ಕಲ್ಲಿದ್ದಲು ಹಗರಣ: ಮಧು ಕೋಡಾ ಸೇರಿ ಏಳು ಮಂದಿ ವಿರುದ್ಧ ಚಾರ್ಜ್‌ಶೀಟ್

ನವದೆಹಲಿ: ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮಧು ಕೋಡಾ, ಜಾರ್ಖಂಡ್‌ನ ಪ್ರಧಾನ ಕಾರ್ಯದರ್ಶಿ ಅಶೋಕ್ ಕುಮಾರ್ ಬಸು ಸೇರಿದಂತೆ ಏಳು ಮಂದಿ ವಿರುದ್ಧ ಸಿಬಿಐ ಚಾರ್ಜ್‌ಶೀಟ್ ದಾಖಲಿಸಿದೆ.
ಸಿಬಿಐ ಆರೋಪಿಗಳ ವಿರುದ್ಧದ ಆರೋಪ ಪಟ್ಟಿಯನ್ನು ವಿಶೇಷ ಸಿಬಿಐ ಕೋರ್ಟ್‌ನ ನ್ಯಾಯಾದೀಶ ಭರತ್ ಭೂಷಣ್ ಅವರಿಗೆ ಸಲ್ಲಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಇನ್ನು ಒಂದೆರಡು ದಿನಗಳಲ್ಲಿ ಸಲ್ಲಿಸುವುದಾಗಿ ತನಿಖಾಧಿಕಾರಿಗಳು ನ್ಯಾಯಾಧೀಶರಿಗೆ ತಿಳಿಸಿದ್ದು, ಡಿಸೆಂಬರ್ 22ಕ್ಕೆ ಪರಿಗಣಿಸಲಾಗುವುದು ಎಂದು ನ್ಯಾಯಾಧೀಶರು ಹೇಳಿದ್ದಾರೆ.
ಮಧು ಕೋಡಾ ಮತ್ತು ಬಸು ಸೇರಿದಂತೆ ಕಲ್ಲಿದ್ದಲು ಮಾಜಿ ಕಾರ್ಯದರ್ಶಿ ಹೆಚ್.ಸಿ ಗುಪ್ತಾ ಮತ್ತು ಇಬ್ಬರು ಸಾರ್ವಜನಿಕ ಅಧಿಕಾರಿಗಳಾದ ಬಸಂತ್ ಕುಮಾರ್ ಭಟ್ಟಾಚಾರ್ಯ ಮತ್ತು ಬಿಪಿನ್ ಬಿಹಾರಿ ಸಿಂಗ್ ವಿರುದ್ಧ ಸಹ ಆರೋಪಪಟ್ಟಿ ಸಲ್ಲಿಸಲಾಗಿದೆ.
ವಿನಿ ಕಬ್ಬಿಣ ಮತ್ತು ಉಕ್ಕು ಉದ್ಯೋಗ್ ಲಿಮಿಟೆಟ್‌ನ ನಿರ್ದೇಶಕ ವೈಭವ್ ತುಲ್ಸ್ಯಾನ್ ಮತ್ತು ಖಾಸಗಿ ವ್ಯಕ್ತಿ ವಿಜಯ್ ಜೋಷಿ ಅವರನ್ನು ಹೆರಸನ್ನು ಸಿಬಿಐ ಅಧಿಕಾರಿಗಳು ಅಂತಿಮ ವರದಿಯಲ್ಲಿ ಸೇರಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 120ಬಿ(ಕ್ರಿಮಿನಲ್ ಸಂಚು), 420(ವಂಚನೆ) ಆರೋಪದಡಿ ಆರೋಪಪಟ್ಟಿಯನ್ನು ಸಿಬಿಐ ಸಲ್ಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


