ಭಾರತಕ್ಕೆ ಒಬಾಮಾ ಭೇಟಿ: ಉನ್ನತ ಮಟ್ಟದ ಸಭೆ ನಡೆಸಿದ ರಾಜನಾಥ್ ಸಿಂಗ್

ನವದೆಹಲಿ: ಜನವರಿ 26ರ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮಾ ಆಗಮಿಸುತ್ತಿದ್ದು, ಉಗ್ರ ಸಂಘಟನೆಗಳು ವಿದ್ವಂಸಕ ಕೃತ್ಯ ಎಸಗುವ ಸಾಧ್ಯತೆ ಇರುವುದರಿಂದ ಸೂಕ್ತ ಭದ್ರತಾ ಕೈಗೊಳ್ಳುವ ಸಲುವಾಗಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಉನ್ನತ ಮಟ್ಟದ ಭದ್ರತಾ ಸಭೆ ನಡೆಸಿದರು.
ಬೆಂಗಳೂರಿನ ಚರ್ಚ್‌ಸ್ಟ್ರೀಟ್ ಬಳಿ ಭಾನುವಾರ ಬಾಂಬ್ ಸ್ಫೋಟ ಸಂಭವಿಸಿದ್ದು, ಇದು ಸಿಮಿ ಉಗ್ರ ಸಂಘಟನೆಯ ಕೃತ್ಯ ಎಂದು ಶಂಕಿಸಲಾಗಿದೆ. ಅಲ್ಲದೆ ಕೆಲ ಉಗ್ರ ಸಂಘನಗಳು ದೇಶಾದ್ಯಂತ ಬಾಂಬ್ ಸ್ಫೋಟ ನಡೆಸುವುದಾಗಿ ಬೆದರಿಕೆ ಆಗಿರುವ ಹಿನ್ನೆಲೆಯಲ್ಲಿ ಒಬಾಮ ಭೇಟಿ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲುವ ಹಾಗೂ ಸೂಕ್ತ ಮಾರ್ಗದರ್ಶನ ನೀಡುವ ಸಲುವಾಗಿ ರಾಜನಾಥ್ ಸಿಂಗ್ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.
ಉನ್ನತ ಮಟ್ಟದ ಭದ್ರಾತ ಸಭೆಯಲ್ಲಿ ಸೇನಾ ಮುಖ್ಯಸ್ಥ ದಲ್‌ಬೀರ್ ಸಿಂಗ್ ಸುಹಾಗ್, ಕೇಂದ್ರ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ವಿದೇಶಾಂಗ ಕಾರ್ಯದರ್ಶಿ ಸುಜಾತ ಸಿಂಗ್ ಹಾಗೂ ಗುಪ್ತಚರ ದಳದ ಮುಖ್ಯಸ್ಥರು ಸಭೆಯಲ್ಲಿ ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


