ಬೆಂಗಳೂರಿನ ಶಾಲೆಗಳಲ್ಲಿನ ಹಿಂಸೆ: ದೆಹಲಿಯಲ್ಲಿ ಸದ್ದು
ಬೆಂಗಳೂರಿನ ಶಾಲೆಗಳಲ್ಲಿ ಮಕ್ಕಳ ಮೇಲಾಗುತ್ತಿರುವ ದೌರ್ಜನಗಳು...

ನವದೆಹಲಿ: ಬೆಂಗಳೂರಿನ ಶಾಲೆಗಳಲ್ಲಿ ಮಕ್ಕಳ ಮೇಲಾಗುತ್ತಿರುವ ದೌರ್ಜನ್ಯಗಳು ದೇಶವ್ಯಾಪ್ತಿಯಾಗುತ್ತಿರುವುದು ಗೊತ್ತೇ ಇದೆ. ಇದೀಗ ಸ್ವತಃ ಮಕ್ಕಳೇ ಈ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರಿಗೆ ತಲುಪಿಸಿದ್ದಾರೆ.
ನಗರದ ಆರು ವಿದ್ಯಾರ್ಥಿಗಳು ಈ ಬಗ್ಗೆ ಸಚಿವರಿಗೆ ದೂರು ನೀಡಿದ್ದಾರೆ. ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಅವರು ಶುಕ್ರವಾರ ಆಯೋಜಿಸಿದ್ದ ರೌಂಡ್ ಟೇಬಲ್ ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿಗಳು ಶಾಲೆಯಲ್ಲಿ ಎದುರುಗೊಳ್ಳುವ ಹಿಂಸೆ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರ ಬಗ್ಗೆ ಗಮನ ಹರಿಸುವಂತೆಯೂ ಅವರು ಹೇಳಿದ್ದಾರೆ.
ಏಕೆ ಈ ಕಾರ್ಯಕ್ರಮ?
ಮಾನವ ಹಕ್ಕುಗಳ ಶಿಕ್ಷಣ ಕಾರ್ಯಕ್ರಮದಡಿ ಇದನ್ನು ಆಯೋಜಿಸಲಾಗಿದೆ. ಇದರ ಮುಖ್ಯ ಉದ್ದೇಶ ಮಾನವ ಹಕ್ಕುಗಳ ಉಲ್ಲಂಘನೆ ಅರಿವು ಮತ್ತು ವಿದ್ಯಾರ್ಥಿಗಳು ಹಾಗೂ ನೀತಿ ನಿರೂಪಕರ ನಡುವೆ ನೇರಾನುಸಂಧಾನ ಬೆಳೆಯಲಿ ಎಂಬುದಾಗಿದೆ. ಶಾಲೆಗಳಲ್ಲಿ ಮಾನವ ಹಕ್ಕುಗಳ ಮೇಲಾಗುತ್ತಿರುವ ದಾಳಿ, ಮಗುವಿನ ಗೌರವಕ್ಕೆ ಧಕ್ಕೆ ಕುರಿತಂತೆಯೂ ರೌಂಡ್ ಟೇಬಲ್ ಕಾರ್ಯಕ್ರಮದಲ್ಲಿ ಚರ್ಚಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


