ನರಹಂತಕ ಹುಲಿ ಗುಂಡೇಟಿಗೆ ಬಲಿ
ಕಳೆದ ನಾಲ್ಕು ದಿನಗಳಿಂದ ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ನರಹಂತಕ ಹುಲಿಯನ್ನು...

ಜಾಂಬೋಟಿ(ಬೆಳಗಾವಿ): ಕಳೆದ ನಾಲ್ಕು ದಿನಗಳಿಂದ ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಕೊನೆಗೂ ನರಹಂತಕ ಹುಲಿಯನ್ನು ಖಾನಾಪುರ ತಾಲೂಕಿನ ಕೊಂಗಳ ಗ್ರಾಮದಲ್ಲಿ ಭಾನುವಾರ ರಾತ್ರಿ 8.15 ಗಂಟೆ ಸುಮಾರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ನರಹಂತಕ ಹುಲಿಗೆ ಕಾಲರ್ ಐಡಿ ಅಳವಡಿಸಲಾಗಿದ್ದು, ಅದೇ ಹುಲಿ ಎಂದು ಖಚಿತ ಪಡಿಸಿಕೊಂಡ ಬಳಿಕವೇ ಗುಂಡು ಹಾರಿಸಲಾಗಿದೆ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಖಾನಾಪುರ ತಹಸೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕವೇ ಹುಲಿಗೆ ಎಷ್ಟು ಗುಂಡು ತಾಗಿವೆ ಎಂಬುದು ಗೊತ್ತಾಗಲಿದೆ. ನಾಲ್ಕು ದಿನಗಳ ಹಿಂದೆ ಜಾಂಬೋಟಿ ಸಮೀಪದ ಮರಗಾಯಿ ಗ್ರಾಮದ ಗರ್ಭಿಣಿ ಮೇಲೆ ದಾಳಿ ಮಾಡಿದ ಬಳಿಕ ಜೀವಂತವಾಗಿ ಹಿಡಿಯಿರಿ ಅಥವಾ ಗುಂಡಿಕ್ಕಿ ಕೊಲ್ಲಿರಿ ಎಂದು ಸರ್ಕಾರ ಆದೇಶ ನೀಡಿತ್ತು. ಬಳಿಕ ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ, ಚಾಮರಾಜನಗರ, ಬಂಡಿಪುರ, ದಾಂಡೇಲಿ, ಬಿಳಿಗಿರಿ ರಂಗನಬೆಟ್ಟ, ಹುಲಿ ಸಂರಕ್ಷಣಾ ಪಡೆ, ಶಾರ್ಪ್ ಶೂಟರ್ಸ್ ಸೇರಿದಂತೆ 300ಕ್ಕೂ ಅಧಿಕ ಸಿಬ್ಬಂದಿ ಹಗಲಿರಳು ಕಾರ್ಯಾಚರಣೆ ನಡೆಸುತ್ತಿದ್ದರು. ಇಲ್ಲಿಯವರೆಗೆ 8 ಪ್ರಾಣಿಗಳನ್ನು, ಇಬ್ಬರು ಮಹಿಳೆಯರನ್ನು ಬಲಿ ತೆಗೆದುಕೊಂಡಿದ್ದ ನರ ಭಕ್ಷ ಹುಲಿ ಕೊನೆಗೂ ಅರಣ್ಯ ಇಲಾಖೆಯವರೆ ಗುಂಡೇಟಿಗೆ ಬಲಿಯಾಗಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
ಸಾರ್ಥಕ ಆಪರೇಷನ್
ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಸಿಬ್ಬಂದಿಗೆ ಆ ಹುಲಿಯ ಮೈ ಮೇಲಿನ ಪಟ್ಟಿಗಳ ಬಗ್ಗೆ ಅಧಿಕೃತವಾದ ಭಾವಚಿತ್ರ ನೀಡಿದ್ದರಿಂದ ಅದೇ ಹುಲಿಯನ್ನು ಬೇಟೆಯಾಡಲು ಸುಲಭವಾಯಿತು ಎಂದು ಸಿಬ್ಬಂದಿಯೊಬ್ಬರು ಹೇಳಿದ್ದಾರೆ. ಕೊನೆಗೂ 4 ದಿನಗಳ ಕಾಲ ಕಾರ್ಯಾಚರಣೆ ನಡೆಸಿದ್ದಕ್ಕೂ ಸಾರ್ಥಕವಾಯಿತು ಎಂದು ಹಿರಿಯ ಅಧಿಕಾರಿಯೊಬ್ಬರು ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


