ದೇಶ

ದೆಹಲಿಗೆ ಪುಟಿನ್ ಆಗಮನ, 20 ಒಪ್ಪಂದಗಳಿಗೆ ಸಹಿ ಸಾಧ್ಯತೆ

ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಬುಧವಾರ ತಡರಾತ್ರಿ ಭಾರತಕ್ಕೆ ಆಗಮಿಸಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ..

ದೆಹಲಿಗೆ ಪುಟಿನ್ ಆಗಮನ, 20 ಒಪ್ಪಂದಗಳಿಗೆ ಸಹಿ ಸಾಧ್ಯತೆ
ನರೇಂದ್ರ ಮೋದಿ - ವ್ಲಾದಿಮಿರ್ ಪುಟಿನ್ (ಸಂಗ್ರಹ ಚಿತ್ರ)
Published On :

ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಬುಧವಾರ ತಡರಾತ್ರಿ ಭಾರತಕ್ಕೆ ಆಗಮಿಸಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷಿಯ ಮಾತುಕತೆ ನಡೆಸಲಿದ್ದಾರೆ.

ಒಂದು ದಿನದ ಮಟ್ಟಿಗೆ ದೆಹಲಿಗೆ ಭೇಟಿ ನೀಡಿರುವ ಪುಟಿನ್ ಅವರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ದ್ವಿಪಕ್ಷಿಯ ಮಾತುಕತೆಯ ಬಳಿಕ ಉಭಯ ರಾಷ್ಟ್ರಗಳ ನಾಯಕರು ಸುಮಾರು 20 ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ.

ವಿಶೇಷವಾಗಿ ಸ್ಮಾರ್ಟ್ ಸಿಟಿ ಅಭಿವೃದ್ಧಿ ಯೋಜನೆಯಲ್ಲಿ ಪಾಲುದಾರನಾಗಲು ರಷ್ಯಾ ಮುಂದಾಗಿದ್ದು, ಇದರ ಜತೆಗೆ ಹೊಸ ಪರಮಾಣು ಸ್ಥಾವರಗಳ ಸ್ಥಾಪನೆ, ಸೇನಾ ಹಾಗೂ ತಾಂತ್ರಿಕ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ಕುರಿತಂತೆ ಮಹತ್ವದ ಒಪ್ಪಂದಗಳಿಗೆ ನರೇಂದ್ರ ಮೋದಿ ಅವರು ಸಹಿ ಹಾಕಲಿದ್ದಾರೆ.

ಸ್ಮಾರ್ಟ್ ಸಿಟಿಗೆ ನೆರವು: ಮೋದಿಯವರ ಕನಸಿನ ಸ್ಮಾರ್ಟ್ ಸಿಟಿ ಯೋಜನೆಗೆ ರಷ್ಯಾ ನೆರವು ನೀಡಲಿದೆ ಎಂದು ನಿರೀಕ್ಷಿಸಲಾಗಿದೆ. ಸ್ಮಾರ್ಟ್ ಸಿಟಿ ಕನಸು ಸಾಕಾರಕ್ಕೆ ಅಗತ್ಯವಾದ ತಂತ್ರಜ್ಞಾನವನ್ನು ನೀಡುವ ಜೊತೆಗೆ, ರಕ್ಷಣಾ ಇಲಾಖೆಗೆ ಹೊಸ ಸುಧಾರಿತ ಹೆಲಿಕಾಪ್ಟರ್‌ಗಳನ್ನು ನಿರ್ಮಿಸಲು ಅಗತ್ಯವಾದ ತಾಂತ್ರಿಕ ನೆರೆವನ್ನೂ ರಷ್ಯಾ ನೀಡಲಿದೆ. ಅಲ್ಲದೆ ಭಾರತದಲ್ಲಿ 20ರಿಂದ 24 ಪರಮಾಣು ವಿದ್ಯುತ್ ಘಟಕಗಳನ್ನು ನಿರ್ಮಿಸಲು ರಷ್ಯಾ ಆಸಕ್ತಿ ಹೊಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.