ದೇಶ

ವರ್ಷಾಚರಣೆ ಮುಗಿಸಿ ಮರಳುವಾಗ ಟ್ರಕ್‌ಗೆ ಕಾರು ಡಿಕ್ಕಿ: 6 ಸಾವು

ವರ್ಷಾಚರಣೆ ಮುಗಿಸಿ ಮರಳುವಾಗ ಟ್ರಕ್‌ಗೆ ಕಾರು ಡಿಕ್ಕಿ: 6 ಸಾವು
ಕಾರು ಅಪಘಾತ
Published On :

ಕೊಲ್ಲಂ/ಕೇರಳ: ಹೊಸ ವರ್ಷಾಚರಣೆ ಸಂಭ್ರಮದಲ್ಲಿ ಮಿಂದೆದ್ದು, ಮನೆಗೆ ಮರಳುವಾಗ ಕಾರು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಲ್ಲಿದ್ದ ಆರು ಮಂದಿ ಮೃತಪಟ್ಟಿದ್ದಾರೆ.

ಕೇರಳದ ಕೊಲ್ಲಂನಲ್ಲಿ ಬಳಿ ಇಂದು ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಆರು ಮಂದಿ ಇಂಜಿನಿಯರ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಮೃತದೇಹಗಳನ್ನು ಹೊರ ತೆಗೆಯಲು ಪ್ರಯಾಸ ಪಡಬೇಕಾಗಿತ್ತು ಎಂದರು.

ಈ ಆರು ಮಂದಿ ವಿದ್ಯಾರ್ಥಿಗಳು ಟಿಕೆಎಂ ಕೊಲ್ಲಂ ಇಂಜಿನಿಯರ್ ಕಾಲೇಜಿನಲ್ಲಿ ಮೂರನೇ ವರ್ಷದ ವ್ಯಾಸಂಗ ಮಾಡುತ್ತಿದ್ದರು.

ಕೇರಳದ ವರ್ಕಲಾ ಬೀಚ್‌ನಲ್ಲಿ ನ್ಯೂ ಇಯರ್ ಪಾರ್ಟಿ ಮುಗಿಸಿ ಮನೆಗೆ ಮರಳಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಸಂದರ್ಭದಲ್ಲಿ ಮುಂದೆ ಹೋಗುತ್ತಿದ್ದ ಕಾರನ್ನು ಹಿಂದಿಕ್ಕಲು ಹೋಗಿ ಮುಂದೆ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.