ನಕಲಿ 'ವರ'ರಿಗೆ ಇನ್ನು ಗೇಟ್ ಪಾಸ್?
ವಿವಾಹವಾಗಿದ್ದರೂ ಸಿಂಗಲ್ ಎಂದು ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ...

ನವದೆಹಲಿ: ವಿವಾಹವಾಗಿದ್ದರೂ ಸಿಂಗಲ್ ಎಂದು ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಹೇಳಿಕೊಂಡಿದ್ದೀರಾ? ಸುಳ್ಳು ಪ್ರೋಪೈಲ್ ಹಾಕಿ ಹೆಣ್ಣುಮಕ್ಕಳನ್ನು ವಂಚಿಸಿದ್ದೀರಾ? ಹಾಗಿದ್ದರೆ ಎಚ್ಚರ. ಇನ್ನು ಮುಂದೆ ನಿಮ್ಮ ಆಟ ನಡೆಯುವುದಿಲ್ಲ!
ಇನ್ನು ವೆಬ್‌ಸೈಟ್‌ಗಳು ಸುಳ್ಳು ಹೇಳಿ ವಂಚಿಸುವವರನ್ನು ಒದ್ದೋಡಿಸುವ ಕಾರ್ಯ ಮಾಡಲಿದೆ. ಆನ್‌ಲೈನ್‌ನಲ್ಲಿ ವರನನ್ನು ಹುಡುಕುವ ವೇಳೆ ಆಗುತ್ತಿರುವ ವಂಚನೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ಅವರು ಈ ವಿಚಾರದಲ್ಲಿ ಮಧ್ಯಪ್ರವೇಶಿದ್ದಾರೆ.
ಭಾರತ್ ಮ್ಯಾಟ್ರಿಮನಿ, ಜೀವನ್‌ಸಾಥಿ.ಕಾಂನಂತಹ ವೆಬ್‌ಸೈಟ್‌ಗಳ ಪ್ರತಿನಿಧಿಗಳೊಂದಿಗೆ ಮನೇಕಾ ಸಭೆ ನಡೆಸಿದ್ದಾರೆ. ವೆಬ್‌ಸೈಟ್‌ಗಳಲ್ಲಿ ಭದ್ರತಾ ಅಂಶಗಳನ್ನು ಸೇರಿಸುವಂತೆ ಹಾಗೂ ನೋಂದಣಿ ಮಾಡಿಕೊಳ್ಳುವ ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಕಡ್ಡಾಯ ಎಂಬ ನಿಯಮ ಜಾರಿ ಗೊಳಿಸುವಂತೆ ಅವರು ಸಲಹೆ ನೀಡಿದ್ದಾರೆ.
ವಾರದ ಗಡುವು
ಆಧಾರ್ ಕಾರ್ಡ್ ಸಂಖ್ಯೆಯ ಮೂಲಕ ವ್ಯಕ್ತಿಯ ಗುರುತನ್ನು ಸುಲಭವಾಗಿ ಪತ್ತೆಹಚ್ಚಬಹುದು. ಹೀಗಾಗಿ ನಾನು ಈ ಸಲಹೆ ನೀಡಿದ್ದೇನೆ ಎಂದಿದ್ದಾರೆ ಮನೇಕಾ, ಈಗಿರುವ ನಿಯಮದಂತೆ, ವಿವಾಹ ವೆಬ್‌ಸೈಟ್‌ಗಳಿಗೆ ನೋಂದಣಿ ಮಾಡಿಕೊಳ್ಳಲು ಕೇವಲ ಮೊಬೈಲ್ ಸಂಖ್ಯೆ ಇದ್ದರೆ ಸಾಕು. ಮೊಬೈಲ್ ಸಂಖ್ಯೆಯನ್ನು ವೆಬ್‌ಪೋರ್ಟಲ್‌ನವರೇ ಪರಿಶೀಲನೆ ನಡೆಸುತ್ತಾರೆ. ಆದರೆ ಇದರಿಂದ ವ್ಯಕ್ತಿ ಸುಳ್ಳು ಹೇಳುತ್ತಿದ್ದಾನೆಯೇ ಎಂಬುದು ಗೊತ್ತಾಗುವುದಿಲ್ಲ. ಹಾಗಾಗಿ ಪ್ರೊಪೈಲ್ ಹಾಕುವ ವ್ಯಕ್ತಿಗಳ ಆನ್‌ಲೈನ್ ಚಟುವಟಿಕೆಗಳನ್ನು ತಿಳಿದುಕೊಳ್ಳಲು ಪರಿಣಾಮಕಾರಿ ತಂತ್ರ ರೂಪಿಸುವಂತೆ ವೆಬ್‌ಸೈಟ್‌ಗಳಿಗೆ ಸೂಚಿಸಲಾಗಿದೆ. ಇದಕ್ಕಾಗಿ ವೆಬ್‌ಸೈಟ್‌ಗಳಿಗೆ ಒಂದು ವಾರದ ಗಡುವು ನೀಡಲಾಗಿದೆ ಎಂದೂ ಮನೇಕಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


