ಇಂಡೊನೇಷ್ಯಾ ಭೂಕುಸಿತ: 18 ಜನ ಸಾವು, ಹಲವರು ಕಾಣೆ

ಬಂಜಾರ್ನೆಗರ(ಇಂಡೋನೇಷ್ಯಾ): ಇಂಡೋನೇಷ್ಯಾದ ಜಾವಾ ಪ್ರಾಂತ್ಯದ ಬಂಜಾರ್ನೆಗರ ಜಿಲ್ಲೆಯಲ್ಲಿ ಸುರಿದ ಕುಂಭದ್ರೋಣ ಮಳೆಯಿಂದ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಕನಿಷ್ಠ 18 ಮಂದಿ ಸಾವನ್ನಪ್ಪಿದ್ದು, 90 ಜನರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಜಾವಾ ಪ್ರಾಂತ್ಯದ ಬಂಜಾರ್ನೆಗರ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೂಕುಸಿದ ಘಟನೆಯಲ್ಲಿ 105 ಮನೆಗಳು ನಿರ್ಣಾಮಗೊಂಡಿವೆ ಎಂದು ರಾಷ್ಟ್ರೀಯ ವಿಪತ್ತು ಪರಿಹಾರ ನಿರ್ವಹಣಾ ಪಡೆಯ ವಕ್ತಾರ ಪುರ್ವೊ ನುಗ್ರೊಹೊ ಅವರು ತಿಳಿಸಿದ್ದಾರೆ.
ಸೈನಿಕರು, ಪೊಲೀಸರು ಹಾಗೂ ಸ್ಥಳೀಯರು ಸೇರಿದಂತೆ ನೂರಾರು ರಕ್ಷಣಾ ಕಾರ್ಯಕರ್ತರು ಅವಶೇಷಗಳನ್ನು ಅಗೆಯುವ ಕಾರ್ಯದಲ್ಲಿ ನೆರವಾಗಿದ್ದಾರೆ. ಸುಮಾರು 420 ಜನರನ್ನು ತಾತ್ಕಾಲಿಕ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.
ಅವಶೇಷಗಳ ಅಡಿಯಿಂದ ನೆರವಿಗಾಗಿ ಯಾಚಿಸುತ್ತಿರುವ ಸಂತ್ರಸ್ತರ ದನಿಗಳು ಕೆಲವು ರಕ್ಷಣಾ ಕಾರ್ಯಕರ್ತರ ಕಿವಿಗೆ ಬಿದ್ದಿವೆ. ಆದರೆ ಸೂಕ್ತ ಸಲಕರಣೆಗಳ ಕೊರತೆಯಿಂದಾಗಿ ಸಂತ್ರಸ್ತರನ್ನು ತಲುಪಲು ಸಾಧ್ಯವಾಗುತ್ತಿಲ್ಲ ಎಂದಿರುವ ಅಸಹಾಯಕತೆಯನ್ನು ವಿವರಿಸಿರುವ ನುಗ್ರೊಹೊ, ‘ಕುಸಿದ ಮಣ್ಣು, ಒಡ್ಡೊಡ್ಡಾದ ಭೂಪ್ರದೇಶ ಹಾಗೂ ಪ್ರತಿಕೂಲ ವಾತಾವರಣ ರಕ್ಷಣಾ ಕಾರ್ಯಗಳಿಗೆ ಅಡ್ಡಿಯಾಗಿದೆ’ಎಂದಿದ್ದಾರೆ.
ರಕ್ಷಣಾ ಕಾರ್ಯಗಳಿಗೆ ಟ್ರ್ಯಾಕ್ಟರ್‌ಗಳು ಹಾಗೂ ಬುಲ್‌ಡೋಜರ್ ಬಳಸಿಕೊಳ್ಳಲಾಗಿದೆ. ಮಣ್ಣು ಹಾಗೂ ಮುದುಡಿರುವ ಮನೆಗಳಿಂದ ಈವರೆಗೂ 18 ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದೆ. ಕಾಣೆಯಾಗಿರುವ 90 ಜನರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾ ಮುಖ್ಯಸ್ಥ ಸುತೆದ್ಜೊ ಸ್ಲಾಮೆಟ್ ಉಟೊಮೊ ಅವರು ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ 11 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


