ದೇಶ

ಪಿಕೆ ಉತ್ತಮ ಸಂದೇಶ ಸಾರುವ ಚಿತ್ರ: ಅಖಿಲೇಶ್ ಪ್ರಶಂಸೆ

ಇದೊಂದು ಉತ್ತಮ ಚಿತ್ರವಾಗಿದ್ದು, ಜನತೆಗೆ ಇದು ಉತ್ತಮ ಸಂದೇಶ ನೀಡುತ್ತದೆ...

ಪಿಕೆ ಉತ್ತಮ ಸಂದೇಶ ಸಾರುವ ಚಿತ್ರ: ಅಖಿಲೇಶ್ ಪ್ರಶಂಸೆ
ಪಿಕೆ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ ಅಖಿಲೇಶ್ ಯಾದವ್
Published On :

ಲಕ್ನೋ: ಇತ್ತೀಚೆಗೆ ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಕಂಡಿರುವ ಅಮೀರ್‌ಖಾನ್ ನಟನೆಯ ಪಿಕೆ ಚಿತ್ರಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯೂ ನೀಡಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

ಪಿಕೆ ಚಿತ್ರದಲ್ಲಿ ಹಿಂದು ಧರ್ಮವನ್ನು ಹಾಗೂ ದೇವತೆಗಳನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಲಾಗಿದೆ ಎಂದು ವಿಶ್ವಹಿಂದೂ ಪರಿಷತ್, ಬಜರಂಗ ದಳ, ಶಿವಸೇನೆ ಸೇರಿದಂತೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

ಉತ್ತರ ಭಾರತದ ಹಲವೆಡೆ ಪಿಕೆ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಸಿನಿಮಾ ಮಂದಿಗಳಿಗೆ ನುಗ್ಗಿದ ಕೆಲ ಹಿಂದೂಪರ ಸಂಘಟನೆಯ ಕಾರ್ಯಕರ್ತರು, ಪಿಕೆ ಚಿತ್ರದ ಪೋಸ್ಟರ್‌ಗಳಿಗೆ ಬೆಂಕಿ ಹಚ್ಚಿದರು.

ನಿನ್ನೆ ದೆಹಲಿಯಲ್ಲಿನ ಗಂಗಾ ಸಿನಿಮಾ ಮಂದಿರದಲ್ಲಿ ಬಜರಂಗ ದಳ ಕಾರ್ಯಕರ್ತರು, ಥಿಯೇಟರ್‌ನ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿ ಖಂಡನೆ ವ್ಯಕ್ತಪಡಿಸಿದ್ದರು.

ಈ ಮಧ್ಯೆ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಉತ್ತರ ಪ್ರದೇಶದಲ್ಲಿ ಪಿಕೆ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ, ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಅಮೀರ್‌ಖಾನ್‌ಗೆ ಕೊಂಚ ಸಂತಸ ತಂದಿದೆ. ಇದೇ ವೇಳೆ ಸುದ್ದಿಗೊರರೊಂದಿಗೆ ಮಾತನಾಡಿದ ಅಖಿಲೇಶ್, ಇದೊಂದು ಉತ್ತಮ ಚಿತ್ರವಾಗಿದ್ದು, ಜನತೆಗೆ ಇದು ಉತ್ತಮ ಸಂದೇಶ ನೀಡುತ್ತದೆ ಎಂದು ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.