ಕೈಲಾಶ್ ಸತ್ಯಾರ್ಥಿ, ಮಲಾಲಗೆ ನೊಬೆಲ್ ಶಾಂತಿ ಪ್ರಶಸ್ತಿ ಪ್ರದಾನ
ಭಾರತದ ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಮತ್ತು ಪಾಕಿಸ್ತಾನದ...

ಓಸ್ಲೋ: ಭಾರತದ ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಮತ್ತು ಪಾಕಿಸ್ತಾನದ ಹೆಣ್ಣು ಮಕ್ಕಳ ಶಿಕ್ಷಣ ಹಕ್ಕುಗಳ ಯುವ ಹೋರಾಟಗಾರ್ತಿ ಮಲಾಲ ಯೂಸುಫ್ ಝೈ ಅವರಿಗೆ ಬುಧವಾರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.
ಇಂದು ನಾರ್ವೆಯ ಓಸ್ಲೋದಲ್ಲಿ ಮಲಾಲ ಮತ್ತು ಸತ್ಯಾರ್ಥಿಗೆ ಜಂಟಿಯಾಗಿ ನೊಬೆಲ್ ಶಾಂತಿ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, ಪ್ರಶಸ್ತಿ 1.1 ದಶಲಕ್ಷ ಡಾಲರ್ ಮೊತ್ತದ್ದಾಗಿದೆ.
ಮಕ್ಕಳ ಹಕ್ಕುಗಳು ಹಾಗೂ ಶಿಕ್ಷಣದ ಬಗ್ಗೆ ಯುವ ಜನರಲ್ಲಿ ಜಾಗೃತಿ ಮೂಡಿಸಿದ ಚಳವಳಿಗಾಗಿ ಕೈಲಾಶ್ ಮತ್ತು ಮಲಾಲ ಅವರಿಗೆ ಈ ಪ್ರಶಸ್ತಿ ಸಂದಿದೆ.
ಹದಿನೇಳು ವರ್ಷದ ಮಲಾಲ ನೊಬೆಲ್ ಶಾಂತಿ ಪುರಸ್ಕಾರ ಪಡೆಯುತ್ತಿರುವ ಅತ್ಯಂತ ಕಿರಿಯ ಸಾಧಕಿಯಾಗಿದ್ದಾರೆ. ಕೈಲಾಶ್ ಸತ್ಯಾರ್ಥಿ ಅವರು ಬಚಪನ್ ಬಚಾವೋ ಆಂದೋಲನದ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ತೊಡಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


