ನಿಮ್ಮ ಮತ ಬುಲೆಟ್‌ಗಿಂತಲೂ ಶಕ್ತಿಶಾಲಿ: ಪ್ರಧಾನಿ ಮೋದಿ
ಮತದಾನ ಬುಲೆಟ್‌ಗಿಂತಲೂ ಶಕ್ತಿಶಾಲಿ ಎಂದು ಪ್ರಧಾನಿ ನರೇಂದ್ರ ಮೋದಿ...

ಸಾಂಬಾ: ಮತದಾನ ಬುಲೆಟ್‌ಗಿಂತಲೂ ಶಕ್ತಿಶಾಲಿ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ.
ಎಲೆಕ್ಟ್ರಾನಿಕ್ ಮತಯಂತ್ರ(ಇವಿಎಂ)ದ ಮೇಲೆ ಒಂದು ಬೆರಳು ಒತ್ತುವುದು ಎಕೆ-47ಗಿಂತ ಶಕ್ತಿಶಾಲಿಯಾದದು ಎಂದು ಮೋದಿ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಒಂದು ವಾರದಿಂದ ಉಗ್ರರು ದಾಳಿ ನಡೆಸುತ್ತಿದ್ದರೂ ಹಿಂಜಯರಿದ ಪ್ರಧಾನಿ ಮೋದಿ ಇಂದು ಶ್ರೀನಗರಕ್ಕೆ ಭೇಟಿ ನೀಡಿದ್ದಾರೆ.
ಶ್ರೀನಗರದ ಶೇರ್-ಎ-ಕಾಶ್ಮೀರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಎಕೆ-47 ಬಳಕೆಗಿಂತ ಅತ್ಯಂತ ಪ್ರವಾಭವಾದದ್ದು ಮತ ಚಲಾವಣೆ. ಇದರಿಂದ ಕೆಟ್ಟದನ್ನು ಧ್ವಂಸಗೊಳಿಸಬಹುದು ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ.
ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸುವ ಮೂಲಕ ಉತ್ತಮ ಆಡಳಿತ ಆಯ್ಕೆ ಮಾಡಿ. ಆಗ ಇಲ್ಲಿರುವಂತಹ ಕೆಟ್ಟತನವನ್ನು ಮಟ್ಟಹಾಕಬಹುದು ಎಂದು ಅವರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ಇಲ್ಲಿನ ಜನತೆ ನನ್ನ ಮೇಲೆ ಭರವಸೆ ಇಟ್ಟಿದ್ದಾರೆ. ಅದನ್ನು ನಾನು ಎಂದಿಗೂ ಹುಸಿಗೊಳಿಸುವುದಿಲ್ಲ. ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ನಮ್ಮ ಸರ್ಕಾರ ಒತ್ತು ನೀಡುತ್ತದೆ ಎಂದು ಅವರು ಹೇಳಿದ್ದಾರೆ.
ಅಪ್ಪ-ಮಗಳು ಜಮ್ಮು ಕಾಶ್ಮೀರದಲ್ಲಿ ಆಡಳಿತ ನಡೆಸಿದರು. ಆದರೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗಿಲ್ಲ. ಸಮಸ್ಯೆಗಳು ಹೆಚ್ಚಾಗುತ್ತಾ ಹೋದವು. ಈಗ ಆಡಳಿತವನ್ನು ಬದಲಾಯಿಸುವ ಸಮಯ ಬಂದಿದೆ. ಆಡಳಿತವನ್ನು ಬದಲಿಸಿ, ಇಲ್ಲಿನ ಸಮಸ್ಯೆಯಿಂದ ಹೊರಬರಲು ಮುಂದಾಗಿ ಎಂದು ಕರೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


