿಲ್ಲೆಯ ಸೆಷನ್ ಕೋರ್ಟ್ ನ ನ್ಯಾಯಾಮೂರ್ತಿ ಮರ್ಲಿ ವಾಕುಂಗ್, ಆರೋಪಿ ಸೈಮವ್ನಗಾ ಎಂಬುವವನಿಗೆ 10 ವರ್ಷಗಳ ಕಠಿಣ ಶಿಕ್ಷೆ ಮತ್ತು ರು. 2,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಮಗಳ ಮೇಲೆ ಅತ್ಯಾಚಾರವೆಸಗಿ ಯಾರಿಗೆ ಹೇಳದಂತೆ ತಂದೆ ಬೆದರಿಕೆ ಹಾಕಿದ್ದನು. ಕೆಲವು ದಿನಗಳ ನಂತರ ಬಾಲಕಿ ತನ್ನ ತಾಯಿಗೆ ವಿಷಯ ತಿಳಿಸಿದ್ದು, ತಾಯಿ ಮತ್ತು ಮಗಳು ಇಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸಿ, ಎಫ್ಐಆರ್ ದಾಖಲಿಸಿದ್ದರು.
ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ 10 ವರ್ಷಗಳ ಕಾಲ ಕಠಿಣ ಶಿಕ್ಷೆ ವಿಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


