ದೇಶ

ನಕಲಿ ಎನ್‌ಕೌಂಟರ್ ಪ್ರಕರಣ: ಅಮಿತ್ ಶಾಗೆ ಕ್ಲೀನ್ ಚಿಟ್

ಲಷ್ಕರ್ ಇ ತೋಯ್ಬಾ ಶಂಕಿತ ಭಯೋತ್ಪಾದಕ ಸೊಹ್ರಾಬುದ್ದೀನ್ ಶೇಕ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ...

ನಕಲಿ ಎನ್‌ಕೌಂಟರ್ ಪ್ರಕರಣ: ಅಮಿತ್ ಶಾಗೆ ಕ್ಲೀನ್ ಚಿಟ್
ಬಿಜೆಪಿ ಅಧ್ಯಕ್ಷ ಅಮಿತ್ ಶಾ
Published On :

ಮುಂಬೈ: ಲಷ್ಕರ್ ಇ ತೋಯ್ಬಾ ಶಂಕಿತ ಭಯೋತ್ಪಾದಕ ಸೊಹ್ರಾಬುದ್ದೀನ್ ಶೇಕ್ ನಕಲಿ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರಿಗೆ ಸಿಬಿಐ ಕ್ಲೀನ್ ಚೀಟ್ ನೀಡಿದೆ.

ಸೊಹ್ರಾಬುದ್ದೀನ್ ಅವರನ್ನು ಅಪಹರಿಸುವ ಹಾಗೂ ಹತ್ಯೆ ನಡೆಸುವ ಕ್ರಿಮಿನಲ್ ಪಿತೂರಿ ನಡೆಸಿದ ಪ್ರಕರಣದಲ್ಲಿ ಶಾಮೀಲಾಗಿರುವ ಆರೋಪ ಎದುರಿಸುತ್ತಿದ್ದ ಅಮಿತ್ ಶಾ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಕ್ಲೀನ್ ಚೀಟಿ ನೀಡಿದ್ದು, ಆರೋಪದಿಂದ ಮುಕ್ತರಾಗಿದ್ದಾರೆ.

ಗುಜರಾತ್‌ನ ಗಾಂಧಿನಗರದಲ್ಲಿ ನವೆಂಬರ್ 2005ರಲ್ಲಿ ಸೊಹ್ರಾಬುದ್ದೀನ್ ಶೇಕ್‌ನ ಎನ್‌ಕೌಂಟರ್ ನಡೆದಿತ್ತು. ಪ್ರಕರಣದ ಕುರಿತ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿತ್ತು. ತನಿಖೆಯ ವರದಿಯಲ್ಲಿ ಇದೊಂದು ನಕಲಿ ಎನ್‌ಕೌಂಟರ್ ಎಂದು ಸಿಬಿಐ ಹೇಳಿತ್ತಲ್ಲದೇ ಪ್ರಕರಣದಲ್ಲಿ ಅಮಿತ್ ಶಾ ಅವರ ಪಾತ್ರವಿದೆ ಎಂದು ಆರೋಪಿಸಿತ್ತು. ನಂತರ ಸೊಹ್ರಾಬುದ್ದೀನ್ ಶೇಕ್ ಎನ್‌ಕೌಟಂರ್ ಪ್ರಕರಣದಲ್ಲಿ ತನ್ನ ಹೆಸರನ್ನು ಕೈ ಬಿಡುವಂತೆ ಕೋರಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಅರ್ಜಿಸಲ್ಲಿದ್ದರು. ಇದನ್ನು ವಿರೋಧಿಸಿದ್ದ ಸಿಬಿಐ ಪರ ವಕೀಲರು, ಪ್ರಕರಣದಲ್ಲಿ ಅಮಿತ್ ಶಾ ಭಾಗಿಯಾಗಿರುವುದಕ್ಕೆ ತನ್ನ ಬಳಿ ಸಾಕ್ಷಾಧಾರಗಳಿವೆ ಎಂದು ಹೇಳಿದ್ದರು.

ಪ್ರಕರಣದಲ್ಲಿ ಅಮಿತ್ ಶಾ ಅವರನ್ನು ಸಿಲುಕಿಸಲು ಕಾಂಗ್ರೆಸ್ ಪಕ್ಷವು ಸಿಬಿಐಯನ್ನು ಬಳಸಿಕೊಂಡಿದ್ದು, ವದಂತಿಗಳನ್ನು ಆಧರಿಸಿ ಒಬ್ಬ ವ್ಯಕ್ತಿಯ ವಿರುದ್ಧ ಆರೋಪ ಹೊರಿಸುವಂತಿಲ್ಲ ಎಂದು ಶಾ ಪರ ವಕೀಲ ಎಸ್.ವಿ. ರಾಜು ಸಿಬಿಐ ನ್ಯಾಯಾಲಯದ ವಿಚಾರಣೆ ವೇಳೆ ವಾದ ಮಂಡಿಸಿದ್ದರು. ವಾದ ವಿವಾದಗಳನ್ನು ಆಲಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯವು ಪ್ರಕರಣದ ವಾದ ಮಂಡನೆ ಮಂಗಳವಾರಕ್ಕೆ ಮುಂದೂಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.