ಶಾಸಕ ಪ್ರಭು ಚೌಹಾಣ್, ಯು.ಬಿ ಬಣಕಾರ್‌ಗೆ ಬಿಜೆಪಿ ಶೋಕಾಸ್ ನೋಟಿಸ್

ಬೆಂಗಳೂರು: ಬೆಳಗಾವಿ ಅಧಿವೇಶನ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಫೋಟೋ ನೋಡಿ, ಆಟವಾಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ್ದ ಶಾಸಕರಿಗೆ ಬಿಜೆಪಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದು, ಮೂರು ದಿನಗಳೊಳಗೆ ನೋಟಿಸ್‌ಗೆ ಉತ್ತರಿಸುವಂತೆ ಸೂಚಿಸಿದೆ.
ರಾಜ್ಚ ಬಿಜೆಪಿ ಶಿಸ್ತು ಸಮಿತಿ ಸಂಚಾಲಕರಾದ ರಘುನಾಥರಾಮ್ ಮಲ್ಕಾಪುರೆ ಅವರು ಮೊಬೈಲ್‌ನಲ್ಲಿ ಫೋಟೋ ನೋಡಿದ್ದ ಔರಾದ್ ಶಾಸಕ ಪ್ರಭು ಚೌವಾಣ್ ಮತ್ತು ಹಿರೇಕೆರೂರು ಶಾಸಕ ಯು.ಬಿ ಬಣಕಾರ ಅವರಿಗೆ ಇಂದು ನೋಟಿಸ್ ಜಾರಿಗೊಳಿಸಿದೆ.
ಡಿ.10ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭೆ ಕಲಾಪದ ವೇಳೆ ಶಾಸಕರು ಮೊಬೈಲ್‌ನಲ್ಲಿ ಚಿತ್ರಗಳನ್ನು ವೀಕ್ಷಿಸಿದ್ದು, ಇದು ಖಾಸಗಿ ಸುದ್ದಿವಾಹಿನಿ ಹಾಗೂ ದಿನಪತ್ರಿಕೆಗಳಲ್ಲಿ ಪ್ರಸಾರಗೊಂಡಿತ್ತು. ಇದು ಗಂಭೀರ ವರ್ತನೆಯಾಗಿದ್ದು, ಇದರಿಂದ ಪಕ್ಷಕ್ಕೆ ಮುಜುಗರ ಉಂಟಾಗಿದೆ. ಪಕ್ಷ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ನೋಟಿಸ್ ತಲುಪಿದ ಮೂರು ದಿನಗಳಲ್ಲಿ ವಿವರಣೆ ನೀಡಬೇಕೇಂದು ಸೂಚನೆ ನೀಡಲಾಗಿದೆ.
ಘಟನೆ ಹಿನ್ನೆಲೆ
ಸದನದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ಪ್ರಭು ಚೌವಾಣ್ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಅವರ ಚಿತ್ರವನ್ನು ನೋಡುತ್ತಿದ್ದರು. ಯು.ಬಿ ಬಣಕಾರ ಅವರು ಕ್ಯಾಂಡಿಕ್ರಶ್ ಆಟವಾಡುತ್ತಿದ್ದರು. ಈ ಬಗ್ಗೆ ಸದನದಲ್ಲಿ ಗುರುವಾರ ಕೋಲಾಹಲಕ್ಕೆ ಕಾರಣವಾಗಿದ್ದು ಕಲಾಪ ಸಂಪೂರ್ಣವಾಗಿ ವ್ಯರ್ಥವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


