ದೇಶ

ಜಾತಿ ಆಧಾರಿತ ಗಣತಿ ಸರಿ: ಸುಪ್ರೀಂ

2010ರಲ್ಲಿ ಕೇಂದ್ರ ಸರ್ಕಾರ ಕೈಗೊಂಡಿದ್ದ ಜಾತಿ ಆಧಾರಿತ ಜನಗಣತಿ ಒಂದು...

ಜಾತಿ ಆಧಾರಿತ ಗಣತಿ ಸರಿ: ಸುಪ್ರೀಂ
ಸುಪ್ರೀಂಕೋರ್ಟ್
Published On :

ನವದೆಹಲಿ: 2010ರಲ್ಲಿ ಕೇಂದ್ರ ಸರ್ಕಾರ ಕೈಗೊಂಡಿದ್ದ ಜಾತಿ ಆಧಾರಿತ ಜನಗಣತಿ ಒಂದು ಸಮಯೋಚಿತ ನಿರ್ಧಾರ ಎಂದು ಸುಪ್ರೀಂಕೋರ್ಟ್ ಹೇಳಿದೆ.

ತನ್ನ ಜನಪರ ಯೋಜನೆಗಳನ್ನು ಜಾರಿಗೊಳಿಸಲು ಯಾವುದೇ ಮಾದರಿಯ ಗಣತಿಯನ್ನು ಕೇಂದ್ರ ಸರ್ಕಾರ ಕೈಗೊಳ್ಳಬಹುದು. ಇದರಿಂದ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಮೀಸಲು ನಿಗದಿಗೆ ಹೆಚ್ಚು ಸಹಾಯಕ ಎಂದು ನ್ಯಾಯಾಲಯ ಹೇಳಿದೆ. 2010ರಲ್ಲಿ ಅಂದಿನ ಕೇಂದ್ರ ಸರ್ಕಾರ ಜಾತಿ ಆಧಾರಿತ ಜನಗಣತಿ ನಡೆಸುವ ನಿರ್ಧಾರ ಕೈಗೊಂಡಿತ್ತು. ಇದರ ವಿರುದ್ಧ ಮದ್ರಾಸ್ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್ ಕೇಂದ್ರ ಸರ್ಕಾರದ ಕ್ರಮವನ್ನು ಆಕ್ಷೇಪಿಸಿ ತೀರ್ಪು ನೀಡಿತ್ತು. ಹೈಕೋರ್ಟ್‌ನ ಈ ನಿರ್ಧಾರವನ್ನು ಕೇಂದ್ರ ಸರ್ಕಾರ ಸುಪ್ರೀಂನಲ್ಲಿ ಪ್ರಶ್ನಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.