ದೇಶ

ಪಾಕಿಸ್ತಾನದ ದಾರಿ ಅದಕ್ಕೆ ಮುಳುವಾಗಲಿದೆ: ರಾಜ್‌ನಾಥ್‌ಸಿಂಗ್

ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ...

ಪಾಕಿಸ್ತಾನದ ದಾರಿ ಅದಕ್ಕೆ ಮುಳುವಾಗಲಿದೆ: ರಾಜ್‌ನಾಥ್‌ಸಿಂಗ್
ಕೇಂದ್ರ ಗೃಹ ಸಚಿವ ರಾಜ್‌ನಾಥ್‌ಸಿಂಗ್
Published On :

ನವದೆಹಲಿ: ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ರಾಜ್‌ನಾಥ್‌ಸಿಂಗ್ ಪಾಕಿಸ್ತಾನಕ್ಕೆ ಇಂದಲ್ಲ ನಾಳೆ ತನ್ನದೇ ದಾರಿ ಮುಳುವಾಗಲಿದೆ ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಲ್ಲನ್‌ವಾಲಾ ಸೆಕ್ಟರ್‌ನಲ್ಲಿ ಮಂಗಳವಾರ ಭಾರತೀಯ ಬಿಎಸ್‌ಎಫ್ ಯೋಧರನ್ನು ಗುರಿಯಾಗಿಸಿಕೊಂಡು ಪಾಕ್ ಸೈನಿಕರು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಯೋಧನೋರ್ವ ಗಾಯಗೊಂಡಿದ್ದ ಅಲ್ಲದೆ, ಸಾಂಬಾ ಸೆಕ್ಟರ್‌ನಲ್ಲಿ ನಿನ್ನೆ ನಡೆದ ಗುಂಡಿನ ದಾಳಿಯಲ್ಲೂ ಓರ್ವ ಬಿಎಸ್‌ಎಫ್ ಯೋಧ ಸಾವನ್ನಪ್ಪಿದ್ದು, ಓರ್ವ ಯೋಧ ಗಾಯಗೊಂಡಿದ್ದರು.

ಈ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಗೃಹ ಸಚಿವ ರಾಜ್‌ನಾಥ್‌ಸಿಂಗ್, ರಾಜತಾಂತ್ರಿಕ ಅಧಿಕಾರಿಗಳು ಪಾಕಿಸ್ತಾನದೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ ಘಟನೆ ಕುರಿತಂತೆ ಈವರೆಗೂ ಪಾಕಿಸ್ತಾನದೊಂದಿಗೆ ಸಂವಹನ ಸಾಧ್ಯವಾಗಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.