ನಾಳೆ ಪರಿಕ್ಕರ್ ರಾಜಿನಾಮೆ, ಉ.ಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆ

ನವದೆಹಲಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಕೇಂದ್ರ ಸಂಪುಟ ಸೇರುವುದು ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಭಾನುವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದು, ಈ ವೇಳೆ ಪರಿಕ್ಕರ್ ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಳಿಕ ಅಂದರೆ, ಸೋಮವಾರ ಉತ್ತರ ಪ್ರದೇಶದ ಲಖನೌಗೆ ತೆರಳಿ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆಯ ಬಳಿಕ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ ಎಂದು ಪರಿಕ್ಕರ್ ಹೇಳಿದ್ದಾರೆ.
ಈ ಮಧ್ಯೆ, ಗೋವಾ ನೂತನ ಮುಖ್ಯಮಂತ್ರಿ ಆಯ್ಕೆ ಸಂಬಂಧ ಪಣಜಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಜೀವ್ ಪ್ರತಾಪ್ ರೂಡಿ ಅವರು ಕೇಂದ್ರ ವೀಕ್ಷಕರಾಗಿ ತೆರಳಿದ್ದಾರೆ.
ಇನ್ನು ಗೋವಾ ಮುಂದಿನ ಮುಖ್ಯಮಂತ್ರಿಯ ರೇಸ್‌ನಲ್ಲಿರುವ ಗೋವಾ ಸ್ಪೀಕರ್ ರಾಜೇಂದ್ರ ಅರ್ಲೆಕರ್ ಅವರು, ಪಕ್ಷ ತಮಗೆ ಯಾವುದೇ ಜವಾಬ್ದಾರಿ ನೀಡಿದರೂ, ಅದನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


