ಮೋದಿ ರ್ಯಾಲಿಗೆ ಜನರ ಪೂರೈಕೆ: ಒಮರ್ ಅಬ್ದುಲ್ಲಾ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ರಾಜಕೀಯ ಪಕ್ಷಗಳ ಆರೋಪ ಪ್ರತ್ಯಾರೋಪಗಳು ತಾರಕಕ್ಕೇರಿದೆ. ಪ್ರಧಾನಿ ನರೇಂದ್ರ ಮೋದಿ ರ್ಯಾಲಿಗೆ ರಾಜ್ಯದ ಬೇರೆ ಕಡೆಗಳಿಂದ ಜನರನ್ನು ಕರೆತರಲಾಗಿದೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಆರೋಪಿಸಿದ್ದಾರೆ.
ಇಂದು ಶ್ರೀನಗರದ ಶೇರ್-ಎ-ಕಾಶ್ಮೀರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೋದಿ ಅವರ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿದ್ದವರು ಯಾರು ಬಿಜೆಪಿ ಬೆಂಬಲಿಗರಲ್ಲ ಅವರನ್ನು ಬನಿಹಾಲ್ ಹಾಗೂ ಜಮ್ಮುವಿನಿಂದ ಎರಡು ರೈಲುಗಳಲ್ಲಿ ಕರೆದು ತರಲಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಒಮರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.
ಸ್ಟೇಡಿಯಂಗೆ ಹೋಗುತ್ತಿರುವವರ ಕೈಯಲ್ಲಿ ಅಥವಾ ವಾಹನಗಳಲ್ಲಿ ಬಿಜೆಪಿಯ ಧ್ವಜವಾಗಲಿ ಅಥವಾ ಬ್ಯಾನರ್ ಆಗಲಿ ಯಾವುದು ಇಲ್ಲ. ಇದು ಕೇವಲ ಬಿಜೆಪಿಯ ಬೆಂಬಲವೆಷ್ಟಿದೆ ಎಂಬುದನ್ನು ತೋರಿಸುತ್ತದೆ ಎಂದು ಮತ್ತೊಂದು ಟ್ವೀಟ್‌ನಲ್ಲಿ ಲೇವಡಿ ಮಾಡಿದ್ದಾರೆ.
ಕಾಶ್ಮೀರದಲ್ಲಿ ಮೈತ್ರಿ ಸರ್ಕಾರದ ಪಾಲುದಾರವಾಗಿದ್ದ ಕಾಂಗ್ರೆಸ್ ವಿರುದ್ಧವೂ ಕಿಡಿಕಾರಿರುವ ಒಮರ್, ಬಿಜೆಪಿ ಸಮಾವೇಶಕ್ಕೆ ಜನರನ್ನು ಒದಗಿಸುವಂತೆ ಕಾಂಗ್ರೆಸ್ ಬೆಂಬಲಿತ ಮುಖಂಡರಿಗೆ ಕೂಡ ಸೂಚಿಸಲಾಗಿದೆ. ರಾಜಕೀಯವು ಎಂಥವರನ್ನೂ ಒಗ್ಗೂಡಿಸುತ್ತದೆ ಎಂದು ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


