ದೇಶ

ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯನ ಬಂಧನ

ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ ಮಹಿಳೆಯರ ಸಾವಿಗೆ ಕಾರಣರಾದ ವೈದ್ಯನನ್ನು ಪೊಲೀಸರು...

ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯನ ಬಂಧನ
Published On :

ಬಿಲಾಸ್‌ಪುರ: ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಿ ಮಹಿಳೆಯರ ಸಾವಿಗೆ ಕಾರಣರಾದ ವೈದ್ಯನನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಸುಮಾರು 83 ಮಹಿಳೆಯರಿಗೆ ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸಿ, 13 ಮಹಿಳೆಯರ ಸಾವಿಗೆ ಕಾರಣರಾದ ವೈದ್ಯನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಳೆದ ರಾತ್ರಿ ಬೋಲಾದ ಬಜಾರ್‌ನಲ್ಲಿ ಲ್ಯಾಪರೋಸ್ಕೋಪಿಕ್ ಸರ್ಜನ್ ಡಾ. ಆರ್.ಕೆ ಗುಪ್ತಾ ಅವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಚತ್ತೀಸ್‌ಗಡ್‌ನ ಬಿಲಾಸ್‌ಪುರದಲ್ಲಿ ಕಳೆದ ಶನಿವಾರ ಸರ್ಕಾರ ಆಯೋಜಿಸಿದ್ದ ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ, ಶಸ್ತ್ರಚಿಕಿತ್ಸೆಯ ನಂತರ 13 ಮಹಿಳೆಯರು ಸಾವನ್ನಪ್ಪಿದ್ದರು. ಬಿಲಾಸ್ ಪುರದಲ್ಲಿ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ 80ಕ್ಕೂ ಹೆಚ್ಚು ಮಹಿಳೆಯರು ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.