ರಕ್ಷಣಾ ಸಚಿವನಾಗಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್?
ಸದ್ಯಕ್ಕೆ ಕೇಂದ್ರಲ್ಲಿ ಎರಡು ಪ್ರಮುಖ ಖಾತೆಗಳಾದ ಹಣಕಾಸು ಮತ್ತು ರಕ್ಷಣಾ ಖಾತೆಗಳನ್ನು ನೋಡಿಕೊಳ್ಳುತ್ತಿರುವ ಅರುಣ್ ಜೇಟ್ಲಿಯವರಿಗೆ ...

ನವದೆಹಲಿ: ಸದ್ಯಕ್ಕೆ ಕೇಂದ್ರಲ್ಲಿ ಎರಡು ಪ್ರಮುಖ ಖಾತೆಗಳಾದ ಹಣಕಾಸು ಮತ್ತು ರಕ್ಷಣಾ ಖಾತೆಗಳನ್ನು ನೋಡಿಕೊಳ್ಳುತ್ತಿರುವ ಅರುಣ್ ಜೇಟ್ಲಿಯವರಿಗೆ ರಕ್ಷಣಾ ಖಾತೆಯ ಜವಾಬ್ದಾರಿಯಿಂದ ಮುಕ್ತಿ ಸಿಗಲಿದೆ ಮತ್ತು ರಕ್ಷಣಾ ಖಾತೆಗೆ ನೂತನ ಮಂತ್ರಿಯಾಗಿ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಹೊಸ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನೆವ್ಂಬರ್ ೨೪ ರಂದು ಲೋಕಸಭೆಯ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದ್ದು ಅದಕ್ಕೂ ಮುಂಚಿತವಾಗಿ ಅರುಣ್ ಜೇಟ್ಲಿ ರಕ್ಷಣಾ ಸಚಿವ ಸ್ಥಾನ ತೊರೆಯಲಿದ್ದಾರೆ ಎಂದು ತಿಳಿದು ಬಂದಿದೆ.
ಆರ್ ಎಸ್ ಎಸ್ ನ ಮಾಜಿ ಪ್ರಚಾರಕ ಮನೋಹರ್ ಪರಿಕ್ಕರ್ ಅವರ ಈ ಹೊಸ ಸ್ಥಾನಕ್ಕೆ ಆರ್ ಎಸ್ ಎಸ್ ಬೆಂಬಲ ಕೂಡ ಇದೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


