ದೇಶ

ರಾಷ್ಟ್ರಪತಿಗೆ ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶನಿವಾರ ಆ್ಯಂಜಿಯೋಪ್ಲಾಸ್ಟಿ...

ರಾಷ್ಟ್ರಪತಿಗೆ ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ
ರಾಷ್ಟ್ರಪತಿ ಪ್ರಣಬ್ ಮುಖರ್ಜಿ
Published On :

ನವದೆಹಲಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶನಿವಾರ ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಬೆಳಗ್ಗೆ ರಾಷ್ಟ್ರಪತಿಯವರು ಹೊಟ್ಟೆ ನೋವು ಎಂದು ಹೇಳಿದ್ದರಿಂದ ಅವರನ್ನು ಸೇನೆಯ ರಿಸರ್ಚ್ ಆ್ಯಂಡ್ ರೆಫರಲ್ ಆಸ್ಪತ್ರೆಗೆ ದಾಖಲಿಸಲಾಯಿತು.

ಬಳಿಕ ಅವರನ್ನು ಸಮಗ್ರ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ಈ ಸಂದರ್ಭದಲ್ಲಿ ವೈದ್ಯರು ಹೃದಯಕ್ಕೆ ರಕ್ತಪೂರೈಸುವ ನಾಳಗಳಲ್ಲಿ ಕೊಂಚ ತೊಂದರೆ ಇದ್ದುದನ್ನು ವೈದ್ಯರು ಪತ್ತೆ ಹಚ್ಚಿದರು.

ಹೀಗಾಗಿ ರಾಷ್ಟ್ರಪತಿಯವರಿಗೆ ಕೂಡಲೇ ಆ್ಯಂಡಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಿ ಪರಿಧಮನಿಯ ಸ್ಟೆಂಟ್ ಅಳವಡಿಸಲಾಯಿತು. ರಾಷ್ಟ್ರಪತಿಯವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯಾಧಿಕಾರಿ ತಿಳಿಸಿದ್ದಾರೆ. ಪ್ರಣಬ್ ಮುಖರ್ಜಿಯವರನ್ನು ಸೋಮವಾರ ಡಿಸ್ಚಾರ್ಜ್ ಮಾಡುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.