ಕಾರು ಅಡ್ಡಗಟ್ಟಿ ಸುಲಿಗೆ: ಇಬ್ಬರ ಸೆರೆ
ಹಲಸೂರು ಕೆರೆ ಸಮೀಪ ಕಾರು ಅಡ್ಡಗಟ್ಟಿ ಸುಲಿಗೆ ಮಾಡಿ...

ಬೆಂಗಳೂರು: ಹಲಸೂರು ಕೆರೆ ಸಮೀಪ ಕಾರು ಅಡ್ಡಗಟ್ಟಿ ಸುಲಿಗೆ ಮಾಡಿ ಪರಾರಿಯಾಗುತ್ತಿದ್ದ ಇಬ್ಬರು ಸುಲಿಗೆಕೋರರನ್ನು ಗಸ್ತಿನಲ್ಲಿದ್ದ ಭಾರತಿನಗರ ಪೊಲೀಸರು ಬಂಧಿಸಿದ್ದಾರೆ.
ಆರ್.ಟಿ. ನಗರ ಸುಲ್ತಾನ್‌ಪಾಳ್ಯ ನಿವಾಸಿ ಅನಿಲ್‌ಕುಮಾರ್ (38) ಹಾಗೂ ಕೋಲಾರ ಜಿಲ್ಲೆ ಮಾಲೂರು ಮೂಲದ ಫೈಜುಲ್ (45) ಬಂಧಿತರು.
ಶನಿವಾರ ರಾತ್ರಿ 8.30ರ ಸುಮಾರಿಗೆ ಸಿದ್ಧಾರ್ಥ ಎಂಬುವರು ತಮ್ಮ ಗೆಳತಿಯೊಂದಿಗೆ ಕಾರಿನಲ್ಲಿ ಹಲಸೂರು ಕೆರೆ ಬಳಿ ಹೋಗುತ್ತಿದ್ದಾಗ ಪಲ್ಸರ್ ಬೈಕ್‌ನಲ್ಲಿ ವೇಗವಾಗಿ ಬಂದು ಕಾರು ಅಡ್ಡಗಟ್ಟಿದ್ದಾರೆ.
ಏರುಧ್ವನಿಯಲ್ಲಿ ತಾವು ಕ್ರೈ ಬ್ರ್ಯಾಂಚ್ ಪೊಲೀಸರು, ಕೆಳಗಿಳಿಯಿರಿ ಎಂದು ಜೋರು ಮಾಡಿದ್ದಾರೆ. ಅಲ್ಲದೇ ಜೇಬಿಗೆ ಕೈ ಹಾಕಿ ಪರ್ಸ್‌ನಲ್ಲಿದ್ದ 1700 ನಗದು ಕಿತ್ತುಕೊಂಡು ಪರಾರಿಯಾಗುವ ಯತ್ನದಲ್ಲಿದ್ದರು. ಅದೇ ವೇಳೆ ಗಸ್ತಿನಲ್ಲಿದ್ದ ಪೊಲೀಸರು ಆರೋಪಿಗಳನ್ನು ಹಿಡಿದುಕೊಂಡಿದ್ದಾರೆ.
ಆರೋಪಿಗಳು ಸುಲಿಗೆ ಮಾಡಿದ 1700 ನಗದು, ಕೃತ್ಯಕ್ಕೆ ಬಳಸಿದ್ದ ಬೈಕ್ ಹಾಗೂ 2 ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


