ದೇಶ

ಸರ್ಕಾರಿ ಬಸ್‌ಗೆ ಲಾರಿ ಡಿಕ್ಕಿ: ಓರ್ವ ಸಾವು, 15 ಮಂದಿ ಗಾಯ

17 others injured 1 killed in a collision between a bus and a lorry on a hosur near Sambalapalyam in Tamilnadu.

ಸರ್ಕಾರಿ ಬಸ್‌ಗೆ ಲಾರಿ ಡಿಕ್ಕಿ: ಓರ್ವ ಸಾವು, 15 ಮಂದಿ ಗಾಯ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಕೇರಳ ಸರ್ಕಾರಕ್ಕೆ ಸೇರಿದ್ದ ಬಸ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ 15 ಮಂದಿ ಗಾಯಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾನೆ.

ಕೇರಳ ಸರ್ಕಾರಕ್ಕೆ ಸೇರಿದ್ದ ಬಸ್‌ವೊಂದು ತಮಿಳುನಾಡಿನ ಹೊಸೂರು ರಸ್ತೆಯ ಸಂಭಾಳಪಾಳ್ಯಂ ರಸ್ತೆಯಲ್ಲಿ ಚಲಿಸುತ್ತಿದ್ದಾಗ, ವೇಗವಾಗಿ ಬಂದ ಲಾರಿಯೊಂದು ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ರವೀಂದ್ರನ್ ಸ್ಥಳದಲ್ಲೇ ಮೃತಪಟ್ಟಿದ್ದು, ಬಸ್‌ನಲ್ಲಿದ್ದ 15 ಜನರಿಗೆ ಗಂಭೀರವಾಗಿ ಗಾಯಗಳಾಗಿವೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಿಮಿಸಿದ ಸೂಳಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.