ಪ್ರತಿದಾಳಿಯೊಂದಿಗೆ ಪ್ರತ್ಯುತ್ತರ ನೀಡಿ: ಪರಿಕ್ಕರ್
ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನದ ಸೇನೆಯ ವಿರುದ್ಧ ಸಂಪೂರ್ಣ...

ನವದೆಹಲಿ: ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಪಾಕಿಸ್ತಾನದ ಸೇನೆಯ ವಿರುದ್ಧ ಸಂಪೂರ್ಣ ಬಲದೊಂದಿಗೆ ಪ್ರತೀಕಾರ ತೀರಿಸಿಕೊಳ್ಳುವಂತೆ ಭಾರತೀಯ ಗಡಿ ಭದ್ರತಾ ಸೇನೆಗೆ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸೂಚಿಸಿದ್ದಾರೆ.
ಜಮ್ಮುವಿನ ಪಲ್ಲನ್‌ವಾಲಾ ಗಡಿಪ್ರದೇಶದಲ್ಲಿ ಪಾಕಿಸ್ತಾನ ಮಂಗಳವಾರ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮನೋಹರ್ ಪರಿಕ್ಕರ್ ಅವರು, ಕದನ ವಿರಾಮ ಉಲ್ಲಂಘನೆಯ ಸಂಖ್ಯೆಯನ್ನು ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆಯಾಗಿದೆ. ಆದರೆ ಅಂತರಾಷ್ಟ್ರೀಯ ಗಡಿ ಪ್ರದೇಶದಲ್ಲಿ ಇದರ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.
ಪಾಕಿಸ್ತಾನ ತನ್ನ ಸೈನಿಕರಿಗೆ ಯಾವ ರೀತಿಯ ನಿರ್ದೇಶನಗಳನ್ನು ನೀಡುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ. ಭಾರತೀಯ ಸೈನಿಕರು ಕದನ ವಿರಾಮ ಉಲ್ಲಂಘನೆಯ ಒಪ್ಪಂದಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿದ್ದು, ಎಂದಿಗೂ ಒಪ್ಪಂದಕ್ಕೆ ವಿರುದ್ದವಾಗಿ ನಡೆದುಕೊಂಡಿಲ್ಲ. ಆದರೆ ಪಾಕಿಸ್ತಾನ ಒಪ್ಪಂದಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಿದ್ದು, ಪದೇ ಪದೇ ಕದನ ವಿರಾಮ ಉಲ್ಲಂಘನೆಯನ್ನು ಮಾಡುತ್ತಿದೆ.
ಕದನ ವಿರಾಮ ಉಲ್ಲಂಘಿಸುವ ವಿಷಯದಲ್ಲಿ ಭಾರತೀಯ ಸೈನಿಕರು ಹಿಂಜರಿಯಬಾರದು. ದಾಳಿಗೆ ತಕ್ಕಂತೆ ಇನ್ನಷ್ಟು ಶಕ್ತಿಯುತವಾಗಿ ಬಲ ಪ್ರಯೋಗ ಮಾಡಿ ಪ್ರತಿಕಾರ ತೀರಿಸಿಕೊಳ್ಳಬೇಕು ಎಂದು ಮನೋಹರ್ ಪರಿಕ್ಕರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


