ವಿರೋಧದ ಮಧ್ಯೆ ಮರುಮತಾಂತರ

ಫತೇಗಡ/ಆಗ್ರಾ: ಉತ್ತರಪ್ರದೇಶದ ಆಗ್ರಾದಲ್ಲಿ 300 ಮಂದಿ ಮುಸ್ಲಿಮರು ಹಿಂದೂ ಧರ್ಮಕ್ಕೆ ಮರು ಮತಾಂತರವಾದದ್ದು ವಿವಾದಕ್ಕೆ ಕಾರಣವಾಗಿತ್ತು.
ಈ ಕಿಡಿ ಆರುವ ಮುನ್ನವೇ 12 ಮಂದಿ ಸದಸ್ಯರಿರುವ ಮುಸ್ಲಿಂ ಕುಟುಂಬ ಹಿಂದೂ ಧರ್ಮ ಸ್ವೀಕರಿಸಿದೆ. ಕ್ರಿಸ್‌ಮಸ್ ದಿನದಂದು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೇ ವೇಳೆ, ಒಡಿಶಾದಲ್ಲಿ ಶನಿವಾರ 80 ಮಂದಿ ಆದಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲಾಗಿದೆ.
ಅಕಾಲಿ ದಳ ವಿರೋಧ: ದೇಶದೆಲ್ಲೆಡೆ ನಡೆಯುತ್ತಿರುವ ಮರುಮತಾಂತರಕ್ಕೆ ಎನ್‌ಡಿಎ ಮಿತ್ರಪಕ್ಷ ಶಿರೋಮಣಿ ಅಕಾಲಿದಳ(ಎಸ್‌ಎಡಿ)ವೂ ಅಪಸ್ವರ ಎತ್ತಿದೆ. ಮತಾಂತರವನ್ನು ದುರದೃಷ್ಟಕರ ಎಂದಿರುವ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್‌ಸಿಂಗ್ ಬಾದಲ್, ಬಲವಂತದ ಮತಾಂತರ ಸಿಖ್ ಧರ್ಮಕ್ಕೆ ವಿರುದ್ಧವಾದದ್ದು. ಇಂತಹುದನ್ನು ಧರ್ಮ ಯಾವತ್ತೂ ಒಪ್ಪಿಲ್ಲ ಎಂದೂ ಬಾದಲ್ ತಿಳಿಸಿದ್ದಾರೆ.
ಇದೇ ವೇಳೆ ಕೇರಳದಲ್ಲಿ ಘರ್ ವಾಪಸಿ ಕಾರ್ಯಕ್ರಮ ಮುಂದುವರಿಸುವುದಾಗಿ ವಿಶ್ವ ಹಿಂದೂ ಪರಿಷತ್ ಹೇಳಿದೆ. ಯಾರಿಗೆ ಹಿಂದೂ ಧರ್ಮದ ಬಗ್ಗೆ ಒಲವಿದೆಯೋ ಅವರಿಗೆ ತಮ್ಮ ಇಚ್ಛೆ ಪೂರೈಸಲು ಈ ಕಾರ್ಯಕ್ರಮ ನೆರವಾಗಲಿದೆ ಎಂದಿದೆ. ಜನವರಿ 1ರಂದು ಮತ್ತೊಂದು ತಂಡವನ್ನು ಹಿಂದೂ ಧರ್ಮಕ್ಕೆ ಮರು ಮತಾಂತರ ಮಾಡಲಾಗುವುದು ಎಂದು ವಿಹಿಂಪ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


