ಮಧುರೈ ಮೀನಾಕ್ಷಿ ದೇವಸ್ಥಾನದ ವೆಬ್‌ಸೈಟ್ ಹ್ಯಾಕ್
ದಕ್ಷಿಣ ಭಾರತದ ಖ್ಯಾತ ದೇವಾಲಯಗಳಲ್ಲಿ ಒಂದಾಗಿರುವ ಮಧುರೈ ಮೀನಾಕ್ಷಿ ದೇವಾಲಯದ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕರ್ಸ್‌ಗಳು ಹ್ಯಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮಧುರೈ: ದಕ್ಷಿಣ ಭಾರತದ ಖ್ಯಾತ ದೇವಾಲಯಗಳಲ್ಲಿ ಒಂದಾಗಿರುವ ಮಧುರೈ ಮೀನಾಕ್ಷಿ ದೇವಾಲಯದ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕರ್ಸ್‌ಗಳು ಹ್ಯಾಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಪೊಲೀಸ್ ಮೂಲಗಳು ತಿಳಿಸಿರುವಂತೆ ಭಾನುವಾರ ರಾತ್ರಿ ಹ್ಯಾಕರ್ಸ್‌ಗಳು ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದ್ದು, ದೇವಸ್ಥಾನಕ್ಕೆ ಸಂಬಂಧಿಸಿದ ಪ್ರಮುಖ ಮಾಹಿತಿಗಳನ್ನು ಅಪಹರಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೇ ವೆಬ್‌ಸೈಟ್ ಹ್ಯಾಕ್‌ಗೆ ಸಂಬಂಧಿಸಿದಂತೆ ದೇವಾಲಯದ ಆಡಳಿತ ಮಂಡಳಿ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ದೂರು ಸಲ್ಲಿಸಿದೆ.
ಆದರೆ ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಹೆಚ್ಚಿನ ಮಾಹಿತಿ ನಿರಾಕರಿಸಲಾಗಿದ್ದು, ಪೊಲೀಸ್ ಆಯುಕ್ತರಲ್ಲಿಯೂ ಮಾಧ್ಯಮಗಳಿಗೆ ಹೆಚ್ಚಿನ ಮಾಹಿತಿ ನೀಡದಂತೆ ದೇವಾಲಯ ಅಡಳಿತ ಮಂಡಳಿಯ ಸಿಬ್ಬಂದಿಗಳು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಧುರೈ ಪೊಲೀಸ್ ಆಯುಕ್ತ ಸಂಜಯ್ ಮಥುರ್ ಅವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿದ್ದು, ಈಗಾಗಲೇ ತನಿಖೆ ಆರಂಭವಾಗಿದೆ ಎಂದು ತಿಳಿದುಬಂದಿದೆ.
ದಕ್ಷಿಣ ಭಾರತದ ಖ್ಯಾತ ಮತ್ತು ಪುರಾತನ ದೇವಾಲಯಗಳಲ್ಲಿ ಒಂದಾಗಿರುವ ಮಧುರೈ ಮೀನಾಕ್ಷಿ ದೇವಾಲಯದಲ್ಲಿ ಸುಮಾರು 33 ಸಾವಿರಕ್ಕೂ ಅಧಿಕ ಶಿಲ್ಪಕಲಾಕೃತಿಗಳಿದ್ದು, ತನ್ನ ವಿಶಿಷ್ಟ ವಾಸ್ತುಶಿಲ್ಪದಿಂದಲೇ ದೇವಾಲಯ ವಿಶ್ವವ್ಯಾಪಿ ಪ್ರಸಿದ್ಧಿಗಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


