ದೆಹಲಿ ಮೆಟ್ರೋ ನಿಲ್ದಾಣಕ್ಕೆ ಸರ್‌ಎಂವಿ ಹೆಸರು!
ದೆಹಲಿ ಮೆಟ್ರೋದ ನಿಲ್ದಾಣವೊಂದಕ್ಕೆ ಕನ್ನಡಿಗ, ಭಾರತ ರತ್ನ ಸರ್.ಎಂ...

ನವದೆಹಲಿ: ದೆಹಲಿ ಮೆಟ್ರೋದ ನಿಲ್ದಾಣವೊಂದಕ್ಕೆ ಕನ್ನಡಿಗ, ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ಅವರ ಹೆಸರಿಡಲು ದೆಹಲಿ ಸರ್ಕಾರ ನಿರ್ಧರಿಸಿದೆ.
ದೆಹಲಿಯಲ್ಲಿರುವ ಮೋತಿ ಬಾಗ್ ಮೆಟ್ರೋ ರೈಲು ನಿಲ್ದಾಣ ಇನ್ನು ಮುಂದೆ ಸರ್.ಎಂ. ವಿಶ್ವೇಶ್ವರಯ್ಯ ಮೋತಿ ಬಾಗ್ ರೇಲ್ವೆ ನಿಲ್ದಾಣವಾಗಿ ಮರು ನಾಮಕರಣಗೊಳ್ಳಲಿದೆ.
ಕೆಲವು ಮೆಟ್ರೋ ನಿಲ್ದಾಣಗಳನ್ನು ಮರು ನಾಮಕರಣ ಮಾಡಲು ದೆಹಲಿ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ದೆಹಲಿ ಸರ್ಕಾರ ಇತ್ತೀಚಿಗೆ ಸಮಿತಿಯೊಂದನ್ನು ರಚಿಸಿತ್ತು. ಸಮಿತಿ ನೀಡಿದ ಶಿಫಾರಸಿನಂತೆ ಮೋತಿ ಬಾಗ್ ರೇಲ್ವೆ ನಿಲ್ದಾಣ ಸೇರಿದಂತೆ ಒಟ್ಟು 10 ನಿಲ್ದಾಣಗಳನ್ನು ಮರುನಾಮಕರಣ ಮಾಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಕರ್ನಾಟಕದ ಸಂಸದರ ನಿಯೋಗವೊಂದು ಕೇಂದ್ರದ ಸಚಿವರನ್ನು ಭೇಟಿ ಮಾಡಿ, ದೆಹಲಿಯ ಯಾವುದಾದರೂ ಒಂದು ಮೆಟ್ರೋ ನಿಲ್ದಾಣಕ್ಕೆ ಸರ್.ಎಂ. ವಿಶ್ವೇಶ್ವರಯ್ಯ ಅವರ ಹೆಸರನ್ನು ಇಡುವಂತೆ ಮನವಿ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


