2 ವರ್ಷದಲ್ಲಿ 'ಮಾನವಸಹಿತ ಯಾನ' : ಡಾ.ರಾಧಾಕೃಷ್ಣನ್
ಇನ್ನೆರಡು ವರ್ಷದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮಾನವ ಸಹಿತ ಅಂತರಿಕ್ಷ ಯಾನ ಯೋಜನೆಯನ್ನು ಪೂರ್ಣಗೊಳಿಸಲಿದೆ ಎಂದು ಹೇಳಿದರು.

ಶ್ರೀಹರಿಕೋಟಾ: ಇನ್ನೆರಡು ವರ್ಷದಲ್ಲಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಮಾನವ ಸಹಿತ ಅಂತರಿಕ್ಷ ಯಾನ ಯೋಜನೆಯನ್ನು ಪೂರ್ಣಗೊಳಿಸಲಿದೆ ಎಂದು ಹೇಳಿದರು.
ಗುರುವಾರ ಬೆಳಗ್ಗೆ ಜಿಎಸ್‌ಎಲ್‌ವಿ ಮಾರ್ಕ್-3 ಯಶಸ್ವಿ ಉಡ್ಡಯನದ ಬಳಿಕ ಮಾತನಾಡಿದ ಇಸ್ರೋ ಅಧ್ಯಕ್ಷ ಡಾ.ರಾಧಾಕೃಷ್ಣನ್ ಅವರು, ಉಡಾವಣೆಗೆ ಸಹಕರಿಸಿದ ಎಲ್ಲ ಸಹೋದ್ಯೋಗಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಬಹುನಿರೀಕ್ಷಿತ ಜಿಎಸ್‌ಎಲ್‌ವಿ ಮಾರ್ಕ್-3 ರಾಕೆಟ್ ಅನ್ನು ನಭಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ನಾವು ನಿಗದಿ ಪಡಿಸಿದ ದೂರವನ್ನು ರಾಕೆಟ್ ನಿಗದಿತ ಸಮಯದಲ್ಲಿ ಕ್ರಮಿಸಿದೆ. ಮುಂದಿನ ತುಂಬಾ ಪ್ರಮುಖವಾದ ಯೋಜನೆ ಪ್ರಸ್ತುತ ಉಡಾವಣೆ ಉತ್ತಮ ಅಡಿಪಾಯ ಹಾಕಿಕೊಟ್ಟಿದೆ. ಎನ್ನೆರಡು ವರ್ಷದಲ್ಲಿ ಭಾರತದ ಬಹುದಿನಗಳ ಕನಸಾದ ಮಾನವ ಸಹಿತ ಬಾಹ್ಯಾಕಾಶ ಯಾನ ಯೋಜನೆಯನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಹೇಳಿದರು.
ವಿಜ್ಞಾನಿಗಳಿಗೆ ಪ್ರಧಾನಿ ಅಭಿನಂದನೆ
ಜಿಎಸ್‌ಎಲ್‌ವಿ ಮಾರ್ಕ್-3 ನೌಕೆಯ ಯಶಸ್ವಿ ಉಡಾವಣೆಯ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಟ್ವಿಟರ್‌ನಲ್ಲಿ ತಮ್ಮ ಸಂತಸ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಜಿಎಸ್‌ಎಲ್‌ವಿ ಮಾರ್ಕ್-3 ಯಶಸ್ವಿ ಉಡಾವಣೆಯಿಂದಾಗಿ ಇಸ್ರೋ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ. ಉಡಾವಣೆಯ ಯಶಸ್ವಿ ವಿಜ್ಞಾನಿಗಳ ಕಠಿಣ ಪರಿಶ್ರಮ ಮತ್ತು ಬುದ್ದಿವಂತಿಕೆಯ ಫಲವಾಗಿದೆ. ಯೋಜನೆಯಲ್ಲಿ ಪಾಲ್ಗೊಂಡಿರುವ ಎಲ್ಲ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


