ದೇಶ

ಕೇರಳದಲ್ಲಿ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳಲಿದೆ: ರಾಹುಲ್ ಗಾಂಧಿ

ಕೇರಳದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಕಾಂಗ್ರೆಸ್...

ಕೇರಳದಲ್ಲಿ ಕಾಂಗ್ರೆಸ್ ಅಧಿಕಾರ ಉಳಿಸಿಕೊಳ್ಳಲಿದೆ: ರಾಹುಲ್ ಗಾಂಧಿ
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
Published On :

ತಿರುವನಂತಪುರಂ: ಕೇರಳದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ.

2016ರಲ್ಲಿ ನಡೆಯಲಿರುವ ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯ ಗಳಿಸಲಿದ್ದು, ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ರಾಹುಲ್ ಗಾಂಧಿ ಭರವಸೆ ವ್ಯಕ್ತಪಡಿಸಿದ್ದಾರೆ.

ಕೇರಳಕ್ಕೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರ ಸಭೆ ನಡೆಸಿದ್ದು, ಕೇರಳದ ಜನತೆ ಅಭಿವೃದಿಗಾಗಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಸಾಕಷ್ಟು ಕೆಲಸಗಳನ್ನು ಮಾಡಿದೆ. ಇನ್ನು ಕೆಲವು  ಸಮಸ್ಯೆಗಳನ್ನು ಬಗೆಹರಿಸಬೇಕಿದೆ.

ಅಲ್ಲದೇ, ಇನ್ನೂ ಕೇರಳದಲ್ಲಿ ಸಾಕಷ್ಟು ಅಭಿವೃದ್ಧಿಯಾಗಬೇಕಿದೆ. ಇದಕ್ಕಾಗಿ ಕಾಂಗ್ರೆಸ್ ತನ್ನ ಅಧಿಕಾರವನ್ನು ಉಳಿಸಿಕೊಳ್ಳಬೇಕು. ಇಲ್ಲಿನ ಜನತೆ ಮತ್ತೆ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರುತ್ತಾರೆ ಎಂಬ ಭರವಸೆ ಇದೆ ಎಂದು ತಿಳಿಸಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲವು ಕಂಡಿತ ಎಂದಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕರು ಕೇರಳದ ಪ್ರತಿಯೊಂದು ಹಳ್ಳಿಯ ಅಭಿವೃದ್ಧಿಗಾಗಿ ಶ್ರಮಿಸಬೇಕು. ಅಲ್ಲದೇ, ಇಲ್ಲಿನ ಯುವಜನತೆಗೆ ಉದ್ಯೋಗವಕಾಶ ಕಲ್ಪಿಸಿ ಅವರ ಬೆನ್ನೆಲುಬಾಗಿ ನಿಲ್ಲಬೇಕು ಎಂದು ರಾಹುಲ್ ಗಾಂಧಿ ಕರೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.