ಜಿಎಸ್‌ಟಿ: ರಾಜ್ಯ,ಕೇಂದ್ರ ರಾಜಿ
ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಗೆ ಸಂಬಂಧಿಸಿ ಕೇಂದ್ರ...

ನವದೆಹಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಗೆ ಸಂಬಂಧಿಸಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಸೃಷ್ಟಿಯಾಗಿದ್ದ ಬಿಕ್ಕುಟ್ಟು ಕೊನೆಗೂ ಪರಿಹಾರವಾಗಿದೆ. ಪ್ರವೇಶ ಶುಲ್ಕವನ್ನು ಏಪ್ರಿಲ್ 2016ರಿಂದ ಹೊಸ ತೆರಿಗೆ ವ್ಯವಸ್ಥೆಯ ಭಾಗವಾಗಿಸಲು ರಾಜ್ಯ ಸರ್ಕಾರಗಳು ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಜಿಎಸ್‌ಟಿ ಯಿಂದ ಪೆಟ್ರೋಲಿಯಂ ಅನ್ನು ಹೊರಗಿಡಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.
ರಾಜ್ಯ ಸರ್ಕಾರಗಳಿಗೆ ಆಗುವ ನಷ್ಟವನ್ನು ತುಂಬಿಕೊಂಡು ವಿಚಾರವನ್ನು ಸಂವಿಧಾನ ತಿದ್ದುಪಡಿ ವಿಧೇಯಕದಲ್ಲಿ ಹೇಗೆ ಸೇರ್ಪಡೆ ಮಾಡಬಹುದು ಎನ್ನುವ ಕುರಿತು ಕಾನೂನು ತಜ್ಞರ ಸಲಹೆ ಪಡೆಯಲಾಗುವುದು ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.
ಈ ಮೂಲಕ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಜಿಎಸ್‌ಟಿ ವಿಧೇಯಕಕ್ಕೆ ಅಂಗೀಕಾರ ಪಡೆಯುವ ಸರ್ಕಾರದ ಪ್ರಯತ್ನಕ್ಕೆ ಮೊದಲ ಗೆಲುವು ಸಿಕ್ಕಂತಾಗಿದೆ.
ಜಿಎಸ್‌ಟಿಗೆ ಸಂಬಂಧಿಸಿ ಕರ್ನಾಟಕ ಸೇರಿ ಏಳು ರಾಜ್ಯಗಳ ಹಣಕಾಸು ಸಚಿವರ ಜತೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ನಡೆಸಿದ ಸುದೀರ್ಘ ಮಾತುಕತೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಕರ್ನಾಟಕವಲ್ಲದೆ, ಜಮ್ಮು ಮತ್ತು ಕಾಶ್ಮೀರ, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ಹರ್ಯಾಣ, ಪಂಜಾಬ್ ರಾಜ್ಯಗಳು ಜಿಎಸ್‌ಟಿಗೆ ಸಂಬಂಧಿಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದವು.
ಉಳಿದ ರಾಜ್ಯಗಳ ಕಳವಳಗಳನ್ನು ಈಗಾಗಲೇ ಸರ್ಕಾರ ಪರಿಹರಿಸಿದೆ. ಜಿಎಸ್‌ಟಿಗೆ ಪ್ರವೇಶ ಶುಲ್ಕ ಹಾಗೂ ಪೆಟ್ರೋಲಿಯಂ ಉತ್ಪಗನ್ನಗಳನ್ನು ಜಿಎಸ್‌ಟಿಗೆ ಸೇರ್ಪಡೆಗೊಳಿಸುವ ವಿಚಾರ ಕುರಿತು ಕೇಂದ್ರ ಮತ್ತು ರಾಜ್ಯಗಳ ನಡುವೆ ಭಿನ್ನಮತ ಸೃಷ್ಟಿಯಾಗಿತ್ತು. ಪೆಟ್ರೋಲಿಯಂ ಮತ್ತು ಅದರ ಉತ್ಪನ್ನಗಳ ಮೇಲಿನ ತೆರಿಗೆಯಿಂದಲೇ ರಾಜ್ಯಗಳು ಶೇ.50 ರಷ್ಟು ಆದಾಯಗಳಿಸುತ್ತವೆ. ಹಾಗಾಗಿ ಇದನ್ನು ಜಿಎಸ್‌ಟಿಯಿಂದ ಹೊರಗಿಡಬೇಕೆಂದು ಒತ್ತಾಯಿಸುತ್ತಲೇ ಬಂದಿದ್ದವು. ಈ ಸಂಬಂಧ ಕಳೆದ ವಾರವಷ್ಟೇ ಒಂದು ಸುತ್ತಿನ ಮಾತುಕತೆ ನಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


