ದೇಶ

ಶೀಘ್ರದಲ್ಲೇ ಕಾಂಗ್ರೆಸ್ ಮುಕ್ತ ಭಾರತ: ಅಮಿತ್ ಶಾ

ಶೀಘ್ರದಲ್ಲೇ ಭಾರತ ಕಾಂಗ್ರೆಸ್ ಮುಕ್ತ ದೇಶವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಶೀಘ್ರದಲ್ಲೇ ಕಾಂಗ್ರೆಸ್ ಮುಕ್ತ ಭಾರತ: ಅಮಿತ್ ಶಾ
Published On :

ನವದೆಹಲಿ: ಶೀಘ್ರದಲ್ಲೇ ಭಾರತ ಕಾಂಗ್ರೆಸ್ ಮುಕ್ತ ದೇಶವಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಮಿತ್ ಷಾ, ಕಾಂಗ್ರೆಸ್ ಪಕ್ಷ ನಿಧಾನವಾಗಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬರುತ್ತಿದ್ದು, ಆದಷ್ಟೂ ಬೇಗ ದೇಶ ಕಾಂಗ್ರೆಸ್‌ನಿಂದ ಮುಕ್ತಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ನಡೆಯುತ್ತಿರುವ ಚುನಾವಣೆಗಳನ್ನು ಗಮನಿಸಿದರೆ, ಕಾಂಗ್ರೆಸ್ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬರುತ್ತಿದೆ. ಅಲ್ಲದೇ ಕಾಂಗ್ರೆಸ್‌ನ್ನು ಜನತೆ ಧಿಕ್ಕರಿಸುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗಿ ತಿಳಿಯುತ್ತದೆ.

2014ರ ಲೋಕಸಭಾ ಚುನಾವಣೆಯಲ್ಲೇ ಜನತೆ ಬಿಜೆಪಿಯನ್ನು ನೇರವಾಗಿ ಆಯ್ಕೆ ಮಾಡಿ, ಕಾಂಗ್ರೆಸ್‌ನ್ನು ಕೈಬಿಟ್ಟಿದ್ದಾರೆ. ಇತರೇ ಯಾವುದೇ ರಾಜ್ಯಗಳಲ್ಲಿ ನಡೆದಿರುವ ವಿಧಾನಸಭಾ ಚುನಾವಣೆಯಲ್ಲಿ ಜನತೆ ಹೆಚ್ಚಾಗಿ ಬಿಜೆಪಿಗೆ ಮತ ಚಲಾಯಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳಿಗೆ ಧನ್ಯವಾದ ತಿಳಿಸಿದ ಅಮಿತ್ ಶಾ, ದೇಶದ ಅಭಿವೃದ್ಧಿಗಾಗಿ ಬಿಜೆಪಿ ದುಡಿಯಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.