ಪೇಶಾ'ವಾರ್'ಗೆ ಪಾಕ್ ಮೌನ: ಸರ್ವಪಕ್ಷ ಸಭೆ ಕರೆದ ಷರೀಫ್
132 ಮಕ್ಕಳು ಸೇರಿದಂತೆ 148 ಮಂದಿಯನ್ನು ಬಲಿ ಪಡೆದ ಪೇಶಾವರದ ಸೇನಾ ಶಾಲೆಯ ಮೇಲಿನ ಉಗ್ರರ ದಾಳಿಯ...

ಪೇಶಾವರ: 132 ಮಕ್ಕಳು ಸೇರಿದಂತೆ 148 ಮಂದಿಯನ್ನು ಬಲಿ ಪಡೆದ ಪೇಶಾವರದ ಸೇನಾ ಶಾಲೆಯ ಮೇಲಿನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರು ಬುಧವಾರ ಸರ್ವಪಕ್ಷ ಸಭೆ ಕರೆದಿದ್ದಾರೆ.
ಶಾಲೆಯಲ್ಲಿ ನಡೆದ ಮಕ್ಕಳ ಮಾರಣ ಹೋಮದಿಂದ ಇಡೀ ಪಾಕಿಸ್ತಾನವೇ ಶೋಕ ಸಾಗರದಲ್ಲಿ ಮುಳಿಗಿದ್ದು, ದೇಶಾದ್ಯಂತ ಮೂರು ದಿನಗಳ ಕಾಲ ಶೋಕಾಚಾರಣೆ ಘೋಷಿಸಲಾಗಿದೆ. ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಪಾಕ್ ಪ್ರಧಾನಿ ನವಾಜ್ ಷರೀಫ್ ಅವರು ಪೇಶಾವರದಲ್ಲೇ ಇಂದು ಸಂಸದರ ಸರ್ವಪಕ್ಷ ಸಭೆ ಕರೆದಿದ್ದಾರೆ.
ಪಾಕಿಸ್ತಾನದ ಪ್ರಮುಖ ನಗರ ಪೇಶಾವರದ ಆರ್ಮಿ ಪಬ್ಲಿಕ್ ಸ್ಕೂಲ್‌ನಲ್ಲಿ ಮಂಗಳವಾರ ನಡೆದ ಹೇಡಿ ಭಯೋತ್ಪಾದಕ ದಾಳಿಯನ್ನು ವಿಶ್ವ ನಾಯಕರು ತೀವ್ರ ಖಂಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


