ದೇಶ

ಯಾಕುಬ್ ಮೆಮನ್ ಗಲ್ಲು ಶಿಕ್ಷೆ ತಡೆ ಅವಧಿ ವಿಸ್ತರಣೆ

1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕುಬ್ ಮೆಮನ್ ಗಲ್ಲು ಶಿಕ್ಷೆಗೆ ಹೇರಲಾಗಿದ್ದ...

ಯಾಕುಬ್ ಮೆಮನ್ ಗಲ್ಲು ಶಿಕ್ಷೆ ತಡೆ ಅವಧಿ ವಿಸ್ತರಣೆ
Published On :

ನವದೆಹಲಿ(ಪಿಟಿಐ): 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಅಪರಾಧಿ ಯಾಕುಬ್ ಮೆಮನ್ ಗಲ್ಲು ಶಿಕ್ಷೆಗೆ ಹೇರಲಾಗಿದ್ದ ತಡೆ ಅವಧಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಿಸ್ತರಿಸಿದೆ.

1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನೀಡಲಾಗಿರುವ ಗಲ್ಲು ಶಿಕ್ಷೆ ಕುರಿತು ಪುನರ್ಪರಿಶೀಲನೆ ಮಾಡುವಂತೆ ಕೋರಿ ಯಾಕುಬ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದನು. ಇದಕ್ಕೆ ಪ್ರತಿಕ್ರಿಯಿಸುವಂತೆ ಮಹಾರಾಷ್ಟ್ರ ವಿಶೇಷ ಕಾರ್ಯ ಪಡೆ ಮತ್ತು ಸಿಬಿಐಗೆ ಸುಪ್ರೀಂ ಕೋರ್ಟ್ ನೋಟೀಸ್ ಜಾರಿ ಮಾಡಿದೆ.

ಯಾಕುಬ್ ಮೆಮನ್‌ಗೆ ವಿಶೇಷ ಟಾಡಾ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು. 2013ರಲ್ಲಿ ಇದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿತ್ತು.

ಯಾಕುಬ್ ಮೆಮನ್ ಕ್ಷಮಾದಾನ ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದರು. ಮಹಾರಾಷ್ಟ್ರ ಸರ್ಕಾರ ನೀಡಿದ ವರದಿಯ ಹಿನ್ನಲೆಯಲ್ಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿದ್ದರು.

ಅಪೆಕ್ಸ್ ಕೋರ್ಟ್ ನೀಡಿದ್ದ ಮರಣದಂಡನೆಯ ವಿರುದ್ಧ, ಯಾಕುಬ್ ಅಬ್ದುಲ್ ರಜಾಕ್ ಮೆಮನ್ ಸಲ್ಲಿಸಿದ್ದ ಮೇಲ್ಮನವಿಯನ್ನು, ಸ್ವೀಕರಿಸಿದ್ದ ಸುಪ್ರೀಂ ಕೋರ್ಟ್, ಆತನಿಗೆ ನೀಡಿರುವ ಶಿಕ್ಷೆಗೆ ತಡೆ ಒಡ್ಡಿತ್ತು.

1993ರ ಮುಂಬೈ ಸರಣಿ ಬಾಂಬ್ ಸ್ಫೋಟದಲ್ಲಿ 250 ಜನರು ಸಾವನ್ನಪ್ಪಿದ್ದರು. ಸುಮಾರು 700 ಜನ ಗಾಯಗೊಂಡಿದ್ದರು. ಯಾಕುಬ್ ಮೆಮನ್ ಭೂಗತ ಪಾತಕಿ ಟೈಗರ್ ಮೆಮನ್ ಸಹೋದರ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.